June 17, 2025 2:02 am

ಶಿವಾನಂದ‌ ಮೆಂತೆ, ಸಂಪಾದಕ
ಸುದ್ದಿ ಈ‌ದಿನ‌ ಕನ್ನಡ‌ ದಿನಪತ್ರಿಕೆ

Home » ಸುದ್ದಿ » ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ : ಅತಿಥಿ ಉಪನ್ಯಾಸಕರು, ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ : ಅತಿಥಿ ಉಪನ್ಯಾಸಕರು, ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಯಾದಗಿರಿ : 08.ಮೇ 25: 2025-26ನೇ ಸಾಲಿನಲ್ಲಿ ಯಾದಗಿರಿ ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಉಪನ್ಯಾಸಕರು, ಶಿಕ್ಷಕರ ಹುದ್ದೆಗಳಿಗೆ ಎದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ತಾತ್ಕಾಲಿಕವಾಗಿ ಅತಿಥಿ ಉಪನ್ಯಾಸಕರು, ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಯಾದಗಿರಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಭಾಗ್ಯಶ್ರೀ ಕುಂಬಾರ ಅವರು ತಿಳಿಸಿದ್ದಾರೆ.

     ಬೆಂಗಳೂರು ಅಲ್ಪಸಂಖ್ಯಾತರ ನಿರ್ದೇಶನಾಲಯ ನಿರ್ದೇಶಕರ ಪತ್ರದನ್ವಯ 2025-26ನೇ ಸಾಲಿನ ಯಾದಗಿರಿ ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ ವಸತಿ ಪದವಿ ಪೂರ್ವ ಕಾಲೇಜು ಮತ್ತು ಮೌಲಾನಾ ಆಜಾದ್ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ಉಪನ್ಯಾಸಕರು ಹಾಗೂ ಡಾ.ಎ.ಪಿ.ಜೆ. ಅಬ್ದುಲ್ ಕಲಾಂ ವಸತಿ ಶಾಲೆ, ಮೊರಾರ್ಜಿ ದೇಸಾಯಿ ವಸತಿ ಶಾಲೆ, ಮೌಲಾನಾ ಆಜಾದ್ ಮಾದರಿ ಶಾಲೆಯಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ಎದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ತಾತ್ಕಾಲಿಕವಾಗಿ ಅತಿಥಿ ಉಪನ್ಯಾಸಕರು, ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.  TET, NET ಆದ ಅಭ್ಯರ್ಥಿಗಳಿಗೆ ಪ್ರತಿನಿಧ್ಯ ನೀಡಲಾಗುವುದು, ಇಚ್ಚಿಸುವ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಗಳನ್ನು ವೆಬ್ ಸೈಟ್  dom.karnataka.gov.inನಲ್ಲಿ ಜಿಲ್ಲಾ ಕಛೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಲ್ಲಿ ಅರ್ಜಿ ಪಡೆದು ಭರ್ತಿ ಮಾಡಿ ಅಗತ್ಯ ದಾಖಲಾತಿಗಳನ್ನು ಲಗತ್ತಿಸಿ, ಸಂಬAಧಪಟ್ಟ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಕಛೇರಿ ಸಮಯದಲ್ಲಿ 2025ರ ಮೇ 19ರ ಒಳಗೆ ಅರ್ಜಿಸಲ್ಲಿಸಬೇಕು.

     ಹೆಚ್ಚಿನ ಮಾಹಿತಿಗಾಗಿ : ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಗಳ ಕಾರ್ಯಾಲಯ, ಕೋಠಡಿ ಸಂಖ್ಯೆ ಸಿ-7, ಮೊದಲನೇ ಮಹಡಿ, ಜಿಲ್ಲಾ ಕಛೇರಿಗಳ ಸಂಕೀರ್ಣ (ಮಿನಿ ವಿಧಾನ ಸೌಧ) ಚಿತ್ತಾಪುರ ರಸ್ತೆ, ಯಾದಗಿರಿ ಕಛೇರಿ ದೂ.ಸಂ.08473253235, ಶಹಾಪುರ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ದೂ.ಸಂ.8095971486, ಸುರಪುರ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ದೂ.ಸಂ.7795592068, ಯಾದಗಿರಿ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ದೂ.ಸಂ.9731090143ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article

Facebook
X
WhatsApp
Telegram

Leave a Reply

Your email address will not be published. Required fields are marked *

Cricket Live

Stock Market

Astrology

Gold & Silver Price