ಬೀದರ 9.ಮೇ.25:- 2025ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1ರಲ್ಲಿ ಉತ್ತೀರ್ಣರಾಗದ ವಿದ್ಯಾರ್ಥಿಗಳಿಗೆ ಪರೀಕ್ಷೆ-2ನ್ನು ದಿನಾಂಕ: 26-05-2025 ರಿಂದ 02-06-2025ರವರೆಗೆ ನಡೆಸಲಾಗುತ್ತಿದೆ. ಪರೀಕ್ಷೆ-1ರಲ್ಲಿ ನೊಂದಾಯಿಸಿಕೊAಡು ಉತ್ತೀರ್ಣರಾಗದ ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆ-2ರಲ್ಲಿ ನೊಂದಾಯಿಸಲು ಯಾವುದೇ ಶುಲ್ಕ ಪಡೆಯುವುದಿಲ್ಲ. ಕಾರಣ ಜಿಲ್ಲೆಯ ಪರೀಕ್ಷೆ-1ರಲ್ಲಿ ಉತ್ತೀರ್ಣರಾಗದ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳು ಈ ಸದುಪಯೋಗಪಡಿಸಿಕೊಳ್ಳಬೇಕೆಂದು ಜಿಲ್ಲಾಧಿಕಾರಿಗಳಾದ ಶಿಲ್ಪಾ ಶಮಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Is