ರಾಯಚೂರು 23.ಮೆ 25: ಇಲ್ಲಿನ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯದಿಂದ 2025-26ನೇ ಸಾಲಿಗೆ ಪರಿಶಿಷ್ಟ ಪಂಗಡದ ಮೆಟ್ರಿಕ್ ಪೂರ್ವ 9 ಮತ್ತು 10ನೇ ತರಗತಿ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಸಲ್ಲಿಸಲು ಎನ್.ಎಸ್.ಪಿ. ಪೋರ್ಟಲ್‌ನಲ್ಲಿ ಓ.ಟಿ.ಆರ್ ಸಂಖ್ಯೆಯನ್ನು ಸೃಜಿಸುವ ರಾಜ್ಯ ವಿದ್ಯಾರ್ಥಿವೇತನ ತಂತ್ರಾAಶದಲ್ಲಿ ಅರ್ಜಿಯನ್ನು ಸಲ್ಲಿಸುವಂತೆ ಕೋರಲಾಗಿದೆ.
ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ಪ್ರವೇಶ ಪಡೆಯುವ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನಕ್ಕಾಗಿ ಭಾರತ ಸರ್ಕಾರದ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಅವರು ಅಭಿವೃದ್ಧಿಪಡಿಸಿರುವ ರಾಷ್ಟ್ರೀಯ ವಿದ್ಯಾರ್ಥಿವೇತನ ಪೋರ್ಟಲ್ (ಎನ್.ಎಸ್.ಪಿ) ನಲ್ಲಿ ಒಂದು ಬಾರಿ ನೋಂದಣಿ (ಒನ್ ಟೈಮ್ ರಿಜಿಸ್ಟರ್) ಸಂಖ್ಯೆಯನ್ನು ರಚಿಸಿ ತದನಂತರ ರಾಜ್ಯ ವಿದ್ಯಾರ್ಥಿವೇತನ ತಂತ್ರಾAಶದಲ್ಲಿ ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ವೆಬ್‌ಸೈಟ್ ವಿಳಾಸ: https://scholarships.gov.in ನಲ್ಲಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಕೇಂದ್ರ ಕಚೇರಿಯ ಸಹಾಯವಾಣಿ ಸಂಖ್ಯೆ: 080-22261789 ಅಥವಾ ಜಿಲ್ಲಾ ಕಚೇರಿಯ ದೂರವಾಣಿ ಸಂಖ್ಯೆ: 080532-220045, 9535828236 ಅಥವಾ ಆಯಾ ತಾಲೂಕು ಕಚೇರಿಗಳನ್ನು ಕಚೇರಿ ವೇಳೆಯಲ್ಲಿ ಭೇಟಿ ನೀಡಿ ಮಾಹಿತಿ ಪಡೆಯಬಹುದಾಗಿದೆ ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳಾದ ರಾಜೇಂದ್ರ ಜಲ್ದಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
