ರಾಯಚೂರು ಫೆ 20: ಸರ್ವಜ್ಞರು ಸಮಾಜದ ಸುಧಾರಣೆಗೆ ವಚನಗಳ ಮೂಲಕ ಸಾಕಷ್ಟು ಜಾಗೃತಿಯನ್ನು ಮೂಡಿಸಿದ್ದಾರೆ. ತತ್ವಾದರ್ಶಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಆಗ ಮಾತ್ರ ಉತ್ತಮ ಬದುಕನ್ನು ಕಟ್ಟಿಕೊಳ್ಳಲು ಸಾಧ್ಯವಾಗುತ್ತದೆ ಜೊತೆಗೆ ಪ್ರತಿಯೊಬ್ಬರು ಉತ್ತಮ ಜೀವನವನ್ನು ನಡೆಸಲು ಅನೇಕ ಸಂದೇಶಗಳನ್ನು ಜಗತ್ತಿಗೆ ನೀಡಿದ್ದಾರೆ ಎಂದು ಕಲ್ಯಾಣ ಕರ್ನಾಟಕ ಕುಂಬಾರ ಸಂಘದ ಅಧ್ಯಕ್ಷ ವೈ.ಸುರೇಂದ್ರಬಾಬು ಹೇಳಿದರು.
ಫೆ.20ರ ಗುರುವಾರ ದಂದು ನಗರದ ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗಮAದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಯಚೂರು ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಹಮ್ಮಿಕೊಂಡಿದ್ದ ಸಂತಕವಿ ಸರ್ವಜ್ಞ ಜಯಂತಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಸಮಾಜದಲ್ಲಿರುವ ಜನರ ಕಷ್ಟ, ಸುಖ, ದುಖಃಗಳನ್ನು ಕಳೆಯಲು ಧರೆಗೆ ಇಳಿದಿದ್ದ ದೇವರಾಗಿದ್ದ ಸರ್ವಜ್ಞರು, ಜನರನ್ನು ಸನ್ಮಾರ್ಗದಲ್ಲಿ ಕೊಂಡೋಯ್ಯಲು ಸಾಕಷ್ಟು ಶ್ರಮಿಸಿದ್ದವರು. ಅವರ ತತ್ವಾದರ್ಶಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಆಗ ಮಾತ್ರ ಉತ್ತಮ ಬದುಕನ್ನು ಕಟ್ಟಿಕೊಳ್ಳಲು ಸಾಧ್ಯವಾಗುತ್ತದೆ ಎಂದರು. ಇದಕ್ಕೂ ಮೊದಲು ವೇದಿಕೆ ಮೇಲೆ ತಹಸೀಲ್ದಾರ್ ಸುರೇಶ ವರ್ಮಾ ಅವರು ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.
