ಯಾದಗಿರಿ : 03 ಮಾರ್ಚ್ 25 : ಯಾದಗಿರಿ ನಗರದ ಜಿಲ್ಲಾ ಸಮಾದೇಷ್ಟರು ಗೃಹ ರಕ್ಷಕ ದಳ ಕಛೇರಿ ವತಿಯಿಂದ ನಿರುಪಯುಕ್ತ ಸಾಮಾಗ್ರಿಗಳನ್ನು ಬಹಿರಂಗ ಹರಾಜು ಪ್ರಕ್ರಿಯೆಯನ್ನು 2025ರ ಮಾರ್ಚ್ 7 ರಂದು ಬೆಳಿಗ್ಗೆ 10 ಗಂಟೆಗೆ ನಿಗದಿಪಡಿಸಲಾಗಿದೆ ಎಂದು ಯಾದಗಿರಿ ಜಿಲ್ಲಾ ಸಮಾದೇಷ್ಟರು ಗೃಹ ರಕ್ಷಕ ದಳ ಯಾದಗಿರಿ ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಶ್ರೀ ಧರಣೇಶ ಎಸ್.ಪಿ ಅವರು ತಿಳಿಸಿದ್ದಾರೆ.
ನಿರುಪಯುಕ್ತ ಸಾಮಗ್ರಿಗಳನ್ನು ಗೃಹರಕ್ಷಕ ದಳ ಕಛೇರಿಯಲ್ಲಿ, ಕಛೇರಿ ಸಮಯದಲ್ಲಿ ವೀಕ್ಷಿಸಬಹುದಾಗಿರುತ್ತದೆ. ಈ ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸುವ ಇಚ್ಛೆಯುಳ್ಳವರು ಹೆಚ್ಚಿನ ಮಾಹಿತಿಗಾಗಿ ಮೊ.ನಂ.8970428778ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
