ಕಲಬುರಗಿ,ಫೆ.28: ಜಿಲ್ಲೆಯ ರೈತರ ಮಕ್ಕಳಿಗಾಗಿ 2025-26ನೇ ಸಾಲಿಗೆ ಚಂದ್ರಂಪಳ್ಳಿ ತೋಟಗಾರಿಕೆ ತರಬೇತಿ ಕೇಂದ್ರದಿಂದ 10 ತಿಂಗಳ ಕಾಲ ತರಬೇತಿ ನೀಡಲು ಉದ್ದೇಶಿಸಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ ಎಂದು ಕಲಬುರಗಿಯ ತೋಟಗಾರಿಕೆ ಉಪನಿರ್ದೇಶಕರು (ಜಿಲ್ಲಾ ಪಂಚಾಯತ್) ತಿಳಿಸಿದ್ದಾರೆ.
ತರಬೇತಿ ಪಡೆಯಲು ಬಯಸುವ ಅಭ್ಯರ್ಥಿಯು ಕನಿಷ್ಠ ಎಸ್.ಎಸ್.ಎಲ್.ಸಿ. ತರಗತಿಯನ್ನು ಕನ್ನಡ ವಿಷಯದೊಂದಿಗೆ ಪಾಸಾಗಿರಬೇಕು. ಅಭ್ಯರ್ಥಿಯು ಮಾನಸಿಕವಾಗಿ ಮತ್ತು ದೈಹಿಕವಾಗಿ ಆರೋಗ್ಯವಂತರಾಗಿರಬೇಕು ಮತ್ತು ಅವರ ಆಯ್ಕೆಯು ತೋಟಗಾರಿಕೆ ಪ್ರಯೋಗಿಕ ತರಬೇತಿಯಲ್ಲಿ ಹಮ್ಮಿಕೊಳ್ಳುವ ಚಟುವಟಿಕೆಗಳನ್ನು ಸ್ವಾವಲಂಬಿಯಾಗಿ ನಿರ್ವಹಿಸಲು ಶಕ್ತನಾಗಿರಬೇಕು ಹಾಗೂ ಚಟುವಟಿಕೆ ನಿರ್ವಹಿಸಲು ಸಾಧ್ಯವಾಗದಂತಹ ಯಾವುದೇ ದೈಹಿಕ ನ್ಯೂನ್ಯತೆಯಿಂದ ಮುಕ್ತಾರಾಗಿರಬೇಕು ಎಂದು ಅವರು ತಿಳಿಸಿದ್ದಾರೆ.
ಅರ್ಜಿ ಸಲ್ಲಿಸುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಅಂಗವಿಕಲ ಅಭ್ಯರ್ಥಿಗಳು ಕನಿಷ್ಟ 18 ಮತ್ತು ಗರಿಷ್ಠ 33 ವರ್ಷ ಮೀರಿರಬಾರದು. ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಕನಿಷ್ಟ 33 ರಿಂದ ಗರಿಷ್ಠ 65 ವರ್ಷ ಮೀರಿರಬಾರದು ಹಾಗೂ ಇತರೆ ಅಭ್ಯರ್ಥಿಗಳಿಗೆ ಕನಿಷ್ಟ 18 ರಿಂದ ಗರಿಷ್ಠ 30 ವರ್ಷಗಳು ಮೀರಿರಬಾರದು.
https://horticulturedir.karnataka.gov.in
ಮಾರ್ಚ್ 1 ರಿಂದ 31ರ ವರೆಗೆ ಡೌನ್ ಲೋಡ್ ಮಾಡಿಕೊಂಡು ಭರ್ತಿ ಮಾಡಿದ ಅರ್ಜಿಯೊಂದಿಗೆ ನಿಗದಿತ ಶುಲ್ಕ ಭರಿಸಿದ ಚಲನ್, 2 ಪಾಸಪೋರ್ಟ್ ಅಳತೆಯ ಭಾವಚಿತ್ರ ಹಾಗೂ ಅಗತ್ಯ ದಾಖಲಾತಿಗಳನ್ನು ಲಗತ್ತಿಸಿ ಏಪ್ರಿಲ್ 1ರ ಸಂಜೆ 5.30 ಗಂಟೆಯೊಳಗಾಗಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು(ರಾವ), ಐವಾನ್-ಎ-ಶಾಹಿ ರಸ್ತೆ, ಕಲಬುರಗಿ-585102 ವಿಳಾಸಕ್ಕೆ ಸಲ್ಲಿಸಬೇಕು ಮತ್ತು ಇದೇ ಕಚೇರಿಯಲ್ಲಿ ಏಪ್ರಿಲ್ 8 ರಂದು ಬೆಳಿಗ್ಗೆ 10 ಗಂಟೆಗೆ ಜರುಗುವ ಸಂದರ್ಶನಕ್ಕೆ ಅಭ್ಯರ್ಥಿಗಳು ಆಗಮಿಸಬೇಕೆಂದು ಪ್ರಕಟಣೆಯಲ್ಲಿ ತಿಳಿಸಿದೆ.
ಹೆಚ್ಚಿನ ಮಾಹಿತಿಗೆ ಕಛೇರಿಯ ದೂರವಾಣಿ ಸಂಖ್ಯೆ:08472-229479 ಸಂಪರ್ಕಿಸಬಹುದಾಗಿದೆ.
