June 16, 2025 10:54 am

ಶಿವಾನಂದ‌ ಮೆಂತೆ, ಸಂಪಾದಕ
ಸುದ್ದಿ ಈ‌ದಿನ‌ ಕನ್ನಡ‌ ದಿನಪತ್ರಿಕೆ

Home » ಸುದ್ದಿ » ಪರಿಶಿಷ್ಟ ಜಾತಿ ಒಳ ಮೀಸಲಾತಿ ವರ್ಗೀಕರಣ ಸಮೀಕ್ಷೆ: ಆನ್‌ಲೈನ್ ಮೂಲಕ ಸ್ವಯಂಘೋಷಣೆಗೆ ಅವಕಾಶ

ಪರಿಶಿಷ್ಟ ಜಾತಿ ಒಳ ಮೀಸಲಾತಿ ವರ್ಗೀಕರಣ ಸಮೀಕ್ಷೆ: ಆನ್‌ಲೈನ್ ಮೂಲಕ ಸ್ವಯಂಘೋಷಣೆಗೆ ಅವಕಾಶ

ಬಳ್ಳಾರಿ,20.ಮೇ 25:ನ್ಯಾಯಮೂರ್ತಿ ಡಾ. ಹೆಚ್.ಎನ್.ನಾಗಮೋಹನ ದಾಸ್ ಅವರ ಏಕ ಸದಸ್ಯ ವಿಚಾರಣಾ ಆಯೋಗದ ನಿರ್ದೇಶನದಂತೆ ಪರಿಶಿಷ್ಟ ಜಾತಿ ಒಳ ಮೀಸಲಾತಿ ವರ್ಗೀಕರಣ ಸಮೀಕ್ಷೆ ಕಾರ್ಯವು ಪ್ರಸ್ತುತ ಪ್ರಗತಿಯಲ್ಲಿದೆ. ಮೇ 05 ರಿಂದ ಮನೆ-ಮನೆ ಸಮೀಕ್ಷೆ ನಡೆಸುತ್ತಿದ್ದು, ಸಮೀಕ್ಷೆಯಲ್ಲಿ ಒಂದು ವೇಳೆ ಕೈಬಿಟ್ಟು ಹೋದಂತಹ ಪರಿಶಿಷ್ಟ ಜಾತಿಯ ಕುಟುಂಬದವರು ಈ ಕೆಳಕಂಡAತೆ ಆನ್‌ಲೈನ್ ಲಿಂಕ್ ಮೂಲಕ ಸ್ವಯಂಘೋಷಣೆ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.
*ಆನ್‌ಲೈನ್ ಮೂಲಕ ಸ್ವಯಂ ಘೋಷಣೆ:*
ಮನೆ-ಮನೆ ಭೇಟಿ ಸಂದರ್ಭದಲ್ಲಿ ತಮ್ಮ ಮಾಹಿತಿಯನ್ನು ನೀಡದವರು ನೇರವಾಗಿ ಆನ್‌ಲೈನ್ ಲಿಂಕ್ (https://schedulecastesurvey,karnataka.gov.in/selfdeclaraion) ರ ಮೂಲಕ ಮೇ 19 ರಿಂದ ಮೇ 28 ರವರೆಗೆ ಸ್ವಯಂಘೋಷಣೆ ಮಾಡಿಕೊಳ್ಳಲು ಕಲ್ಪಿಸಲಾಗಿದೆ.
ಆನ್‌ಲೈನ್‌ನಲ್ಲಿ ಸ್ವಯಂಘೋಷಣೆ ಹೇಗೆ ಮಾಡಿಕೊಳ್ಳಬೇಕು ಎಂಬುದರ ಬಗ್ಗೆ ಯೂಟ್ಯೂಬ್ ಲಿಂಕ್ (https://youtu.be/VASEcMhL930)  ಮೂಲಕ ತಿಳಿದುಕೊಳ್ಳಬಹುದು.
ಎಲ್ಲಾ ಪ.ಜಾತಿ ಬಾಂದವರು ತಮ್ಮ ಜಾತಿ, ಉಪಜಾತಿ ವಿವರಗಳನ್ನು ದಾಖಲಾತಿಗಳನ್ನು ಉಪಯೋಗಿಸಿಕೊಳ್ಳಲು ಸ್ವಯಂದೃಢೀಕರಣ ಮಾಡಿಕೊಳ್ಳಬುಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಬಿ.ಮಲ್ಲಿಕಾರ್ಜುನ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article

Facebook
X
WhatsApp
Telegram

Leave a Reply

Your email address will not be published. Required fields are marked *

Cricket Live

Stock Market

Astrology

Gold & Silver Price