March 14, 2025 5:24 pm

ಶಿವಾನಂದ‌ ಮೆಂತೆ, ಸಂಪಾದಕ
ಸುದ್ದಿ ಈ‌ದಿನ‌ ಕನ್ನಡ‌ ದಿನಪತ್ರಿಕೆ

Home » ಸುದ್ದಿ » ಫೆ.19 ರಂದು ಛತ್ರಪತಿ ಶಿವಾಜಿ ಜಯಂತಿ ಕಾರ್ಯಕ್ರಮ

ಫೆ.19 ರಂದು ಛತ್ರಪತಿ ಶಿವಾಜಿ ಜಯಂತಿ ಕಾರ್ಯಕ್ರಮ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ಛತ್ರಪತಿ ಶಿವಾಜಿ ಮಹಾರಾಜ ಜಯಂತಿ ಕಾರ್ಯಕ್ರಮವನ್ನು ಫೆ.19 ರಂದು ಸಂಜೆ 06 ಗಂಟೆಗೆ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮAದಿರದಲ್ಲಿ ಆಯೋಜಿಸಲಾಗಿದೆ.

ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಉಸ್ತುವಾರಿ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರು ಕಾರ್ಯಕ್ರಮ ಉದ್ಘಾಟಿಸುವರು.

ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಅಧ್ಯಕ್ಷತೆ ವಹಿಸುವರು.

ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಹಾಗೂ ಶಾಸಕ ಜೆ.ಎನ್ ಗಣೇಶ್, ಸಂಸದರಾದ ಈ.ತುಕಾರಾಂ, ಕೆ.ರಾಜಶೇಖರ ಬಸವರಾಜ ಹಿಟ್ನಾಳ್, ಡಾ.ಸೈಯದ್ ನಾಸೀರ್ ಹುಸೇನ್, ಶಾಸಕರಾದ ಬಿ.ನಾಗೇಂದ್ರ, ವಿಧಾನಪರಿಷತ್ ಶಾಸಕರಾದ ಡಾ.ಚಂದ್ರಶೇಖರ್ ಬಿ.ಪಾಟೀಲ, ಶಾಸಕರಾದ ಬಿ.ಎಂ.ನಾಗರಾಜ, ಈ.ಅನ್ನಪೂರ್ಣ, ವಿಧಾನಪರಿಷತ್ ಶಾಸಕರಾದ ಶಶೀಲ್ ನಮೋಶಿ, ವೈ.ಎಂ.ಸತೀಶ್, ಡಾ.ಬಾಬು ಜಗಜೀವನ್‌ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ, ಮಹಾನಗರ ಪಾಲಿಕೆಯ ಮಹಾಪೌರರಾದ ಮುಲ್ಲಂಗಿ ನಂದೀಶ್, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯಲು ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.

ಕರ್ನಾಟಕ ಮರಾಠ ಶ್ರೀ ಛತ್ರಪತಿ ಶಿವಾಜಿ ಮಹಾರಾಜ್ ಸೇನೆಯ ರಾಜ್ಯಾಧ್ಯಕ್ಷ ವಿನೋದ್ ಎಂ.ಚವ್ಹಾಣ ಅವರು ಜಯಂತಿ ಕುರಿತು ವಿಶೇಷ ಉಪನ್ಯಾಸ ನೀಡುವರು.

ಕಾರ್ಯಕ್ರಮದಲ್ಲಿ ಬಳ್ಳಾರಿಯ ಎರೇಗೌಡ ಕೆ.ಆರ್ ತಂಡದಿAದ ಭಕ್ತಿ ಸಂಗೀತ ಪ್ರಸ್ತುತ ಪಡಿಸುವರು.

*ಮೆರವಣಿಗೆ:*

ಜಯಂತಿ ಅಂಗವಾಗಿ ಅಂದು ಸಂಜೆ 04 ಗಂಟೆಗೆ ಮೆರವಣಿಗೆ ನಡೆಯಲಿದ್ದು, ಮೆರವಣಿಗೆಯು ಶ್ರೀ ಪಾಂಡುರAಗ ದೇವಸ್ಥಾನದಿಂದ ಆರಂಭವಾಗಿ ಮರಾಠಗಲ್ಲಿ-ಬೆಂಗಳೂರು ರಸ್ತೆ-ತೇರು ಬೀದಿ-ಹೆಚ್.ಆರ್.ಗವಿಯಪ್ಪ ವೃತದ ಮೂಲಕ ಡಾ.ಜೋಳದರಾಶಿ ದೊಡ್ಡನಗೌಡ ರಂಗಮAದಿರದವರೆಗೆ ನಡೆಯಲಿದೆ.

ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ.ವಿ.ಜೆ., ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಎನ್.ಝುಬೇರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಸೇರಿದಂತೆ ಇತರರು ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.

Share This Article

Facebook
X
WhatsApp
Telegram

Leave a Reply

Your email address will not be published. Required fields are marked *

Cricket Live

Stock Market

Astrology

Gold & Silver Price