August 4, 2025 10:10 am

ಶಿವಾನಂದ‌ ಮೆಂತೆ, ಸಂಪಾದಕ
ಸುದ್ದಿ ಈ‌ದಿನ‌ ಕನ್ನಡ‌ ದಿನಪತ್ರಿಕೆ

Home » ಬಳ್ಳಾರಿ » ಬಳ್ಳಾರಿ ಸುದ್ದಿ

ಬಳ್ಳಾರಿ ಸುದ್ದಿ

ಕುರುಗೋಡು: ಮೇ 26 ರಂದು ಕುಂದು ಕೊರತೆ ಸಭೆ
ಬಳ್ಳಾರಿ,ಮೇ 21:
ಕುರುಗೋಡು ತಾಲ್ಲೂಕು ವ್ಯಾಪ್ತಿಯಲ್ಲಿ ಬರುವ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಜನಾಂಗದವರ ಕುಂದು ಕೊರತೆ ಸಮಸ್ಯೆಗಳನ್ನು ಆಲಿಸಿ ಬಗೆಹರಿಸಲು ಮೇ 26 ರಂದು ಬೆಳಿಗ್ಗೆ 11 ಗಂಟೆೆಗೆ ಕುರುಗೋಡು ತಹಶೀಲ್ದಾರರ ಅಧ್ಯಕ್ಷತೆಯಲ್ಲಿ ತಾಲ್ಲೂಕು ಕಚೇರಿಯಲ್ಲಿ ತಾಲ್ಲೂಕು ಮಟ್ಟದ ಕುಂದು ಕೊರತೆ ಸಭೆಯನ್ನು ಏರ್ಪಡಿಸಲಾಗಿದ್ದು, ತಾಲ್ಲೂಕು ಮಟ್ಟದ ಅಧಿಕಾರಿಗಳು, ಪರಿಶಿಷ್ಟ ಜಾತಿ ಮತ್ತು  ಪರಿಶಿಷ್ಟ ವರ್ಗ ಸಂಘದ ಪದಾಧಿಕಾರಿಗಳು, ದಲಿತ ಮುಖಂಡರುಗಳು ಹಾಗೂ ಸಮುದಾಯದ ಸಾರ್ವಜನಿಕರು ಸಭೆಗೆ ಹಾಜರಾಗಬೇಕೆಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
————-
ಬಳ್ಳಾರಿ ಮಹಾನಗರ ಪಾಲಿಕೆ: ವಸತಿ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
ಬಳ್ಳಾರಿ,ಮೇ 21:
ಬಳ್ಳಾರಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ವಸತಿ ಸೌಲಭ್ಯ ಪಡೆಯಲು ಇಚ್ಛಿಸುವ ಸ್ವಂತ ಮನೆ ಇಲ್ಲದೇ ಇರುವ ವಸತಿ ರಹಿತರಿಂದ ವಸತಿ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಕೇಂದ್ರ ಸರ್ಕಾರದ ಪಿಎಂಎವೈ, ಹೆಚ್‌ಎಫ್‌ಎ ಹಾಗೂ ಇತರೆ ಯೋಜನೆಯಡಿ ಬಳ್ಳಾರಿ ನಗರದ ಮುಂಡರಗಿ ಆಶ್ರಯ ಬಡಾವಣೆಯಲ್ಲಿ ಜಿ+2 ಮಾದರಿಯ 5616 ಮನೆಗಳ ನಿರ್ಮಾಣ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ.
ಫಲಾನುಭವಿಗಳಾಗಲು ವಸತಿ ರಹಿತರಾಗಿರಬೇಕು. ಬಳ್ಳಾರಿ ನಗರದ ನಿವಾಸಿಗಳಾಗಿರಬೇಕು. ವಾರ್ಷಿಕ ಆದಾಯ ರೂ.3 ಲಕ್ಷ ಮೀರಿರಬಾರದು. ಫಲಾನುಭವಿ ವಂತಿಕೆ ಪಾವತಿಸುವುದು ಹಾಗೂ ಬ್ಯಾಂಕ್ ಸಾಲ ಮರುಪಾವತಿ ಮಾಡಲು ಬದ್ದರಾಗಿರಬೇಕು.
*ಫಲಾನುಭವಿಯು ಭರಿಸಬೇಕಾದ ವಂತಿಕೆ ಮೊತ್ತದ ವಿವರ:  *
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ:
ಕೇAದ್ರ ಮತ್ತು ರಾಜ್ಯ ಸರ್ಕಾರದ ಸಹಾಯಧನ-3,30,000 ರೂ., ಫಲಾನುಭವಿಯು ಪ್ರಸುತ್ತ ಪಾವತಿಸಬೇಕಾದ ವಂತಿಕೆ ಮೊತ್ತ-42,000 ರೂ., ಫಲಾನುಭವಿಯು ಮನೆ ಸ್ವಾಧೀನ ಸಂದರ್ಭದಲ್ಲಿ ಪಾವತಿಸಬೇಕಾದ ವಂತಿಕೆ ಮೊತ್ತ-2,90,000 ರೂ., ಒಟ್ಟು ಘಟಕ ವೆಚ್ಚ (ಪರಿಷ್ಕೃತ)- 6,62,000 ರೂ.
ಅಲ್ಪ ಸಂಖ್ಯಾತ ಮತ್ತು ಇತರೆ:
ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಾಯಧನ-2,70,000 ರೂ., ಫಲಾನುಭವಿಯು ಪ್ರಸುತ್ತ ಪಾವತಿಸಬೇಕಾದ ವಂತಿಕೆ ಮೊತ್ತ-1,02,000 ರೂ., ಫಲಾನುಭವಿಯು ಮನೆ ಸ್ವಾಧೀನ ಸಂದರ್ಭದಲ್ಲಿ ಪಾವತಿಸಬೇಕಾದ ವಂತಿಕೆ ಮೊತ್ತ-2,90,000 ರೂ., ಒಟ್ಟು ಘಟಕ ವೆಚ್ಚ (ಪರಿಷ್ಕೃತ)- 6,62,000 ರೂ. ಪಾವತಿಸಬೇಕು.
ಈ ಮೇಲ್ಕಂಡ ಅರ್ಹತೆಯ ಮಾನದಂಡ ಹಾಗೂ ಫಲಾನುಭವಿ ವಂತಿಕೆ ಪಾವತಿಸಲು ಶಕ್ತರಾಗಿರುವ ಹಾಗೂ ಆಸಕ್ತಿ ಹೊಂದಿರುವ ಕುಟುಂಬಗಳು ಕೂಡಲೇ ನಿಗಧಿತ ನಮೂನೆಯ ಅರ್ಜಿ ಪಡೆದು ಅವಶ್ಯಕ ಹಾಗೂ ಅಗತ್ಯ ದಾಖಲೆಗಳೊಂದಿಗೆ ಮಹಾನಗರ ಪಾಲಿಕೆಯ ಹಳೆಯ ಕಚೇರಿಯ ಆಶ್ರಯ ಶಾಖೆಗೆ ಭೇಟಿ ನೀಡಬಹುದು ಎಂದು ಮಹಾನಗರ ಪಾಲಿಕೆ ಕಚೇರಿಯು ಪ್ರಕಟಣೆಯಲ್ಲಿ ತಿಳಿಸಿದೆ.
————
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ: ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ
ಬಳ್ಳಾರಿ,ಮೇ 21(ಕರ್ನಾಟಕ ವಾರ್ತೆ):
ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಹೊಸದಾಗಿ ಪ್ರವೇಶ ಬಯಸುವ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 2ಬಿ, 3ಎ, 3ಬಿ ಮತ್ತು ಪರಿಶಿಷ್ಟ ಜಾತಿ-ಪರಿಶಿಷ್ಟ ವರ್ಗದ ಪಿಯುಸಿ, ಐಟಿಐ ಮತ್ತು ಡಿಪ್ಲೋಮೋ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ 2025-26ನೇ ಸಾಲಿಗೆ  ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಆಸಕ್ತ ವಿದ್ಯಾರ್ಥಿಗಳು https://shp.karnataka.gov.in ಗೆ ಭೇಟಿ ನೀಡಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಜೂನ್ 20 ಕೊನೆಯ ದಿನವಾಗಿದೆ.
ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್‌ಸೈಟ್ https://bcwd.karnataka.gov.in  ನ್ನು ನೋಡಬಹುದು.
ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ ಸಹಾಯವಾಣಿ ಸಂಖ್ಯೆ 8050770005 ಮತ್ತು 8050770004 ಅಥವಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಮತ್ತು ತಾಲ್ಲೂಕು ಅಧಿಕಾರಿಗಳ ಕಚೇರಿಗೆ ಅಗತ್ಯ ದಾಖಲೆಗಳೊಂದಿಗೆ ಭೇಟಿ ನೀಡಿ ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
————-
ಪೌರರಕ್ಷಣಾ ದಳ: ಸ್ವಯಂ ಸೇವಕ ಸದಸ್ಯರಾಗಲು ಅರ್ಜಿ ಆಹ್ವಾನ
ಬಳ್ಳಾರಿ,ಮೇ 21:
ಪೌರರಕ್ಷಣಾ ದಳದಲ್ಲಿ ಸ್ವಯಂ ಸೇವಕರಾಗಿ ಸದಸತ್ವ ಪಡೆಯಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಪ್ರಕೃತಿ ವಿಕೋಪ, ವಿಪತ್ತು ನಿರ್ವಹಣೆ ಮತ್ತು ಮಾನವ ನಿರ್ಮಿತ ವಿಕೋಪಗಳ ಸಮಯದಲ್ಲಿ ಸಾರ್ವಜನಿಕರ ಆಸ್ತಿ ಮತ್ತು ಪ್ರಾಣ ಕಾಪಾಡುವ ಉದ್ದೇಶವಾಗಿದೆ. ಇಂತಹ ಸಾಮಾಜಿಕ ಕಾರ್ಯ ಮಾಡಲು ಇಚ್ಛಿಸುವ ಬಳ್ಳಾರಿ ನಗರ ಮತ್ತು ಗ್ರಾಮೀಣ ಪ್ರದೇಶದ ಸಾರ್ವಜನಿಕರು ಮತ್ತು ಕಾಲೇಜು ವಿದ್ಯಾರ್ಥಿಗಳು ಸದಸ್ಯರಾಗುವ ಮೂಲಕ ಸೇವೆ ಸಲ್ಲಿಸಬಹುದು.
ಪೌರರಕ್ಷಣಾ ವಿಭಾಗದ ಸದಸ್ಯನಾಗಲು ಯಾವುದೇ ವಿದ್ಯಾರ್ಹತೆ ಇರುವುದಿಲ್ಲ. ಮಾಜಿ ಯೋಧರು ಮತ್ತು ನಿವೃತ್ತ ಸರ್ಕಾರಿ ನೌಕರರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಮುನ್ನೆಡೆಸಬಹುದು. ಈ ಸದಸ್ಯರು ಸಮಾಜ ಸೇವೆಯ ಭಾವನೆಯಿಂದ ಬರಬೇಕೆ ಹೊರತು ಅನ್ಯ ಭಾವನೆಗಳಿಂದ ಕೂಡಿರುವುದಿಲ್ಲ.
ಸ್ವ-ಇಚ್ಛೆಯಿಂದ ಸ್ವಯಂ ಸೇವಕರಾಗಿ ಕರ್ತವ್ಯ ನಿರ್ವಹಿಸಬೇಕು. ಸರ್ಕಾರದ ಯಾವುದೇ ಧನಸಹಾಯ ಇರುವುದಿಲ್ಲ. ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮAದಿರ ರಸ್ತೆಯ ಜಿಲ್ಲಾ ಪೌರರಕ್ಷಣಾ ಕಚೇರಿಯಲ್ಲಿ ಜೂನ್ 05 ರವರೆಗೆ ಅರ್ಜಿ ವಿತರಿಸಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ದೂ.08392 276421 ಗೆ ಸಂಪರ್ಕಿಸಬಹುದು ಎಂದು ಪೌರರಕ್ಷಣಾ ದಳದ ಮುಖ್ಯ ವಾರ್ಡನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
————-
ಬಳ್ಳಾರಿ: ಸರ್ಕಾರಿ ಐಟಿಐ ಕಾಲೇಜು ಪ್ರವೇಶಾತಿಗೆ ಅರ್ಜಿ ಆಹ್ವಾನ
ಬಳ್ಳಾರಿ,ಮೇ 21:
ನಗರದ ರೇಡಿಯೋ ಪಾರ್ಕ್ ಹತ್ತಿರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಪ್ರಸಕ್ತ ಸಾಲಿಗೆ ವಿವಿಧ ವೃತ್ತಿಗಳಿಗೆ ಪ್ರವೇಶಕ್ಕಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಂಸ್ಥೆಯ ಪ್ರಾಚಾರ್ಯರಾದ ಪಂಡಿತಾರಾದ್ಯ ಅವರು ತಿಳಿಸಿದ್ದಾರೆ.
10 ನೇ ತರಗತಿ ಪಾಸ್/ಫೇಲ್ ಆದ ಅಭ್ಯರ್ಥಿಗಳು ವೆಬ್ ಸೈಟ್ ವಿಳಾಸ www.cite.karnataka.gov.in ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದ್ದು, ಇಲ್ಲವೇ ನೇರವಾಗಿ ಸಂಸ್ಥೆಗೆ ಭೇಟಿ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಮೇ 28 ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಅರ್ಜಿಯಲ್ಲಿ ನಮೂದಿಸಿದ ಸಂಸ್ಥೆಯಲ್ಲಿ ಮಾತ್ರ ದಾಖಲೆ ಪರಿಶೀಲನೆಗೆ ಕಡ್ಡಾಯವಾಗಿ ಹಾಜರಾಗಬೇಕು.
ವಿಶೇಷ ಸೂಚನೆ:
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಸಮಯದಲ್ಲಿ ನೀಡುವ ಮೊಬೈಲ್ ಸಂಖ್ಯೆ ಹಾಗೂ ಇ-ಮೇಲ್ ವಿಳಾಸವನ್ನು ಪ್ರವೇಶಾತಿ ಮತ್ತು ಪರೀಕ್ಷೆ ಮುಗಿಯುವವರೆಗೂ ಬದಲಾವಣೆ ಮಾಡುವಂತಿಲ್ಲ.
ಹೆಚ್ಚಿನ ಮಾಹಿತಿಗಾಗಿ ಮೊ.9916300462 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
———–
ಅಂಚೆ ಇಲಾಖೆ: ಜೂ.04 ರಂದು ನೇರ ಸಂದರ್ಶನ
ಬಳ್ಳಾರಿ,ಮೇ 21:
ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಉತ್ಪನ್ನಗಳನ್ನು ಮಾರಾಟ ಮಾಡಲು ನೇರಪ್ರತಿನಿಧಿ ಮತ್ತು ಮತ್ತು ಫೀಲ್ಡ್ ಆಫೀಸರ್‌ಗಳ ನೇಮಕಕ್ಕಾಗಿ ಜೂನ್ 04 ರಂದು ಬೆಳಿಗ್ಗೆ 10 ಗಂಟೆಯಿAದ ಮಧ್ಯಾಹ್ನ 02 ಗಂಟೆಯವರೆಗೆ, ನಗರದ ಕೋಟೆ ಆವರಣದ ಅಂಚೆ ಅಧೀಕ್ಷಕರ ಕಾರ್ಯಾಲಯದಲ್ಲಿ ನೇರ ಸಂದರ್ಶನ ಏರ್ಪಡಿಸಲಾಗಿದೆ.
ಅರ್ಹ ಅಭ್ಯರ್ಥಿಗಳು ತಮ್ಮ ಇತ್ತೀಚಿನ ಭಾವಚಿತ್ರ ಹಾಗೂ ಶೈಕ್ಷಣಿಕ ಪ್ರಮಾಣ ಪತ್ರದ ನಕಲುಗಳೊಂದಿಗೆ ಅಂದು ನಡೆಯಲಿರುವ ನೇರ ಸಂದರ್ಶನಕ್ಕೆ ಹಾಜರಾಗಬಹುದು.
ಅರ್ಹತೆ:
ಐದು ಸಾವಿರಕ್ಕಿಂತ ಕಡಿಮೆ ಜನಸಂಖ್ಯೆ ಹೊಂದಿರುವ ಪ್ರದೇಶದಲ್ಲಿ ವಾಸಿಸುತ್ತಿದ್ದರೆ  10ನೇ ತರಗತಿ ಉತ್ತೀರ್ಣರಾಗಿರಬೇಕು.  ಐದು ಸಾವಿರ ಹಾಗೂ ಅದಕ್ಕಿಂತ ಹೆಚ್ಚಿನ ಜನಸಂಖ್ಯೆ ಹೊಂದಿರುವ ಇತರೆ ಪ್ರದೇಶಗಳಿಗೆ 12ನೇ ತರಗತಿ ಉತ್ತೀರ್ಣರಾಗಿರಬೇಕು.
ವಯೋಮಿತಿ 18 ವರ್ಷ, ಗರಿಷ್ಠ ವಯಸ್ಸಿನ ಮಿತಿ ಇರುವುದಿಲ್ಲ.
ನೇರಪ್ರತಿನಿಧಿಗಳು:
ನಿರುದ್ಯೋಗಿ ಹಾಗೂ ಸ್ವಯಂ ಉದ್ಯೋಗ ನಿರತ ಯುವಕರು, ಮಾಜಿ ವಿಮಾ ಕಂಪನಿಗಳ ಸಲಹೆಗಾರರು, ಅಂಗನವಾಡಿ ಕಾರ್ಯಕರ್ತೆಯರು, ಮಹಿಳಾ ಮಂಡಳಿಯ ಕಾರ್ಯಕರ್ತೆಯರು, ಮಾಜಿ ಗ್ರಾಮ ಪಂಚಾಯಿತಿಯ ಸದಸ್ಯರು ಅರ್ಹರಾಗಿರುತ್ತಾರೆ.
ಫೀಲ್ಡ್ಆಫೀಸರ್:
ನಿವೃತ್ತ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನೌಕರರು, ನಿವೃತ್ತ ಗ್ರಾಮೀಣ ಅಂಚೆ ಸೇವಕರು (ಜಿಡಿಎಸ್) ಅರ್ಹರಾಗಿರುತ್ತಾರೆ.  ವಿಮಾ ಉತ್ಪನ್ನಗಳನ್ನು ಮಾರಾಟ ಮಾಡುವ ಅನುಭವ, ಕಂಪ್ಯೂಟರ್ ಜ್ಞಾನ ಅಥವಾ ಸ್ಥಳೀಯ ಪ್ರದೇಶದ ಜ್ಞಾನವಿರಬೇಕು.
ಆಯ್ಕೆಯಾದ ಅಭ್ಯರ್ಥಿಗಳು ರೂ.5000/-  (ಐದು ಸಾವಿರ ಮಾತ್ರ) ಗಳನ್ನು ರಾಷ್ಟ್ರೀಯ ಉಳಿತಾಯ ಪತ್ರ ಅಥವಾ ಕಿಸಾನ್ ವಿಕಾಸ ಪತ್ರದ ರೂಪದಲ್ಲಿ ಭದ್ರತಾ ಠೇವಣಿ ಇಡಬೇಕಾಗುತ್ತದೆ.
ಆಯ್ಕೆಯಾದ ನೇರಪ್ರತಿನಿಧಿ ಮತ್ತು ಫೀಲ್ಡ್ಆಫೀಸರ್‌ಗಳಿಗೆ ಅವರು ಮಾಡಿದ ವ್ಯವಹಾರಕ್ಕೆ ತಕ್ಕಂತೆ ಸೂಕ್ತ ಕಮಿಷನ್ ನೀಡಲಾಗುವುದು. ಇದರ ಹೊರತಾಗಿ ಬೇರೆ ಯಾವುದೇ ನಿಗದಿತ ವೇತನ ಇರುವುದಿಲ್ಲ. ಅಭ್ಯರ್ಥಿಗಳು ಬೇರೆ ಯಾವುದೇ ವಿಮಾ ಕಂಪನಿ, ಸಂಸ್ಥೆ, ಸಂಘಗಳ ಏಜೆಂಟ್ ಆಗಿರಬಾರದು.
ಹೆಚ್ಚಿನ ಮಾಹಿತಿಗಾಗಿ ಡೆವಲಪ್‌ಮೆಂಟ್ ಆಫೀಸರ್ ಮಾರುತಿ.ವಿ (ಮೊ.9481694420) ಹಾಗೂ ಅಂಚೆ ಅಧೀಕ್ಷಕರ ಕಾರ್ಯಾಲಯ, ಹತ್ತಿರದ ಅಂಚೆ ಕಚೇರಿ ಅಥವಾ ದೂ.08392-266037 ಗೆ ಸಂಪರ್ಕಿಸಬಹುದು ಎಂದು ಬಳ್ಳಾರಿ ವಿಭಾಗದ ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article

Facebook
X
WhatsApp
Telegram

Leave a Reply

Your email address will not be published. Required fields are marked *

Cricket Live

Stock Market

Astrology

Gold & Silver Price