June 18, 2025 2:52 am

ಶಿವಾನಂದ‌ ಮೆಂತೆ, ಸಂಪಾದಕ
ಸುದ್ದಿ ಈ‌ದಿನ‌ ಕನ್ನಡ‌ ದಿನಪತ್ರಿಕೆ

Home » ಯಾದಗಿರ » ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರ ಸಹಕಾರದಿಂದ ಸಾಧ್ಯ

ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರ ಸಹಕಾರದಿಂದ ಸಾಧ್ಯ

ಯಾದಗಿರಿ : ಫೆಬ್ರವರಿ 28, :  PAN-INDIA Rescue and Rehabilitation Campaign 2.0 – “A Step to Eradicate Child Labour” (PAN-INDIA ರಕ್ಷಣೆ ಮತ್ತು ಪುನರ್ವಸತಿ ಅಭಿಯಾನ – ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಒಂದು ಹೆಜ್ಜೆ) ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರ ಸಹಕಾರದಿಂದ ಸಾಧ್ಯ ಎಂದು ವಡಗೇರಾ ಗ್ರೇಡ್–2 ತಹಸೀಲ್ದಾರ್ ಶ್ರೀ ಪ್ರಕಾಶ ಹೊಸಮನಿ ಅವರು ಹೇಳಿದರು.

     ತಾಲ್ಲೂಕು ಮಟ್ಟದ ಪೂರ್ವಭಾವಿ ಸಭೆ ಹಾಗೂ ತಾಲ್ಲೂಕು ಮಟ್ಟದ ಕಾರ್ಯಪಡೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ವಡಗೇರಾ ತಾಲೂಕಿನಲ್ಲಿ 2025ರ ಜನವರಿ 10 ರಿಂದ 2025ರ ಮಾರ್ಚ್ 31ರ ವರೆಗೆ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಅಭಿಯಾನವನ್ನು ಉದ್ದೇಶಿಸಿ ಅವರು ಮಾತನಾಡಿದರು.

     ನವದೆಹಲಿ ರಾಷ್ಟಿçÃಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಮತ್ತು  ಬೆಂಗಳೂರು ಕಾರ್ಮಿಕ ಆಯುಕ್ತರು ಅವರು ಸೂಚನೆಯಂತೆ,  PAN-INDIA Rescue and Rehabilitation Campaign 2.0 –“A Step to Eradicate Child Labour” (PAN-INDIA ರಕ್ಷಣೆ ಮತ್ತು ಪುನರ್ವಸತಿ ಅಭಿಯಾನ-ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಒಂದು ಹೆಜ್ಜೆ) ಅಂಗವಾಗಿ ಬಾಲ ಹಾಗೂ ಕಿಶೋರ ಕಾರ್ಮಿಕರನ್ನು ರಕ್ಷಿಸಿ, ಪುನರ್ವಸತಿಗೊಳಿಸಿ ಶಿಕ್ಷಣ ಮುಂದುವರಿಕೆಗೆ ಅವಕಾಶ ಮಾಡಿಕೊಡುವ ಉದ್ದೇಶದಿಂದ 2025ರ ಜನವರಿ 10 ರಿಂದ 2025ರ ಮಾರ್ಚ್ 31ರ ವರೆಗೆ ರಕ್ಷಣಾ ಕಾರ್ಯಚರಣೆಗೆ ಸರಕಾರದ ಪ್ರತಿಯೊಂದು ಇಲಾಖೆಯು ಕೈಜೊಡಿಸಿದಾಗ ಮಾತ್ರ ತಾಲ್ಲೂಕಿನಾದ್ಯಂತ ಬಾಲಕಾರ್ಮಿಕ ಪದ್ಧತಿ ಎಂಬ ಅನಿಷ್ಠ ಪದ್ಧತಿಯನ್ನು ನಿರ್ಮೂಲನೆ ಮಾಡಲು ಸಾಧ್ಯ ಎಂದು ತಿಳಿಸಿದರು.

     ಬಾಲಕಾರ್ಮಿಕ ಪದ್ಧತಿಯನ್ನು ನಿರ್ಮೂಲನೆ ಮಾಡಲು ಪ್ರತಿ ತಿಂಗಳು 15 ತಪಾಸಣೆ ಮತ್ತು ಹಠಾತ್ ದಾಳಿ/ತಪಾಸಣೆ ಆಯೋಜಿಸಿವುದು. ಮತ್ತು ಪ್ರತಿ ತಿಂಗಳು 2 ಕಾನೂನು ಅರಿವು-ನೆರವು ಮತ್ತು ಜನ-ಜಾಗೃತಿ ಕಾರ್ಯಕ್ರಮ ಆಯೋಜಿಸುವಂತೆ ಹಾಗೂ ಬಾಲಕಾರ್ಮಿಕ ಎಂಬ ಅನಿಷ್ಠ ಪದ್ಧತಿಯನ್ನು ನಿರ್ಮೂಲನೆ ಮಾಡಲು ಎಲ್ಲಾ ಇಲಾಖೆಯ ಅಧಿಕಾರಿಗಳು ಕೈಜೋಡಿಸಬೇಕೆಂದು ಈ ಸಂದರ್ಭದಲ್ಲಿ ತಿಳಿಸಿದರು.

     ಜಿಲ್ಲಾ ಬಾಲಕಾರ್ಮಿಕ ಯೋಜನಾ ನಿರ್ದೇಶಕರಾದ ಶ್ರೀ ರಿಯಾಜ್ ಪಟೇಲ್ ವರ್ಕನಳ್ಳಿ ಮಾತನಾಡಿ ಜಿಲ್ಲೆಯನ್ನು ಬಾಲಕಾರ್ಮಿಕ ಮುಕ್ತ ಜಿಲ್ಲೆಯನ್ನಾಗಿಸಬೇಕೆಂದು ಕಾರ್ಮಿಕ ಇಲಾಖೆಯಿಂದ ನಿರÀಂತರವಾಗಿ ಜನ-ಜಾಗೃತಿ, ಕಾನೂನು ಅರಿವು-ನೆರವು ಕಾರ್ಯಕ್ರಮ, ಬೀದಿನಾಟಕ ಮತ್ತು ಆಟೋ-ಪ್ರಚಾರ ಕಾರ್ಯಕ್ರಮಗಳನ್ನು ನಿರಂತರವಾಗಿ ನಡೆಸಲಾಗುತ್ತಿದೆ. ಇದನ್ನು ಮೀರಿಯೂ ಸಹ ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಂಡಲ್ಲಿ ಅಂತಹ ಅಂಗಡಿ ಮಾಲೀಕರ ವಿರುದ್ಧ ಕಾನೂನು ರೀತಿ ಕ್ರಮ ತೆಗೆದುಕೊಳ್ಳಲಾಗುವುದೆಂದು ತಿಳಿಸಿದರು.

     ವಡಗೇರಾ ಕಾರ್ಮಿಕ ನಿರೀಕ್ಷಕರಾದ ಪ್ರಿಯಾಂಕ ಭಾಸುತ್ಕರ್ ಅವರು ಮಾತನಾಡಿ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಮಕ್ಕಳನ್ನು ಕೆಲಸಕ್ಕೆ ಇಟ್ಟುಕೊಂಡಲ್ಲಿ ಅಂತಹ ಅಂಗಡಿ ಮಾಲೀಕರ ವಿರುದ್ಧ 20,000 ರೂ.ಗಳಿಂದ 50,000 ರೂ.ಗಳ ವರೆಗೆ ದಂಡ ಮತ್ತು 6 ತಿಂಗಳಿAದ 2 ವರ್ಷದವರೆಗೆ ಜೈಲು ಶಿಕ್ಷೆ ಅಥವಾ ಎರಡನ್ನು ಸಹ ವಿಧಿಸಲಾಗುವುದು ಎಂದು ತಿಳಿಸಿದರು.

     ಸಭೆಯ ನಂತರ ನಗರದ ವಾಲ್ಮೀಕಿ ವೃತ್ತದಿಂದ ಕುರಕುಂದ ರಸ್ತೆಯಲ್ಲಿರುವ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳು, ಗ್ಯಾರೇಜ್‌ಗಳು ಮತ್ತು ಹೊಟೇಲ್‌ಗಳಲ್ಲಿ ಹಠಾತ್ ದಾಳಿ/ತಪಾಸಣೆ ನಡೆಸಿ 1 ಕಿಶೋರ ಕಾರ್ಮಿಕ ಮಗುವನ್ನು ರಕ್ಷಿಸಿ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಗೆ ಒಪ್ಪಿಸಲಾಯಿತು.

     ತಪಾಸಣೆ/ಹಠಾತ್‌ದಾಳಿ ಸಂದರ್ಭದಲ್ಲಿ ತಾಲ್ಲೂಕು ಪಂಚಾಯತ್‌ನ ತಾಲ್ಲೂಕ ಯೋಜನಾಧಿಕಾರಿಗಳಾದ ರಾಘವೇಂದ್ರ.ಕೆ, ಶಿರಸ್ಥೆದಾರರಾದ ರಾಮನಗೌಡ ಕೆಳಗೇರಿ, ಕಂದಾಯ ನಿರೀಕ್ಷಕರಾದ ಸಂಜೀವ ಕವಲಿ, ಆರೋಗ್ಯ ಇಲಾಖೆಯ ವಿಜಯಕುಮಾರ್ ಎಮ್, ಪೋಲಿಸ್ ಇಲಾಖೆಯ ಎ.ಎಸ್.ಐ ನಂದಗೋಪಾಲ, ಮಕ್ಕಳ ಸಹಾಯವಾಣಿ 1098/112ನ ರೇಣುಕಾ, ಡಾನ್ ಬಾಸ್ಕೋ ಸಂಸ್ಥೆಯ ಫ್ರಾನ್ಸಿಸ್ ಶಾಬು, ಮಲ್ಲಿಕಾರ್ಜುನ ಕುರಕುಂದಿ, ಮಾರ್ಗದರ್ಶಿ ಸಂಸ್ಥೆಯ ಶ್ರೀಮತಿ ಆಶಾ ಬೇಗಂ, ತಾಯಮ್ಮ ಎಸ್, ಕಾರ್ಮಿಕ ಇಲಾಖೆಯ ಜಾವೀದ್ ಪಾಷಾ, ಅಮೃತ್ ರಾವ್ ಕೋತ್ವಾಲ್ ಉಪಸ್ಥಿತರಿದ್ದರು.

Share This Article

Facebook
X
WhatsApp
Telegram

Leave a Reply

Your email address will not be published. Required fields are marked *

Cricket Live

Stock Market

Astrology

Gold & Silver Price