August 4, 2025 4:42 am

ಶಿವಾನಂದ‌ ಮೆಂತೆ, ಸಂಪಾದಕ
ಸುದ್ದಿ ಈ‌ದಿನ‌ ಕನ್ನಡ‌ ದಿನಪತ್ರಿಕೆ

Home » ಸುದ್ದಿ » ಬೀದರ: ಮೆಟ್ರಿಕ್ ಪೂರ್ವ/ನಂತರ ಬಾಲಕ-ಬಾಲಕಿಯರ ವಸತಿ ನಿಲಯಗಳ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ

ಬೀದರ: ಮೆಟ್ರಿಕ್ ಪೂರ್ವ/ನಂತರ ಬಾಲಕ-ಬಾಲಕಿಯರ ವಸತಿ ನಿಲಯಗಳ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ

ಬೀದರ ಮೇ.26:- 2025-26ನೇ ಸಾಲಿನ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ನಡೆಯುತ್ತಿರುವ ಮೆಟ್ರಿಕ್ ಪೂರ್ವ/ನಂತರದ ಬಾಲಕ-ಬಾಲಕಿಯರ ವಿದ್ಯಾರ್ಥಿ ನಿಲಯಗಳಲ್ಲಿ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಅರ್ಹ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ  HMIS   ಆನ್‌ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ ಎಂದು ಬೀದರ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು (ಗ್ರೇಡ್-1) ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಸತಿ ನಿಲಯಗಳ ವಿವರ: ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕ ವಸತಿ ನಿಲಯ ಜನವಾಡ ರಸ್ತೆ ಬೀದರ, ಸಿದ್ಧಿತಾಲಿಮ್ ಬೀದರ, ಪ್ರತಾಪನಗರ, ಜನವಾಡ, ಮನ್ನಳ್ಳಿ, ಮರಕುಂದಾ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯ ಜನವಾಡ ರಸ್ತೆ ಬೀದರ ಹಾಗೂ ಡಾ,ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕರ ವಸತಿ ಪ್ರತಾಪನಗರ, ಚಿಟ್ಟಾವಾಡಿ-1 & 2, ಹಳದಕೇರಿ ಬೀದರ, (ವೃತ್ತಿಪರ) ನೌಬಾದ, ಪ್ರಥಮ ದರ್ಜೆ ಕಾಲೇಜು ಹಾಸ್ಟೆಲ್ ನೌಬಾದ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯ ಪ್ರತಾಪಗರ, ಗುಂಪಾ ರಸ್ತೆ ಬೀದರ (ಟೌನ್), ಜನವಾಡ ರಸ್ತೆ ಬೀದರ.
ಬೀದರ ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ವಿದ್ಯಾರ್ಥಿನಿಲಯಗಳಲ್ಲಿ 5ನೇ ತರಗತಿಯಿಂದ 10ನೇ ತರಗತಿಯಲ್ಲಿ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಹಾಗೂ ಪಿ.ಯು.ಸಿ ಮತ್ತು ಡಿಗ್ರಿ ಕೋರ್ಸ್ ಗಳಲ್ಲಿ ವ್ಯಾಂಸಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳ ಆಧಾರ್ ಕಾರ್ಡ್,  SATS ID    , ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಅಂಕಪಟ್ಟಿ, ವಿದ್ಯಾರ್ಥಿಯ ಇತ್ತಿಚಿನ  passport size photo  ಮತ್ತು ಆಧಾರ ಜೋಡಣೆ ಇರುವ ಬ್ಯಾಂಕ್ ಖಾತೆ ಸಂಖ್ಯೆ ಮತ್ತು ಪೋಷಕರ ಮೊಬೈಲ್ ಸಂಖ್ಯೆ ಕಡ್ಡಾಯವಾಗಿದ್ದು, ಈ ಎಲ್ಲಾ ದಾಖಲಾತಿಗಳನ್ನು ದೃಢೀಕರಣದೊಂದಿಗೆ  HMIS   ತಂತ್ರಾAಶದ ವಿಳಾಸ  https://swdhmis.karnataka.gov.in  ಲಿಂಕ್ ಅನ್ನು ಬಳಸಿ ದಿನಾಂಕ 31-08-2025 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ವಸತಿ ನಿಲಯದ ವಾರ್ಡನ್ ರವರಿಗೆ ಅಥವಾ ಕಛೇರಿ ದೂರವಾಣಿ ಸಂಖ್ಯೆ 9480843082ಕ್ಕೆ ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

Share This Article

Facebook
X
WhatsApp
Telegram

Leave a Reply

Your email address will not be published. Required fields are marked *

Cricket Live

Stock Market

Astrology

Gold & Silver Price