June 17, 2025 12:13 am

ಶಿವಾನಂದ‌ ಮೆಂತೆ, ಸಂಪಾದಕ
ಸುದ್ದಿ ಈ‌ದಿನ‌ ಕನ್ನಡ‌ ದಿನಪತ್ರಿಕೆ

Home » ಸುದ್ದಿ » ಬೇವಿನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಪದವಿ ಪೂರ್ವ ಕಾಲೇಜು : ಪ್ರಥಮ ಪಿ.ಯು.ಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳ ಆಯ್ಕೆಗೆ ಅರ್ಜಿ ಆಹ್ವಾನ

ಬೇವಿನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಪದವಿ ಪೂರ್ವ ಕಾಲೇಜು : ಪ್ರಥಮ ಪಿ.ಯು.ಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳ ಆಯ್ಕೆಗೆ ಅರ್ಜಿ ಆಹ್ವಾನ

ಯಾದಗಿರಿ : 08.ಮೇ 25: ಯಾದಗಿರಿ ಜಿಲ್ಲೆಯ ಶಹಾಪೂರ ತಾಲ್ಲೂಕಿನ ಬೇವಿನಹಳ್ಳಿ 2025-26ನೇ ಸಾಲಿಗೆ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು ಪದವಿ ಪೂರ್ವ ಕಾಲೇಜುದಲ್ಲಿ ಪ್ರಥಮ ಪಿ.ಯು.ಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳ ಆಯ್ಕೆಗಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಯಾದಗಿರಿ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಚನ್ನಬಸಪ್ಪ ಅವರು ತಿಳಿಸಿದ್ದಾರೆ.

     ಜಿಲ್ಲೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ಹಾಗೂ ಪದವಿ ಪೂರ್ವ ಕಾಲೇಜು ಬೇವಿನಹಳ್ಳಿ ಕ್ರಾಸ್ ಇಲ್ಲಿನ ಪ್ರಥಮ ಪಿ.ಯು.ಸಿ ವಿಜ್ಞಾನ ವಿಭಾಗಕ್ಕೆ ಪಿ.ಸಿ.ಎಂ.ಬಿ ಒಟ್ಟು 80 ವಿದ್ಯಾರ್ಥಿಗಳಿಗೆ ಆಯ್ಕೆ ನಡೆಯಲಿದೆ. ಕ್ರೆöÊಸ್ ವಸತಿ ಶಾಲೆಗಳ ವಿದ್ಯಾರ್ಥಿಗಳಿಗೆ ಮೊದಲ ಆದ್ಯತೆ ನೀಡಿ ಎಸ್.ಎಸ್.ಎಲ್.ಸಿ ಪಾಸಾದ ಮೆರಿಟ್ ಮತ್ತು ಮೀಸಲಾತಿ ಅನ್ವಯ ವಿದ್ಯಾರ್ಥಿಗಳ ಅರ್ಜಿ ಆಹ್ವಾನಿಸಿದೆ. ಬೆಂಗಳೂರು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಕಾರ್ಯನಿರ್ವಾಹಕ ನಿರ್ದೇಶಕರು ಅವರು ಸೂಚಿಸಿದೆ.

     ಮೊರಾರ್ಜಿ ದೇಸಾಯಿ ವಸತಿ ಶಾಲೆ ಹಾಗೂ ಪದವಿ ಪೂರ್ವ ಕಾಲೇಜು ಬೇವಿನಹಳ್ಳಿ ಕ್ರಾಸ್ ಇಲ್ಲಿ ಪ್ರಥಮ ಪಿ.ಯು.ಸಿ ವಿಜ್ಞಾನ ವಿಭಾಗಕ್ಕೆ ಪಿ.ಸಿ.ಎಂ.ಬಿ ವಿಷಯಕ್ಕೆ ಆಹ್ವಾನಿಸಲಾಗಿರುತ್ತದೆ. ವಿದ್ಯಾರ್ಥಿಗಳು ಅಗತ್ಯ ದಾಖಲಾತಿಗಳೊಂದಿಗೆ 2025ರ ಮೇ 17 ರಂದು ಸಂಜೆ 5 ಗಂಟೆಯ ವರೆಗೆ ಮೊರಾರ್ಜಿ ದೇಸಾಯಿ ವಸತಿ ಶಾಲೆ ಹಾಗೂ ಪದವಿ ಪೂರ್ವ ಕಾಲೇಜು ಬೇವಿನಹಳ್ಳಿ ಕ್ರಾಸ್‌ದಲ್ಲಿ ನೇರವಾಗಿ ಮುದ್ದಾಂ ಅರ್ಜಿಸಲ್ಲಿಸಬೇಕು.

     ಹೆಚ್ಚಿನ ಮಾಹಿತಿಗಾಗಿ ಬೇವಿನಹಳ್ಳಿ ಕ್ರಾಸ್ ಮೊರಾರ್ಜಿ ದೇಸಾಯಿ ವಸತಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರು ದೂ.ಸಂ.9901939936, ದ್ವಿತೀಯ ದರ್ಜೆ ಸಹಾಯಕರು ದೂ.ಸಂ.9972530390ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article

Facebook
X
WhatsApp
Telegram

One Comment

  1. In bevinhalli murargi examination I have also interested in this examination Iam also attempt this exam
    8971393994

Leave a Reply

Your email address will not be published. Required fields are marked *

Cricket Live

Stock Market

Astrology

Gold & Silver Price