ಬಂಗಾರಪೇಟೆ, ಮಾ.4 ವೇಗವಾಗಿ ಬಂದ ಇನ್ನೋವಾ ಕಾರು ಚಾಲಕನ ನಿಯಂತ್ರಣ ತಪ್ಪಿ ಎದುರಿಗೆ ಬರುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ 2 ವರ್ಷದ ಮಗು ಸೇರಿದಂತೆ ನಾಲ್ವರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿರುವ ಘಟನೆ ಚೆನ್ನೈ-ಬೆಂಗಳೂರು ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ರಾತ್ರಿ ನಡೆದಿದೆ.
ಕಾರಿನಲ್ಲಿದ್ದ ಕೆಜಿಎಫ್ ತಾಲೂಕಿನ ಕಮ್ಮಸಂದ್ರ ಗ್ರಾಮದ ಮಹೇಶ (45), ಉದ್ವಿತ (2), ರತ್ನಮ್ಮ (60) ಹಾಗೂ ಬೈಕ್ ಸವಾರ ದುರ್ದೈವಿಗಳಾಗಿದ್ದಾರೆ. ಮೃತ ಘಟನೆಯಲ್ಲಿ ಸುಶ್ಮಿತಾ, ವಿರುತ, ಸುಜಾತ ಸುನಿಲ್ ಎಂಬ ನಾಲ್ವರಿಗೆ ಗಂಭೀರ ಗಾಯವಾಗಿದ್ದು, ಅವರನ್ನು ಕೋಲಾರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೆಂಗಳೂರಿನಲ್ಲಿ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಸಂಬಂಧಿಕರು ಡಿಸ್ಪಾರ್ಜ್ ಆಗಿದ್ದರು. ಅವರನ್ನು ಕರೆದುಕೊಂಡು ಮಹೇಶ ಎಂಬುವರು ಬೇತಮಂಗಲಕ್ಕೆ
ಬಿಟ್ಟು ವಾಪಸ್ ಗ್ರಾಮಕ್ಕೆ ರಾತ್ರಿ 11.45ರ ಸುಮಾರಿನಲ್ಲಿ ತಾಲ್ಲೂಕು ಕುಪ್ಪನಹಳ್ಳಿ ಬಳಿ ಬರುತ್ತಿದ್ದಾಗ ಪ್ರಾಣಾಪಾಯದಿ೦ದ ಪಾರಾಗಿದ್ದಾರೆ ಅಪಘಾತದಲ್ಲಿ ಮೃತಪಟ್ಟಿರುವ ಬೈಕ್ ಸವಾರನ ಎದುರಿಗೆ ಬಂದ ಬೈಕ್‌ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಏಕಾಏಕಿ ಬ್ರೇಕ್ ಹಾಕಿದ ಪರಿಣಾಮ ನಿಯಂತ್ರಣಕ್ಕೆ ಸಿಗದೆ ಬೈಕ್‌ಗೆ ಡಿಕ್ಕಿ ಹೊಡೆದು ಮೂರು ಬಾರಿ ಪಲ್ಟಿಯಾದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.
ಅತಿ ವೇಗವೇ ಈ ಅಪಘಾತಕ್ಕೆ ಕಾರಣವಾಗಿದ್ದು ಕಾರಿನ ಚಾಲಕ ಗುರುತು ಪತ್ತೆ ಹಚ್ಚಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸುದ್ದಿ ತಿಳಿದು ಬಂಗಾರಪೇಟೆ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ನಾಲ್ವರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
