March 13, 2025 8:30 pm

ಶಿವಾನಂದ‌ ಮೆಂತೆ, ಸಂಪಾದಕ
ಸುದ್ದಿ ಈ‌ದಿನ‌ ಕನ್ನಡ‌ ದಿನಪತ್ರಿಕೆ

Home » ಸುದ್ದಿ » ಮಹತ್ವಾಕಾಂಕ್ಷೆ ಜಿಲ್ಲೆ ಪ್ರಗತಿ ಪರಿಶೀಲನಾ ಸಭೆ ಯೋಜನೆಯ ಕಾರ್ಯಕ್ರಮಗಳನ್ನು ಉತ್ತಮ ರೀತಿಯಲ್ಲಿ ಅನುಷ್ಠಾನಗೊಳ್ಳಿಸಿ; ಜಂಟಿ ಕಾರ್ಯದರ್ಶಿ ಸಮೀರ್ ಶುಕ್ಲಾ

ಮಹತ್ವಾಕಾಂಕ್ಷೆ ಜಿಲ್ಲೆ ಪ್ರಗತಿ ಪರಿಶೀಲನಾ ಸಭೆ ಯೋಜನೆಯ ಕಾರ್ಯಕ್ರಮಗಳನ್ನು ಉತ್ತಮ ರೀತಿಯಲ್ಲಿ ಅನುಷ್ಠಾನಗೊಳ್ಳಿಸಿ; ಜಂಟಿ ಕಾರ್ಯದರ್ಶಿ ಸಮೀರ್ ಶುಕ್ಲಾ

ರಾಯಚೂರು ಫೆ 21: ದೇಶದ ಪ್ರಧಾನಮಂತ್ರಿ ವಿಶೇಷ ಕಾರ್ಯಕ್ರಮಗಳಲ್ಲಿ ಒಂದಾದ ಮಹತ್ವಾಕಾಂಕ್ಷೆ ಜಿಲ್ಲೆ ಯೋಜನೆಯಡಿ ವಿವಿಧ ಕಾರ್ಯಕ್ರಮಗಳನ್ನು ರೂಪಿಸಿದ್ದು, ಅವುಗಳನ್ನು ಜಿಲ್ಲೆಯಲ್ಲಿ ಉತ್ತಮ ರೀತಿಯಲ್ಲಿ ಅನುಷ್ಠಾನಗೊಳ್ಳಿಸಬೇಕೆಂದು ಭಾರತ ಸರ್ಕಾರದ ಹಣಕಾಸು ಸಚಿವಾಲಯದ ಜಂಟಿ ಕಾರ್ಯದರ್ಶಿಗಳಾದ ಸಮೀರ್ ಶುಕ್ಲಾ ಅವರು ಹೇಳಿದರು.   
ಫೆ.21ರ ಶುಕ್ರವಾರ ದಂದು ನಗರದ ನೂತನ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಮಹತ್ವಾಕಾಂಕ್ಷೆ ಜಿಲ್ಲೆ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಸಿ ಮಾತನಾಡಿದರು. 
ದೇಶದ ಹಿಂದುಳಿದ 112 ಜಿಲ್ಲೆಗಳಲ್ಲಿ ಮಹತ್ವಾಕಾಂಕ್ಷೆ ಜಿಲ್ಲೆ ಯೋಜನೆ 2018ರಲ್ಲಿ ಜಾರಿಗೊಂಡಿದ್ದು, ವಿವಿಧ ಕ್ಷೇತ್ರಗಳಲ್ಲಿ ಜಿಲ್ಲೆಯನ್ನು ಅಭಿವೃದ್ಧಿ ಪಥದಲ್ಲಿ ಸಾಗಿಸುವುದು ಗುರಿ ಹೊಂದಲಾಗಿದೆ. ಅಲ್ಲದೆ ಜನರ ಆರೋಗ್ಯ ಮತ್ತು ಪೌಷ್ಟಿಕ, ಕೃಷಿ ಮತ್ತು ಜಲ ಸಂಪನ್ಮೂಲ, ಶಿಕ್ಷಣ, ಆರ್ಥಿಕ ಸೇರ್ಪಡೆ ಹಾಗೂ ಕೌಶಲಾಭಿವೃದ್ಧಿ ಮತ್ತು ಮೂಲಸೌಕರ್ಯಗಳ ಕುರಿತು 49 ಸೂಚ್ಯಂಕ ನೀಡಲಾಗಿದೆ.ಇವುಗಳಲ್ಲಿ ಪ್ರಗತಿ ಸಾಧಿಸಿದರೆ ಉತ್ತಮ ರ‍್ಯಾಂಕ್ ಸಿಗುತ್ತಿದ್ದು, ಸಂಬAಧಿಸಿದ ಅಧಿಕಾರಿಗಳು ಜವಬ್ದಾರಿಯನ್ನು ಅರಿತು ಕಾರ್ಯನಿರ್ವಹಿಸಬೇಕೆಂದು ಸೂಚನೆ ನೀಡಿದರು. 
ಜಿಲ್ಲೆಯಲ್ಲಿ ಪಿ.ಎಮ್ ಸ್ವಾನಿಧಿ, ಮುದ್ರಾ ಹಾಗೂ ವಿಶ್ವಕರ್ಮ ಯೋಜನೆಗಳತ್ತ ಹೆಚ್ಚಿನ ಗಮನಹರಿಸಬೇಕು. ಅಲ್ಲದೆ ಕಡ್ಡಾಯವಾಗಿ ಸರ್ಕಾರಿ ಆಸ್ಪತ್ರೆಯಲ್ಲಿ ಮಹಿಳೆಯರ ಹೆರಿಗೆಯ ಪ್ರಮಾಣವನ್ನು ಹೆಚ್ಚಿಸಬೇಕು. ಗರ್ಭಿಣಿಯರಲ್ಲಿ ರಕ್ತಹೀನತೆಯಂತಹ ಸಮಸ್ಯೆಗಳ ಕುರಿತು ಸಂಬAಧಿಸಿದ ಅಧಿಕಾರಿಗಳು ಗಮನಹರಿಸಬೇಕು. ಆರೋಗ್ಯ ಇಲಾಖೆಯಲ್ಲಿ ಖಾಲಿವಿರುವ ವಿವಿಧ ಹುದ್ದೆಗಳ ಭರ್ತಿಗೆ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವಂತೆ ಅಧಿಕಾರಿಗಳನ್ನು ಸೂಚನೆ ನೀಡಿದರು.   
ಕಡಿಮೆ ತೂಕದ ಶಿಶುಗಳ ಜನನವನ್ನು ಶೇಕಡಾವಾರು ಕಡಿಮೆ ಮಾಡುವಲ್ಲಿ ಆರೋಗ್ಯ ಕ್ಷೇತ್ರವು ತನ್ನ ಸಾಧನೆಗಳನ್ನು ಮಾಡಿದ್ದು, ಈ ಕಾರ್ಯಕ್ಕೆ ಭಾರತ ಸರ್ಕಾರದ ಹಣಕಾಸು ಸಚಿವಾಲಯದ ಜಂಟಿ ಕಾರ್ಯದರ್ಶಿಗಳು ಶ್ಲಾಘಿಸಿದರು. ಇದಲ್ಲದೆ ಐಸಿಡಿಎಸ್ ಕಾರ್ಯಕ್ರಮದ ಅಡಿಯಲ್ಲಿ ನಿಯಮಿತವಾಗಿ ಪೂರಕ ಪೌಷ್ಟಿಕಾಂಶವನ್ನು ಪಡೆಯುವ ಮಹಿಳೆಯರ ಸಂಖ್ಯೆ ಮತ್ತು ರೋಗಿಗಳಿಗೆ ಒದಗಿಸಲಾದ ಪ್ರೋಟೀನ್-ಭರಿತ ಆಹಾರಗಳ ಕುರಿತು ಶಿಕ್ಷಣ, ಕೃಷಿ ಮತ್ತು ಜಲಸಂಪನ್ಮೂಲಗಳು, ಆರ್ಥಿಕ ಸೇರ್ಪಡೆ ಮತ್ತು ಕೌಶಲ್ಯ ಅಭಿವೃದ್ಧಿ ಮತ್ತು ಮೂಲಭೂತ ಮೂಲಸೌಕರ್ಯಗಳಂತಹ ಪ್ರಮುಖ ಕ್ಷೇತ್ರಗಳಲ್ಲಿನ ಅಭಿವೃದ್ಧಿ ಮತ್ತು ಸವಾಲುಗಳನ್ನು ಸಂಬAಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಿದರು. 
ಎಮ್.ಸಿ.ಹೆಚ್ ಆಸ್ಪತ್ರೆಗೆ ಭೇಟಿ; ನಗರದ ಜಿಲ್ಲಾ ಪೊಲೀಸ ವರಿಷ್ಠಾಧಿಕಾರಿಗಳ ಕಚೇರಿಯ ಎದರುಗಡೆ ಇರುವ ತಾಯಿ ಮತ್ತು ಮಕ್ಕಳ ಸರ್ಕಾರಿ ಆಸ್ಪತ್ರೆಗೆ ಭಾರತ ಸರ್ಕಾರದ ಹಣಕಾಸು ಸಚಿವಾಲಯದ ಜಂಟಿ ಕಾರ್ಯದರ್ಶಿಗಳಾದ ಸಮೀರ್ ಶುಕ್ಲಾ ಅವರು ಭೇಟಿ ನೀಡಿ ಮೂಲಭೂತ ಸೌಕರ್ಯಗಳನ್ನು ಪರಿಶೀಲಿಸಿ ಆಸ್ಪತ್ರೆಗೆ ಬರುವ ತಾಯಿ ಮತ್ತು ಮಕ್ಕಳಿಗೆ ಉತ್ತಮ ರೀತಿಯ ಚಿಕಿತ್ಸೆ ನೀಡಬೇಕೆಂದು ಸಂಬAಧಿಸಿದ ಅಧಿಕಾರಿಗಳಿಗೆ ಸೂಚನ ನೀಡಿದರು. ಈ ವೇಳಿ ಗರ್ಭಿಣಿ ಮಹಿಳೆಯರೊಂದಿಗೆ ಮಾತನಾಡಿ, ಆಸ್ಪತ್ರೆಯಲ್ಲಿ ಸಿಗುವ ಆರೋಗ್ಯ ಸೌಲಭ್ಯಗಳ ಕುರಿತು ಚರ್ಚಿಸಿದರು. ನಂತರ ಸ್ಕ್ಯಾನಿಂಗ್ ಕೊಠಡಿಗೆ ಭೇಟಿ ನೀಡಿ ವೀಕ್ಷಣೆ ಮಾಡಿ ಡಿ.ಎಚ್.ಒ, ಆರ್.ಸಿ.ಹೆಚ್ ಅಧಿಕಾರಿ ಹಾಗೂ ಅಲ್ಲಿನ ಸಿಬ್ಬಂದಿಗಳೊAದಿಗೆ ಚರ್ಚಿಸಿ, ಔಷದ ವಿತರಣೆ ವಿಭಾಗಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ನಂತರ ಲಸಿಕಾ ಕೊಠಡಿಗೆ ತಾಯಿ ಮತ್ತು ಮಕ್ಕಳಿಗೆ ನೀಡುವ ಲಸಿಕೆ ಕುರಿತು ಮಾಹಿತಿ ಪಡೆದು ಲಸಿಕೆಯ ಮಾಹಿತಿಯನ್ನು ಆನ್ಲೈಲ್‌ನಲ್ಲಿ ನೋಂದಣೆ ಮಾಡಬೇಕೆಂದು ಸಂಬAಧಿಸಿದ ಅಧಿಕಾರಿಗಳಿಗೆ ಸೂಚಿಸಿ, ಹಾಜರಾತಿ ಪುಸ್ತಕವನ್ನು ಪರಿಶೀಲಿಸಿದರು. 
ಅಂಗನವಾಡಿ ಹಾಗೂ ಆದರ್ಶ ವಿದ್ಯಾಲಯಕ್ಕೆ ಭೇಟಿ; ನಗರದ ಪೊಲೀಸ ಕಾಲೋನಿಯ ಅಂಗನವಾಡಿ ಕೇಂದ್ರ-12ಕ್ಕೆ ಭೇಟಿ ನೀಡಿ ಮಕ್ಕಳ ಕಲಿಕೆಯನ್ನು ವೀಕ್ಷಣೆ ಮಾಡಿದರು. ಈ ವೇಳೆ ಮಕ್ಕಳಿಗೆ ನೀಡುವ ಆಹಾರದ ವಿವರಣೆಯನ್ನು ಅಂಗನವಾಡಿ ಅಧಿಕಾರಿಗಳಿಂದ ಪಡೆದರು. ಈ ವೇಳೆ ಮಕ್ಕಳ ಬಿಡಿಸಿದ ವಿವಿಧ ಚಿತ್ರಕಲಾವನ್ನು ವೀಕ್ಷಣೆ ಮಾಡಿದರು. ಮಕ್ಕಳಿಂದ ನೃತ್ಯ ಪ್ರದರ್ಶನ ಮಾಡಲಾಯಿತು. ಈ ವೇಳೆ ಭಾರತ ಸರ್ಕಾರದ ಹಣಕಾಸು ಸಚಿವಾಲಯದ ಜಂಟಿ ಕಾರ್ಯದರ್ಶಿಗಳಾದ ಸಮೀರ್ ಶುಕ್ಲಾ ಅವರು ಮಕ್ಕಳ ಪ್ರತಿಭೆ ನೋಡಿ ಪ್ರಶಂಸೆ ವ್ಯಕ್ತಪಡಿಸಿದರು. ನಂತರ ನಗರದ ಯರಮರಸಿನ ಸರ್ಕಾರಿ ಆದರ್ಶ ವಿದ್ಯಾಲಯದ ಗ್ರಂಥಾಲಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ವಿದ್ಯಾರ್ಥಿಗಳಿಗೆ ಕಿಟ್‌ಗಳನ್ನು ವಿತರಣೆ ಮಾಡಿದರು. 
ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ನಿತೀಶ್ ಕೆ., ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ತುಕಾರಂ ಪಾಂಡ್ವೆ, ರಾಯಚೂರು ಮಹಾನಗರ ಪಾಲಿಕೆ ಆಯುಕ್ತರಾದ ಜುಬೀನ್ ಮೊಹೋಪಾತ್ರ, ಅಪರ ಜಿಲ್ಲಾಧಿಕಾರಿ ಶಿವಾನಂದ, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಡಾ.ಟಿ.ರೋಣಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ.ಸುರೇಂದ್ರ ಬಾಬು, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ನಂದಿತಾ, ಕೌಶಲಾಭಿವೃದ್ಧಿಕಾರಿ ಜಿ.ಯು.ಹುಡೇದ್, ಕೈಗಾರಿಕಾರಿ ಅಧಿಕಾರಿ ಬಸವರಾಜ ಯರಕಂಚಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ನವೀನ್ ಕುಮಾರ್, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಚಿದಾನಂದ, ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಜಯಪ್ರಕಾಶ್, ಪಶು ಸಂಗೋಪಾನ ಇಲಾಖೆಯ ಅಧಿಕಾರಿ ಡಾ.ಅಶೋಕ ಕೋಲಕಾರ್ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.     

Share This Article

Facebook
X
WhatsApp
Telegram

Leave a Reply

Your email address will not be published. Required fields are marked *

Cricket Live

Stock Market

Astrology

Gold & Silver Price