ಕಲಬುರಗಿ,ಫೆ.28: ಪ್ರಸಕ್ತ 2024-25ನೇ ಶೈಕ್ಷಣಿಕ ದ್ವಿತೀಯ ಪಿ.ಯು.ಸಿ. ಪರೀಕ್ಷೆ-1 ಇದೇ ಮಾರ್ಚ್ 1 ರಿಂದ 20ರ ವರೆಗೆ ನಡೆಯಲಿದ್ದು, ಜಿಲ್ಲೆಯಾದ್ಯಂತ ಯಾವುದೇ ಅಹಿತಕರ ಘಟನೆಗೆ ಅವಕಾಶ ಮಾಡಿಕೊಡದೇ ಸುಸೂತ್ರವಾಗಿ ಮತ್ತು ಪಾರದರ್ಶಕ ರೀತಿಯಲ್ಲಿ ಪರೀಕ್ಷೆ ನಡೆಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಸೂಚನೆ ನೀಡಿದರು. ಗುರುವಾರ ಇಲ್ಲಿನ ಡಿ.ಸಿ. ಕಚೇರಿ ಸಭಾಂಗಣದಲ್ಲಿ ಪರೀಕ್ಷಾ ಕೇಂದ್ರ ಮುಖ್ಯಸ್ಥರು, ಮಾರ್ಗಾಧಿಕಾರಿಗಳು, ವೀಕ್ಷಕರೊಂದಿಗೆ ಪೂರ್ವಸಿದ್ಧತಾ ಸಭೆ ನಡೆಸಿದ ಅವರು, ವಿದ್ಯಾರ್ಥಿ ಘಟ್ಟದ ಪ್ರಮುಖ ಹಂತದ ಪರೀಕ್ಷೆ ಇದಾಗಿರುವುದರಿಂದ ಎಲ್ಲಿಯೂ ಲೋಪವಾಗದಂತೆ ಪಾರದರ್ಶಕವಾಗಿ ನಡೆಸಬೇಕು. ಯಾವುದೇ ರೀತಿಯ ನಕಲಿಗೆ ಇಲ್ಲಿ ಅವಕಾಶ ಇಲ್ಲ ಎಂದ ಅವರು ಎಲ್ಲಾದರು ನಕಲು ಪ್ರಕರಣ ವರದಿಯಲ್ಲಿ ಸಂಬಧಪಟ್ಟ ಅಧಿಕಾರಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. ದ್ವಿತೀಯ ಪಿ.ಯು.ಸಿ ಪರೀಕ್ಷೆ-1ಕ್ಕೆ ಕಲಬುರಗಿ ನಗರದಲ್ಲಿ 25 ಮತ್ತು ತಾಲೂಕಾ ಪ್ರಾಂತ್ಯದಲ್ಲಿ 26 ಸೇರಿ 51 ಪರೀಕ್ಷಾ ಕೇಂದ್ರಗಳು ಗುರುತಿಸಲಾಗಿದೆ. ರೆಗ್ಯೂಲರ್ ಆಗಿ 27,994 ಮತ್ತು ಖಾಸಗಿಯಾಗಿ 741 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಇನ್ನು 2,683 ಪುನರಾವರ್ತಿತ ಅಭ್ಯರ್ಥಿಗಳು, ಫಲಿತಾಂಶ ಹೆಚ್ಚಳಕ್ಕೆ 31 ಜನ ಪರೀಕ್ಷೆ ಬರೆಯಲು ನೋಂದಣಿ ಮಾಡಿಕೊಂಡಿದ್ದಾರೆ ಎಂದು ಅವರು ತಿಳಿಸಿದರು. ಪರೀಕ್ಷೆ ಸುಗಮವಾಗಿ ನಡೆಯುವ ಸಂಬAಧ ಪ್ರತಿ ಪರೀಕ್ಷಾ ಕೇಂದ್ರಕ್ಕೆ ಮುಖ್ಯ ಅಧೀಕ್ಷಕರನ್ನು ನೇಮಿಸಲಾಗಿದೆ. ಪರೀಕ್ಷೆ ನಡೆಯುವ ಮುನ್ನವೆ ಪರೀಕ್ಷಾ ಕೇಂದ್ರದಲ್ಲಿ ಅಗತ್ಯ ಮೂಲಸೌಕರ್ಯಗಳಾದ ವಿದ್ಯುತ್, ಕುಡಿಯುವ ನೀರು,ಶೌಚಾಲಯ ಇರುವುದನ್ನು ಕೇಂದ್ರದ ಮುಖ್ಯಸ್ಥರು ಖಾತ್ರಿಪಡಿಸಿಕೊಳ್ಳಬೇಕು. ಪ್ರತಿ ಪರೀಕ್ಷಾ ಕೇಂದ್ರದ ಪ್ರವೇಶ ದ್ವಾರದಲ್ಲಿ ತಪಾಸಣೆಗೆ ಹತ್ತಿರದ ಪೊಲೀಸ್ ಠಾಣೆಯಿಂದ ಪೊಲೀಸ್ ಸಿಬ್ಬಂದಿ ಸೇವೆ ಪಡೆಯುವಂತೆ ಸೂಚಿಸಲಾಯಿತು. ಪರೀಕ್ಷಾ ಕೇಂದ್ರದ ಅಧೀಕ್ಷರು, ಸಹ ಮುಖ್ಯ ಅಧ್ಯಕ್ಷರು, ವಿಶೇ³À ಜಾಗೃತ ದಳದ ಸದಸ್ಯರು ಬೆಳಿಗ್ಗೆ 7.30 ಗಂಟೆಗೆ ಪರೀಕ್ಷಾ ಕೇಂದ್ರದಲ್ಲಿ ಹಾಜರಿರಬೇಕು ಮತ್ತು ಕಡ್ಡಾಯವಾಗಿ ಗುರುತಿನ ಚೀಟಿ ಧರಿಸಿರಬೇಕು. ಪರೀಕ್ಷೆಗೆ ಸಂಬAಧಿಸಿದ ಸಿಬ್ಬಂದಿ ಮತ್ತು ವಿದ್ಯಾರ್ಥಿ ಹೊರತುಪಡಿಸಿ ಪರೀಕ್ಷಾ ಕೇಂದ್ರದ ಆವರಣದಲ್ಲಿ ಮೂರನೇ ವ್ಯಕ್ತಿಗೆ ಪ್ರವೇಶವಿಲ್ಲ ಎಂದು ಡಿ.ಸಿ ಪಡಿಸಿದರು. ಮೊಬೈಲ್ ಬ್ಯಾನ್,ಸಿ.ಸಿ.ಟಿ.ವಿ. ಕಣ್ಗಾವಲಿನಲ್ಲಿ ಪರೀಕ್ಷೆ: ಕೇಂದ್ರದಲ್ಲಿ ಮೊಬೈಲ್ ಪರೀಕ್ಷೆ ಸುಸೂತ್ರವಾಗಿ ನಡೆಯುವ ನಿಟ್ಟಿನಲ್ಲಿ ಪರೀಕ್ಷಾ ಸೇರಿದಂತೆ ಎಲ್ಲಾ ರೀತಿಯ ಎಲೆಕ್ಟಾ ್ರನಿಕ್ ಸಾಧನಗಳ ಬಳಕೆಯನ್ನು ಸಂಪೂರ್ಣವಾಗಿ . ಸಿ.ಸಿ.ಟಿ.ವಿ ಕಣ್ಗಾವಲಿನಲ್ಲಿ ಪರೀಕ್ಷೆ ನಡೆಯಲಿದ್ದು, ಜಿಲ್ಲಾ ಕೇಂದ್ರದಿAದ ವೆಬ್‌ಕಾಸ್ಟಿಂಗ್ ಮೂಲಕ ಪರೀಕ್ಷೆ ಮೇಲ್ವಿಚಾರಣೆ ಮಾಡಲಾಗುತ್ತದೆ ಎಂದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಕಲಬುರಗಿ ನಗರ ಪೊಲೀಸ್ ಉಪ ಆಯುಕ್ತ ಪ್ರವೀಣ ಎಚ್.ನಾಯಕ್, ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ಉಪನಿರ್ದೇಶಕ ಅಶೋಕ ಶಾಸ್ತ್ರಿ ಸೇರಿದಂತೆ ಇನ್ನಿತರ ಅಧಿಕಾರಿಗಳು ಇದ್ದರು.







Users Today : 0
Users Yesterday : 3
Users Last 7 days : 37