March 13, 2025 10:44 am

ಶಿವಾನಂದ‌ ಮೆಂತೆ, ಸಂಪಾದಕ
ಸುದ್ದಿ ಈ‌ದಿನ‌ ಕನ್ನಡ‌ ದಿನಪತ್ರಿಕೆ

Home » ಯಾದಗಿರ » ಮಾರ್ಚ್ 8 ರಂದು ವಿಶ್ವ ಮಹಿಳಾ ದಿನಾಚರಣೆ ನೈಮಲ್ಯ ಮತ್ತು ಶುಚಿತ್ವದ ವಿಷಯಧಾರಿತ ವಿವಿಧ ಜನ ಜಾಗೃತಿ ಕಾರ್ಯಕ್ರಮ

ಮಾರ್ಚ್ 8 ರಂದು ವಿಶ್ವ ಮಹಿಳಾ ದಿನಾಚರಣೆ ನೈಮಲ್ಯ ಮತ್ತು ಶುಚಿತ್ವದ ವಿಷಯಧಾರಿತ ವಿವಿಧ ಜನ ಜಾಗೃತಿ ಕಾರ್ಯಕ್ರಮ



ಯಾದಗಿರಿ : 05 ಮಾರ್ಚ್ 25, :  ಜಿಲ್ಲೆಯ ಗ್ರಾಮ ಪಂಚಾಯತಗಳಲ್ಲಿ 2025ರ ಮಾರ್ಚ್ 8 ರಂದು ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ನೀರು, ನೈಮಲ್ಯ ಮತ್ತು ಶುಚಿತ್ವದ ವಿಷಯಧಾರಿತ ವಿವಿಧ ಜನ ಜಾಗೃತಿ ಚಟುವಟಿಕೆ, ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಯಾದಗಿರಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀ ಲವೀಶ್ ಒರಡಿಯಾ ಅವರು ತಿಳಿಸಿದ್ದಾರೆ.

     ಮಾರ್ಚ್ 8ರ ಶನಿವಾರ ರಂದು ಅಂತರರಾಷ್ಟಿçÃಯ ಮಹಿಳಾ ದಿನವನ್ನಾಗಿ ಆಚರಣೆ ಮಾಡಲಾಗುತ್ತಿದೆ, ಸ್ವಚ್ಛ ಭಾರತ್ ಮಿಷನ್ ಗ್ರಾಮೀಣ ಯೋಜನೆಯಡಿ ಗ್ರಾಮೀಣ ಪ್ರದೇಶದಲ್ಲಿ ಸ್ವಚ್ಛ ಭಾರತ್ ಮಿಷನ್ (ಗ್ರಾ) ಮತ್ತು ಜಲಜೀವನ್ ಮಿಷನ್ ಯೋಜನೆಗಳಡಿ ಶುದ್ಧ ಸುರಕ್ಷಿತ ಕುಡಿಯುವ ನೀರು, ನೈರ್ಮಲ್ಯ ಮತ್ತು ಶುಚಿತ್ವ (ವಾಶ್) ಸೌಲಭ್ಯಗಳನ್ನು ಒದಗಿಸುವಲ್ಲಿ ಹಾಗೂ ಈ ಕಾರ್ಯಕ್ರಮಗಳನ್ನು ಮುನ್ನಡೆಸುವಲ್ಲಿ ಮಹಿಳೆಯರು ನೀಡಿರುವ ಅಮೂಲ್ಯ ಕೊಡುಗೆಗಳನ್ನು ಗುರುತಿಸಲು ಈ ವಿಶ್ವ ಮಹಿಳಾ ದಿನಾಚರಣೆಯು ಅದ್ಭುತ ಅವಕಾಶವನ್ನು ಒದಗಿಸುತ್ತದೆ. ಮಹಿಳೆಯರು ನೈರ್ಮಲ್ಯ, ಶುಚಿತ್ವ ಆಂದೋಲನದಲ್ಲಿ ಮುಂಚೂಣಿಯಲ್ಲಿದ್ದು ಗ್ರಾಮೀಣ ಪ್ರದೇಶದಲ್ಲಿನ ಪ್ರಮುಖ ಸಮುದಾಯಗಳು, ನೈರ್ಮಲ್ಯ ಸ್ವತ್ತುಗಳನ್ನು ನಿರ್ವಹಿಸುವುದು, ಉತ್ತಮ ನೈರ್ಮಲ್ಯ ಅಭ್ಯಾಸಗಳನ್ನು ಉತ್ತೇಜಿಸುವುದು, ಜನರ ನಡವಳಿಕೆ ಬದಲಾವಣೆ ತರುವುದು ಹಾಗೂ ಗ್ರಾಮಗಳಲ್ಲಿ ನೈರ್ಮಲ್ಯ ಸುಸ್ಥಿರತೆ ಸ್ಥಿತಿಯನ್ನು ಮುಂದುವರೆಸಲು ಮಹಿಳೆಯರ ಪಾತ್ರ ಪ್ರಮುಖವಾಗಿದೆ.

     ನಿಟ್ಟಿನಲ್ಲಿ 2025ರ ಮಾರ್ಚ್ 8ರ ಶನಿವಾರ ರಂದು ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ಜಿಲ್ಲೆಯ  ಗ್ರಾಮ ಪಂಚಾಯಿತಿಗಳಲ್ಲಿ ಮಹಿಳೆಯರಿಗೆ ನೀರು, ನೈರ್ಮಲ್ಯ ಮತ್ತು ಶುಚಿತ್ವ ವಿಷಯಗಳ ಕುರಿತು ಜಾಗೃತಿ ಮೂಡಿಸಲು ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲು ಈ ಪತ್ರಕ್ಕೆ ಲಗತ್ತಿಸಿದ ವೇಳಾಪಟ್ಟಿಯಂತೆ ವಿವಿಧ ಜನ ಜಾಗೃತಿ ಕಾರ್ಯಕ್ರಮ, ಚಟುವಟಿಕೆ, ಆಯೋಜಿಸಲು ಸಂಬAಧಪಟ್ಟ ಗ್ರಾಮ ಪಂಚಾಯತಿಗೆ ಸೂಚಿಸಿದೆ.

     ಅಭಿಯಾನದಲ್ಲಿ ಚುನಾಯಿತ ಪ್ರತಿನಿದಿ, ಸಾರ್ವಜನಿಕರು, ಮಹಿಳೆಯರು, ಕೀಶೋರಿಯವರು, ಯುವಕರು, ಮಕ್ಕಳು, ಅಧಿಕಾರಿ-ಸಿಬ್ಬಂದಿಯವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು, 2025ರ ಮಾರ್ಚ್ 8 ರಂದು ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯು ಜಿಲ್ಲೆ ಮತ್ತು ತಾಲ್ಲೂಕುಗಳಲ್ಲಿ ನೀರು ನೈರ್ಮಲ್ಯ ಮತ್ತು ಶುಚಿತ್ವ ವಿಷಯಗಳ ಕುರಿತು ಜಾಗೃತಿ ಮೂಡಿಸಲು ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲು ಹಾಗೂ ಜಿಲ್ಲಾ ಕೇಂದ್ರಗಳಲ್ಲಿ ಗ್ರಾಮೀಣ ವಾಶ್ ನಾಯಕಿ (Sheಡಿoes oಜಿ ಖuಡಿಚಿಟ WಂSಊ) ಯರನ್ನು ಗುರುತಿಸಿ ಗೌರವಿಸಲು ಹಾಗೂ ವಿವಿಧ ಚಟುವಟಿಕೆಗಳನ್ನು ಪರಿಣಾಮಕಾರಿಯಾಗಿ ಹಮ್ಮಿಕೊಳ್ಳಲು ಕ್ರಮವಹಿಸುವಂತೆ ಉಲ್ಲೇಖಿತ(2)ರ ಪತ್ರದಲ್ಲಿ ಕಾರ್ಯದರ್ಶಿಗಳು, ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಜಲಶಕ್ತಿ ಮಂತ್ರಾಲಯ ಇವರು ಸೂಚಿಸಿರುತ್ತಾರೆ. ಈ ಹಿನ್ನೆಲೆಯಲ್ಲಿ ಕೇಂದ್ರ ಜಲಶಕ್ತಿ ಮಂತ್ರಾಲಯವು ಸೂಚಿಸಿರುವಂತೆ ಕೆಳಕಂಡ ಚಟುವಟಿಕೆಗಳನ್ನು ಜಿಲ್ಲೆ, ತಾಲ್ಲೂಕು ಮತ್ತು ಗ್ರಾಮ ಪಂಚಾಯಿತಿ ಹಂತದಲ್ಲಿ ಹಮ್ಮಿಕೊಳ್ಳಲು ಅಗತ್ಯ ಕ್ರಮವಹಿಸಬೇಕು.

ಸ್ವಚ್ಛತೆಗಾಗಿ ಓಟ : ಸ್ವಚ್ಛ ಭಾರತ್ ಮಿಷನ್ ಮತ್ತು ಜಲ ಜೀವನ್ ಮಿಷನ್ ಯೋಜನೆಗಳಡಿ ಉತ್ತಮ ಸೇವೆ ಮಾಡಿರುವ ಯುವತಿಯರು, ಮಹಿಳಾ ಸ್ವಚ್ಛತಾ ಚಾಂಪಿಯನ್‌ಗಳು, ನೈರ್ಮಲ್ಯ ಕಾರ್ಯಕರ್ತೆಯರು, ಗ್ರಾಮ ನೀರು ಮತ್ತು ನೈರ್ಮಲ್ಯ ಸಮಿತಿ ಸದಸ್ಯರು ಮತ್ತು ಸಮುದಾಯದ ಪ್ರಭಾವಿಗಳನ್ನು ಒಳಗೊಂಡು ನೈರ್ಮಲ್ಯ ಓಟವನ್ನು ಆಯೋಜಿಸುವ ಮೂಲಕ ಗ್ರಾಮೀಣ ಜನರಲ್ಲಿ ನೀರು, ನೈರ್ಮಲ್ಯ ಮತ್ತು ಶುಚಿತ್ವ (WಂSಊ) ಕುರಿತು ಜಾಗೃತಿ ಮೂಡಿಸಲು “ಸ್ವಚ್ಛತೆಗಾಗಿ ಓಟ”ವನ್ನು ಆಯೋಜಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article

Facebook
X
WhatsApp
Telegram

Leave a Reply

Your email address will not be published. Required fields are marked *

Cricket Live

Stock Market

Astrology

Gold & Silver Price