ಕಲಬುರಗಿ:04.ಮಾ.25: ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಶ್ರೀ ರೇಣುಕಾಚಾರ್ಯ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಸಭೆಯಲ್ಲಿ ನಿರ್ಧಾರಿಸಲಾಯಿತು.
ಸೋಮವಾರಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶ್ರೀ ರೇಣುಕಾಚಾರ್ಯ ಜಯಂತಿ ಅಂಗವಾಗಿ ಪೂರ್ವಭಾವಿ ಸಭೆಯಲ್ಲಿ ಮಾರ್ಚ 12 ರಂದು ಮಧ್ಯಾಹ್ನ 12.30 ಗಂಟೆಗೆ ಸಾರ್ವಜನಿಕ ಉದ್ಯಾನ ವನದಲ್ಲಿರುವ ವೀರಶೈವ ಕಲ್ಯಾಣ ಮಂಟಪದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಸಮಾಜದ ಮುಖಂಡರ ಸರಿಯಾದ ಸಮಯಕ್ಕೆ ಹಾಜರಾಗಿ ಜಯಂತಿ ಆಚರಿಸಲು ಜಿಲ್ಲಾಧಿಕಾರಿಗಳ ಕಾರ್ಯಾಲದ ಚುನಾವಣೆಯ ಶಾಖೆಯ ತಹಶೀಲ್ದಾರ ಪಂಪಯ್ಯ ಸಭೆಯಲ್ಲಿ ತಿಳಿಸಿದರು.
ಅಂದು ಬೆಳಿಗ್ಗೆ 9 ಗಂಟೆಗೆ ಶಾಲಾ ಕಾಲೇಜುಗಳಲ್ಲಿ ಸರಕಾರಿ ಅರೆ ಸರ್ಕಾರಿ ಕಾಲೇಜು ತಾಲೂಕಾ ಪಂಚಾಯತ್ ಕಾರ್ಯಾಲಯಗಳಲ್ಲಿ ತಪ್ಪದೇ ಆಚರಿಸಲು ಸೂಚಿಸಿದರು.
ಆಮಂತ್ರಣ ಪತ್ರಿಕೆಗಳು ಮುದ್ರಿಸಲಾಗುತ್ತದೆ ಗಣ್ಯವ್ಯಕ್ತಿಗಳಿಗೆ ನೀಡಲಾಗುತ್ತಿದೆ ಅಲ್ಲದೇ ತಮಗೂ ಸಹ ಆಮಂತ್ರಣ ಪತ್ರಿಕೆಗಳು ನೀಡಲಾಗುವುದು. ಒಬ್ಬ ನುರಿತ ಉಪನ್ಯಾಸಕರನ್ನು ಒಬ್ಬ ಸಮಿತಿಯ ಅಧ್ಯಕ್ಷರ ಹೆಸರನ್ನು ಸೂಚಿಸಬೇಕು ಎಂದರು.
ಅAದು ನಡೆಯುವ ಕಾರ್ಯಕ್ರಮಮಕ್ಕೆ ಸಕಲ ಸಿದ್ಧತೆಗಳನ್ನು ಮಾಡಲಾಗುತ್ತದೆ ಅಧಿಕಾರಿಗಳು ತಪ್ಪದೇ ಕಾರ್ಯಕ್ರಮಕ್ಕೆ ಆಗಮಿಸಬೇಕು. ವೇದಿಕೆ ಮುಂಭಾಗದಲ್ಲಿ ಒಳಗೆ ಹೊರಗೆ ಸರಿಯಾದ ವ್ಯವಸ್ಥೆ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಸೂಕ್ತ ಪೋಲಿಸ್ ಬಂದೋಬಸ್ತ ಮಾಡಲು ಸಂಬAಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡೊಳ್ಳು,ಕುಣಿತ ಸಂಗೀತ ಕಾರ್ಯಕ್ರಮಗಳನ್ನು ಏರ್ಪಡಿಸಲಾಗುವುದು ಎಂದರು.
ಸಭೆಯಲ್ಲಿ ರೇಣುಕಾಚಾರ್ಯ ಜಯಂತಿ ಸಮಾಜದ ಮುಖಂಡರು ತಮ ಸಲಹೆ ಸೂಚನೆಗಳನ್ನು ನೀಡಿದರು. ಸಭೆಯಲ್ಲಿ ಸಮಾಜದ ಮುಖಂಡರಾದ ರುದ್ರಮನಿ ಮಠದ ಇನ್ನೀತರರು ಭಾಗವಹಿಸಿದ್ದರು.
