ಕಲಬುರಗಿ ನಗರದ ಕೆ.ಸಿ.ಟಿ. ಇಂಜಿನಿಯರಿAಗ್ ಕಾಲೇಜಿನ ಆವರಣದಲ್ಲಿ ಏಪ್ರಿಲ್ 16 ರಂದು ವಿಭಾಗ ಮಟ್ಟದ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದ್ದು, ಜಿಲ್ಲೆಯ ನಿರುದ್ಯೋಗ ಯುವಕ-ಯುವತಿಯರು ಹೆಚ್ಚಿನ ಸಂಖ್ಯೆಯಲ್ಲಿ ಇದರ ಲಾಭ ಪಡೆಯುವಂತೆ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ತುಕಾರಾಂ ಪಾಂಡ್ವೆ ಅವರು ಮನವಿ ಮಾಡಿದರು.
ಏಪ್ರೀಲ್ 08ರ ಮಂಗಳವಾರ ದಂದು ನಗರದ ಜಿಲ್ಲಾ ಪಂಚಾಯತಿಯ ಜಲ ನಿರ್ಮಲ ಸಭಾಂಗಣದಲ್ಲಿ ನಡೆದ ಕಲಬುರಗಿ ವಿಭಾಗ ಮಟ್ಟದ ಬೃಹತ್ ಉದ್ಯೋಗ ಮೇಳದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ನಿರುದ್ಯೋಗ ನಿವಾರಣೆ ನಿಟ್ಟಿನಲ್ಲಿ ಕೌಶಲ್ಯಾಭಿವೃದ್ಧಿ ಇಲಾಖೆಯು ನಿರಂತರವಾಗಿ ಈ ರೀತಿಯ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗುತ್ತಿದೆ. ರಾಜ್ಯದ ಬೇರೆ, ಬೇರೆ ಭಾಗಗಳಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ವೃತ್ತಿಪರ ಕೌಶಲ್ಯ ಹೆಚ್ಚಿಸಲು ನಿರಂತರ ತರಬೇತಿ, ಕಾರ್ಯಾಗಾರ ಸಹ ಆಯೋಜಿಸಲಾಗುತ್ತಿದೆ. ಕಲ್ಯಾಣ ಕರ್ನಾಟಕ ಭಾಗದ ಯುವಕರಿಗೆ ಕಾಲೇಜುವಾರು ಕಾರ್ಯಾಗಾರ ಆಯೋಜಿಸಿದ್ದು, ಇದರ ಲಾಭ ನಿರುದ್ಯೋಗಿ ಸಮುದಾಯದ ಅರ್ಹ ಫಲಾನುಭವಿಗಳು ಪಡೆಯಬೇಕು ಎಂದರು.
22 ಸಾವಿರ ಅಭ್ಯರ್ಥಿಗಳು ಭಾಗವಹಿಸುವ ನಿರೀಕ್ಷೆ: ಬೆಂಗಳೂರಿನ 125 ಸೇರಿದಂತೆ ಹೈದರಾಬಾದ್, ಮುಂಬೈ ಹಾಗೂ ಸ್ಥಳೀಯ ಸುಮಾರು 216 ಕಂಪನಿಗಳು ಈಗಾಗಲೆ ಮೇಳದಲ್ಲಿ ಭಾಗವಹಿಸಲು ನೋಂದಣಿ ಮಾಡಿಕೊಂಡಿವೆ. ಇದುವರೆಗೆ ಸುಮಾರು 7 ಸಾವಿರ ಅಭ್ಯರ್ಥಿಗಳು ಸಹ ನೋಂದಣಿ ಮಾಡಿದ್ದು, ಕಲಬುರಗಿ ವಿಭಾಗ ಮಟ್ಟದ ಉದ್ಯೋಗ ಮೇಳದಲ್ಲಿ ಒಟ್ಟು ಸುಮಾರು 22 ಸಾವಿರ ಅಭ್ಯರ್ಥಿಗಳು ಭಾಗವಹಿಸುವ ನಿರೀಕ್ಷೆ ಹೊಂದಲಾಗಿದೆ ಕೌಶಲ್ಯಾಭಿವೃದ್ಧಿ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.
ನೋಂದಣಿ ಪ್ರಕ್ರಿಯೆ ನಿರಂತರವಾಗಿ ನಡೆಯಲಿದ್ದು, ಆನ್‌ಲೈನ್ ಮೂಲಕ https://skillconnect.kaushalkar.com ನೊಂದಾಯಿಸಿಕೊAಡು ಅಥವಾ ಅಂದೇ ನೇರವಾಗಿಯೂ ಮೇಳದಲ್ಲಿ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ ಎಂದರು.
ಸಚಿವರಿoದ ಪೋಸ್ಟರ್ ಬಿಡುಗಡೆ: ಇದೇ ಏಪ್ರೀಲ್ 16ರಂದು ಕಲಬುರಗಿಯಲ್ಲಿ ವಿಭಾಗ ಮಟ್ಟದ ಬೃಹತ್ ಉದ್ಯೋಗ ಮೇಳದ ಅಂಗವಾಗಿ ಏ.07ರ ಸೋಮವಾರ ದಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ಉದ್ಯೋಗ ಮೇಳದ ಪೋಸ್ಟರ್ ಬಿಡುಗಡೆ ಮಾಡಿದರು. ಈ ವೇಳೆ ಮಹಿಳಾ ಮುಖಂಡರಾದ ಶ್ರೀಮತಿ ನಿರ್ಮಲ ಬೆಣ್ಣೆ ಸೇರಿದಂತೆ ಇತರರು ಇದ್ದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಶಶಿಕಾಂತ್ ಶಿವಪೂರೆ, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿಗಳಾದ ಡಾ.ಟಿ.ರೋಣಿ, ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕರಾದ ಶರಣಬಸವ ಕೆಸರಟ್ಟಿ, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಜಿ.ಯು.ಹುಡೇದ್, ಕೌಶಲ್ಯಾಭಿವೃದ್ದಿ ಇಲಾಖೆಯ ಸಹಾಯಕ ನಿರ್ದೇಶಕರಾದ ರಾಜಶೇಖರ ಪಾಟೀಲ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಜಯಪ್ರಕಾಶ್, ಲೀಡ್ ಬ್ಯಾಂಕ್ ಮ್ಯಾನೇಜರ್ ಟಿ.ತಿರುಮಲ್ಲ, ಸಾರ್ವಜನಿಕ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಕೆ.ಬಿ.ಬಡಿಗೇರ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಸಂಗಮೇಶ, ಕಾರ್ಮಿಕ ಇಲಾಖೆಯ ಅಧಿಕಾರಿ ಆರತಿ, ಆರ್ಸೆಟ್ ನಿರ್ದೇಶಕರಾದ ವಿಜಯಕುಮಾರ್, ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ತರಬೇತಿ ಅಧಿಕಾರಿ ಅನಿಲ್ ಕುಮಾರ ಜಿಂದೆ, ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ತರಬೇತಿ ಅಧಿಕಾರಿ ಸದಾಶಿವಪ್ಪ ಸೇರಿದಂತೆ ಇತರರು ಇದ್ದರು.







Users Today : 1
Users Yesterday : 3
Users Last 7 days : 38