ಫೆ.19 ರಂದು ಛತ್ರಪತಿ ಶಿವಾಜಿ ಜಯಂತಿ ಕಾರ್ಯಕ್ರಮ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ಛತ್ರಪತಿ ಶಿವಾಜಿ ಮಹಾರಾಜ ಜಯಂತಿ ಕಾರ್ಯಕ್ರಮವನ್ನು ಫೆ.19 ರಂದು ಸಂಜೆ 06 ಗಂಟೆಗೆ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮAದಿರದಲ್ಲಿ ಆಯೋಜಿಸಲಾಗಿದೆ. ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಉಸ್ತುವಾರಿ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಅಧ್ಯಕ್ಷತೆ ವಹಿಸುವರು. ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ…