ಅನಧೀಕೃತ ಸ್ವತ್ತುಗಳ ಮಾಲೀಕರು ತಮ್ಮ ನಗರ ಸ್ಥಳೀಯ ಸಂಸ್ಥೆಗೆ ಭೇಟಿ ನೀಡಿ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಿ 7 ದಿನದಲ್ಲಿಯೇ ಇ-ಖಾತಾ ಪಡೆಯಿರಿ–ಡಿ.ಸಿ. ಫೌಜಿಯಾ ತರನ್ನುಮ್
ಕಲಬುರಗಿ,ಫೆ.21.(ಕ.ವಾ.” ರಾಜ್ಯದಲ್ಲಿನ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಅನಧಿಕೃತ ಸ್ವತ್ತುಗಳಿಗೆ ಇ-ಖಾತಾ ನೀಡುವ ಸಂಬಂಧ ಕಾಯ್ದೆ ಮತ್ತು ನಿಯಮಗಳಿಗೆ ತಿದ್ದುಪಡಿ ತರಲಾಗಿದ್ದು, ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಅನಧಿಕೃತ ಸ್ವತ್ತುಗಳ ಮಾಲೀಕರು ತಮ್ಮ ನಗರ ಸ್ಥಳೀಯ ಸಂಸ್ಥೆಗೆ ಭೇಟಿ ನೀಡಿ ಅವಶ್ಯಕ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಿ 7 ದಿನದಲ್ಲಿಯೇ ಇ-ಖಾತಾ ಪಡೆಯಬಹುದಾಗಿದೆ ಎಂದು ಕಲಬುರಗಿ ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ತಿಳಿಸಿದ್ದಾರೆ. ಅನಧೀಕೃತ ಸ್ವತ್ತುಗಳ ಮಾಲೀಕರು ತಮ್ಮ ಸ್ವತ್ತಿನ ಕಂದಾಯವನ್ನು ಪಾವತಿಸಿ ಇ-ಖಾತಾವನ್ನು ಪಡೆಯಬಹುದಾಗಿದೆ….