ಮಾರ್ಚ್ 8 ರಂದು ರಾಷ್ಟ್ರೀಯ ಲೋಕ್ ಅದಾಲತ್: ರಾಜೀ ಸಂಧಾನದ ಮೂಲಕ ಪ್ರಕರಣ ಇತ್ಯರ್ಥ
ಕಲಬುರಗಿ,ಫೆ.28: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಬರುವ ಮಾರ್ಚ್ 8 ರಂದು ಕಲಬುರಗಿ ಜಿಲ್ಲೆಯ ಎಲ್ಲಾ ಜಿಲ್ಲಾ ಮತ್ತು ತಾಲೂಕು ಹಂತದ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕಾ ಅದಲಾತ್ ನಡೆಯಲಿದ್ದು, ರಾಜೀ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗುತ್ತದೆ ಎಂದು ಪ್ರಭಾರಿ ಕಲಬುರಗಿ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಎ.ವಿ.ಶ್ರೀನಾಥ ಹೇಳಿದರು. ಶುಕ್ರವಾರ ಇಲ್ಲಿನ ಕೋರ್ಟ್ ಕಾಂಪ್ಲೆಕ್ಸ್ ಆವರಣದಲ್ಲಿರುವ ಎ.ಡಿ.ಆರ್. ಕಟ್ಟಡದಲ್ಲಿ ಕರೆದ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ನ್ಯಾಯಾಧೀಶರು,…