ಕೊಲಂಬೊ: ದ್ವೀಪ ರಾಷ್ಟ್ರದ ಪ್ರಾದೇಶಿಕ ಜಲಪ್ರದೇಶಕ್ಕೆ ನುಗ್ಗಿದ ಅರೋಪದ ಮೇಲೆ 32 ಭಾರತೀಯ ಮೀನುಗಾರರನ್ನು ಬಂಧಿಸಿದ್ದಾರೆ ಮತ್ತು 5 ಮೀನುಗಾರಿಕಾ ದೋಣಿಗಳನ್ನು ಶ್ರೀಲಂಕಾ ಅಧಿಕಾರಿಗಳು ಭಾನುವಾರ ವಶಪಡಿಸಿಕೊಂಡಿದ್ದಾರೆ ಎಂದು ನೌಕಾಪಡೆ ತಿಳಿಸಿದೆ.
ಮನ್ನಾರ್‌ನ ಉತ್ತರದ ಸಮುದ್ರ ಪ್ರದೇಶದಲ್ಲಿ ಕಾರ್ಯಾಚರಣೆಯ ಸಂದರ್ಭದಲ್ಲಿ ಮೀನುಗಾರರನ್ನು ಬಂಧಿಸಲಾಗಿದೆ ಎಂದು ಶ್ರೀಲಂಕಾ ನೌಕಾಪಡೆ ಹೇಳಿಕೆಯಲ್ಲಿ ತಿಳಿಸಿದೆ.
‘ಶ್ರೀಲಂಕಾದ ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗ ಐದು ಮೀನುಗಾರಿಕಾ ದೋಣಿಗಳನ್ನು ವಶಪಡಿಸಿಕೊಳ್ಳಲಾಗಿದೆ ಮತ್ತು 32 ಭಾರತೀಯ ಮೀನುಗಾರರನ್ನು ಬಂಧಿಸಲಾಗಿದೆ’ ಎಂದು ಹೇಳಿಕೆ ತಿಳಿಸಿದೆ.
ಇತರರ ಅಕ್ರಮ ಮೀನುಗಾರಿಕೆಯನ್ನು ತಡೆಯಲು ನೌಕಾಪಡೆಯು ಶ್ರೀಲಂಕಾದ ಪ್ರದೇಶದಲ್ಲಿ ನಿಯಮಿತ ಗಸ್ತು ಮತ್ತು ಕಾರ್ಯಾಚರಣೆಗಳನ್ನು ಮುಂದುವರೆಸಿದೆ. ಸ್ಥಳೀಯ ಮೀನುಗಾರರ ಜೀವನೋಪಾಯದ ಮೇಲೆ ಆ ಅಭ್ಯಾಸಗಳು ಬೀರುವ ಪರಿಣಾಮವನ್ನು ಗಂಭೀರವಾಗಿ ಪರಿಗಣಿಸಿದೆ ಎಂದು ಹೇಳಿಕೆ ತಿಳಿಸಿದೆ.
ಬಂಧಿತ ಮೀನುಗಾರರನ್ನು ಮತ್ತು ಅವರ ದೋಣಿಗಳನ್ನು ತಲೈಮನ್ನಾರ್ ಪಿಯರ್‌ಗೆ ತರಲಾಗಿದ್ದು, ಕಾನೂನು ಕ್ರಮಕ್ಕಾಗಿ ಮನ್ನಾರ್‌ನ ಮೀನುಗಾರಿಕಾ ನಿರಿ : ಕ ಕ ರಿ ಗ ಹಸ್ತಾಂತರಿಸಲಾಗುವುದು ಎಂದು ನೌಕಾಪಡೆ ತಿಳಿಸಿದೆ.
ಶ್ರೀಲಂಕಾದ ಸಮುದ್ರದಲ್ಲಿ ಮೀನುಗಾರಿಕೆ ಮಾಡಿದ ಆರೋಪದ ಮೇಲೆ ನೌಕಾಪಡೆಯು ಈ ವರ್ಷ ಇದುವರೆಗೆ 131 ಭಾರತೀಯ ಮೀನುಗಾರರನ್ನು ಬಂಧಿಸಿದೆ ಮತ್ತು 18 ಮೀನುಗಾರಿಕಾ ದೋಣಿಗಳನ್ನು ವಶಪಡಿಸಿಕೊಂಡಿದೆ ಎಂದು ಹೇಳಿಕೆ ತಿಳಿಸಿದೆ.
2024 ರಲ್ಲಿ ಶ್ರೀಲಂಕಾದ ನೌಕಾಪಡೆಯು 529 ಭಾರತೀಯ ಮೀನುಗಾರರನ್ನು ಅಕ್ರಮ ಮೀನುಗಾರಿಕೆ ನಡೆಸಿದ ಆರೋಪದ ಮೇಲೆ ಬಂಧಿಸಿತ್ತು.