March 13, 2025 5:50 pm

ಶಿವಾನಂದ‌ ಮೆಂತೆ, ಸಂಪಾದಕ
ಸುದ್ದಿ ಈ‌ದಿನ‌ ಕನ್ನಡ‌ ದಿನಪತ್ರಿಕೆ

Home » ಆರೋಗ್ಯ » ಬೇಸಿಗೆ ದಿನಗಳಲ್ಲಿ ಆರೋಗ್ಯ ಇಲಾಖೆಯಿಂದ ನೀಡಲಾದ ಮುನ್ನೆಚ್ಚರಿಕೆ ಕ್ರಮಗಳನ್ನು ಸಾರ್ವಜನಿಕರು ಪಾಲಿಸಲು ಸೂಚನೆ

ಬೇಸಿಗೆ ದಿನಗಳಲ್ಲಿ ಆರೋಗ್ಯ ಇಲಾಖೆಯಿಂದ ನೀಡಲಾದ ಮುನ್ನೆಚ್ಚರಿಕೆ ಕ್ರಮಗಳನ್ನು ಸಾರ್ವಜನಿಕರು ಪಾಲಿಸಲು ಸೂಚನೆ

ಕಲಬುರಗಿ,3.ಮಾ.25. -ಪ್ರಸ್ತುತ ಹಾಗೂ ಮುಂಬರುವ ಬೇಸಿಗೆ ದಿನಗಳಲ್ಲಿ ಸೂರ್ಯನ ಶಾಖ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಹೀಟ್ ವೇವ್ (ಶಾಖದ ಹೊಡೆತ) ಹೀಟ್ ವೇವ್ ಸ್ಟೋಕನಿಂದಾಗಿ ಸಾರ್ವಜನಿಕರಿಗೆ ಆರೋಗ್ಯದ ಮೇಲೆ ದುಷ್ಟರಿಣಾಮ ಬೀರುವ ಸಾಧ್ಯತೆ ಇದ್ದು, ಆದ್ದರಿಂದ ಎಲ್ಲಾ ಸಾರ್ವಜನಿಕರು ಆರೋಗ್ಯ ಇಲಾಖೆಯಿಂದ ನೀಡಲಾದ ಈ ಕೆಳಕಂಡAತೆ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಿ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕೆಂದು ಕಲಬುರಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಸಲಹೆ ನೀಡಿದ್ದಾರೆ.   ಸಾರ್ವಜನಿಕರು ವಿಶೇಷವಾಗಿ ಮಧ್ಯಾಹ್ನ 12 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಬಿಸಿಲಿನಲ್ಲಿ ಹೋಗುವುದನ್ನು ತಪ್ಪಿಸಬೇಕು. ಹೆಚ್ಚಾಗಿ ಬಾಯಾರಿಕೆ ಇಲ್ಲದಿದ್ದರೂ ಸಹ ಸಾಕಷ್ಟು ನೀರು ಕುಡಿಯಬೇಕು. ಸಾರ್ವಜನಿಕರು ಬಿಸಿಲು ದಿನಗಳಲ್ಲಿ ಕೊಡೆ/ಛತ್ರಿ ಬಳಸಿರಿ ಹಾಗೂ ಸಾಧ್ಯವಾದಷ್ಟು ತಂಪಾದ ಸ್ಥಳಗಳಲ್ಲಿ ಉಳಿಯಲು ಪ್ರಯತ್ನಿಸಬೇಕು. ಸಾಧ್ಯವಾದಷ್ಟು ಹಗುರವಾದ ತಿಳಿ ಬಣ್ಣದ, ಸಡಿಲವಾದ ಹತ್ತಿಯ ಬಟೆ ್ಟಯನ್ನು ಧರಿಸಬೇಕು. ಬಿಸಿಲಿನಲ್ಲಿ ಹೊರಗೆ ಹೋಗುವಾಗ ರಕ್ಷಣಾತ್ಮಕ ಕನ್ನಡಕಗಳು, ಛತ್ರಿ/ಟೋಪಿ, ಬೂಟುಗಳು ಅಥವಾ ಚಪ್ಪಲಗಳನ್ನು ಧರಿಸಬೇಕು. ಹತ್ತಿ ಅಥವಾ ಟರ್ಬನ್ ಟೋಪಿ ಹಾಗೂ ಕೂಲಿಂಗ ಗ್ಲಾಸ್ ಧರಿಸಿ, ಹಿರಿಯ ನಾಗರಿಕರಿಗೆ, ಮಕ್ಕಳಿಗೆ ಹೆಚ್ಚು ನೀರು ಕುಡಿಯಲು ಕೊಡಬೇಕು.  ಮಧ್ಯಾಹ್ನ 12 ರಿಂದ ಮಧ್ಯಾಹ್ನ 3 ರವರೆಗೆ ಹೊರಾಂಗಣ ದೈಹಿಕ ಚಟುವಟಿಕೆಯನ್ನು ಕಡಿಮೆ ಮಾಡಲು ಪ್ರಯತ್ನಿಸಬೇಕು. ದೇಹವನ್ನು ನಿರ್ಜಲೀಕರಣಗೊಳಿಸುವ ಆಲ್ಕೋಹಾಲ, ಚಹಾ, ಕಾಫಿ, ಮತ್ತು ಕಾರ್ಬೂನೇಟೇಡ ತಂಪು ಪಾನೀಯಗಳನ್ನು ಆದಷ್ಟು ಕಡಿಮೆ ಮಾಡಬೇಕು. ಸಾಕಷ್ಟು ನೀರು ಕುಡಿಯಬೇಕು. ಮಜ್ಜಿಗೆ ಮತ್ತು ಗ್ಲೊಕೋಸ್/ಓ.ಆರ್.ಎಸ್. ತಂಪು ಪದಾರ್ಥಗಳನ್ನು ಹೆಚ್ಚು ಉಪಯೋಗಿಸಬೇಕು. ಹೆಚ್ಚಿನ ಪ್ರೋಟೀನ್ ಆಹಾರವನ್ನು ತಪ್ಪಿಸಿ ಮತ್ತು ತಂಗಳ ಆಹಾರವನ್ನು ಸೇವಿಸಬಾರದು. ತಾವು ಹೊರಗೆ ಕೆಲಸ ಮಾಡುತ್ತಿದ್ದರೆ, ಟೋಪಿ ಅಥವಾ ಛತ್ರಿ ಬಳಸಿ ಮತ್ತು ತಲೆ, ಕುತ್ತಿಗೆ, ಮುಖ ಮತ್ತು ಕೈಕಾಲುಗಳ ಮೇಲೆ ಒದ್ದೆಯಾದ ಬಟ್ಟೆಯನ್ನು ಬಳಸಬೇಕು. 

ನಿಲ್ಲಿಸಿದ ವಾಹನಗಳಲ್ಲಿ ಮಕ್ಕಳನ್ನು ಅಥವಾ ಸಾಕು ಪ್ರಾಣಿಗಳನ್ನು ಬಿಡಬಾರದು. ತಮಗೆ ಮೂರ್ಛೆ ಅಥವಾ ತಲೆ ಸುತ್ತುವಿಕೆ ಅನಿಸಿದರೆ ತಕ್ಷಣ ವೈದ್ಯರನ್ನು ಭೇಟಿ ಮಾಡಬೇಕು. ಓಆರ್‌ಎಸ್ ಮನೆಯಲ್ಲಿ ತಯಾರಿಸಿದ ಪಾನೀಯಗಳಾದ ಲಸ್ಸಿ, ಅಕ್ಕಿ ಗಂಜಿ, ನಿಂಬೆ ನೀರು, ಮಜ್ಜಿಗೆ, ಇತ್ಯಾದಿಗಳನ್ನು ಬಳಸಿ, ದೇಹವನ್ನು ಮರ್ರುಜಲೀಕರಣ ಮಾಡಲು ಸಹಾಯ ಮಾಡುತ್ತದೆ. ಪ್ರಾಣಿಗಳನ್ನು ನೆರಳಿನಲ್ಲಿ ಇಟ್ಟು ಅವುಗಳಿಗೆ ಕುಡಿಯಲು ಸಾಕಷ್ಟು ನೀರು ನೀಡಬೇಕು. ತಮ್ಮ ಮನೆಯನ್ನು ತಂಪಾಗಿ ಇರಿಸಿ ಪರದೆಗಳು ಸೆಟ್ಟರ್‌ಗಳು ಅಥವಾ ಸನ್‌ಶೆಡ್‌ಗಳನ್ನು ಬಳಸಿ ರಾತ್ರಿಯಲ್ಲಿ ಕಿಟಕಿಗಳನ್ನು ತೆರೆಯಬೇಕು. ಫ್ಯಾನ್ ಒದ್ದೆ ಬಟೆ ್ಟಗಳನ್ನು ಬಳಸಿ ಮತ್ತು ಆಗಾಗ ತಣ್ಣೀರಿನಲ್ಲಿ ಸ್ನಾನ ಮಾಡಬೇಕು.  ಸನ್‌ಸ್ಟೊçÃಕ್‌ನಿಂದ ಪೀಡಿತ ವ್ಯಕ್ತಿಯ ಚಿಕಿತ್ಸೆಗಾಗಿ ಸಲಹೆಗಳು: ಹಿಟ್‌ಸ್ಟೊçÃಕ್ ಲಕ್ಷಣಗಳನ್ನು ಹೊಂದಿರುವ ವ್ಯಕ್ತಿಯನ್ನು ತಂಪಾದ ಜಾಗಕ್ಕೆ ಸ್ಥಳಾಂತರಿಸಿ, ಶಾಖದ ಹೊಡೆತದಿಂದ ಬಳತ್ತಿರುವ ವ್ಯಕ್ತಿಗೆ ಹತ್ತಿ ಬಟೆ ್ಟಯನ್ನು ಹೊಂದಿರುವAತೆ ನೋಡಿಕೊಂಡು ವ್ಯಕ್ತಿಗೆ ತಣ್ಣೀರಿನಿಂದ ಸ್ಪಾಂಜ್ ಮಾಡಬೇಕು ಅಥವಾ ಐಸ್ ಪ್ಯಾಕ್‌ಗಳನ್ನು ಉಪಯೋಗಿಸಬೇಕು. ಓಆರ್‌ಎಸ್ ಮನೆಯಲ್ಲಿ ತಯಾರಿಸಿದ ಪಾನೀಯಗಳಾದ ಲಸ್ಸಿ, ಅಕ್ಕಿ ಗಂಜಿ ನಿಂಬೆ ನೀರು, ಮಜ್ಜಿಗೆ ಇತ್ಯಾದಿಗಳ್ನು ದೇಹವನ್ನು ಮರ್ರುಜಲೀಕರಣ ಮಾಡಲು ಸಹಾಯ ಮಾಡುತ್ತದೆ. ಹೀಟ್ ವೇವ್ಹ್ ಸ್ಟೊçÃಕ್‌ಗೆ ಒಳಗಾದ ವ್ಯಕ್ತಿಗೆ ಯಾವುದೇ ಸುಧಾರಣೆ ಕಂಡು ಬರದಿದ್ದರೆ ಅವರನ್ನು ತಕ್ಷಣ ಆಸ್ಪತ್ರೆಗೆ ಸ್ಥಳಾಂತರಿಸಬೇಕು. ಶಾಖ-ತರಂಗ ಪರಿಣಾಮಗಳನ್ನು ತಪ್ಪಿಸಲು ಯಾವಾಗಲು ನೀರಿನ ಬಾಟಲಿಯನ್ನು ಜೊತೆಗೆ ತೆಗೆದುಕೊಂಡು ಹೋಗಬೇಕು. ನಿಂಬೆ ನೀರು, ಮಜ್ಜಿಗೆ, ತೆಂಗಿನ ನೀರು, ತಾಜಾ ಹಣ್ಣಿನ ರಸವನ್ನು ನಿಯಮಿತವಾಗಿ ಸೇವಿಸಬೇಕು.  ರೈತರು/ಕೃಷಿ ಕಾರ್ಮಿಕರಿಗೆ ಸಲಹೆಗಳು: ರೈತರು ಹಾಗೂಕೃಷಿ ಕಾರ್ಮಿಕರು ಹೊರಗೆ ಕೆಲಸ ಮಾಡುತ್ತಿದ್ದರೆ ಟೋಪಿ, ರುಮಾಲು ಮತ್ತು ತಮ್ಮ ತಲೆ, ಕುತ್ತಿಗೆ, ಮುಖ ಕೈಕಾಲುಗಳ ಮೇಲೆ ಒದ್ದೆಯಾದ ಬಟೆ ್ಟಗಳನ್ನು ಬಳಸಬೇಕು. ಕೆಲಸ ಮಾಡುವ ಸ್ಥಳದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಇರುವಂತೆ ನೋಡಿಕೊಂಡು ಮೇಲಿಂದ ಮೇಲೆ ನೀರು ಕುಡಿಯಬೇಕು.  ಪ್ರಯಾಣಿಕರಿಗೆ ಸಲಹೆಗಳು: ಪ್ರಯಾಣಿಕರು ಪ್ರಯಾಣ ಬೆಳೆಸುವಾಗ ತಮ್ಮೊಂದಿಗೆ ತಪ್ಪದೇ ನೀರನ್ನು ತೆಗೆದುಕೊಂಡು ಹೋಗಬೇಕು. ತೆಳವಾದ ಹತ್ತಿ ಬಟ್ಟೆಯನ್ನು ಧರಿಸಬೇಕು.  ಹೆಚ್ಚಿನ ಮಾಹಿತಿಗಾಗಿ ತಮ್ಮ ಸಮೀಪದ ಆರೋಗ್ಯ ಕೇಂದ್ರವನ್ನು ಸಂಪರ್ಕಿಸಲು ಅಥವಾ 102 ಅಥವಾ 108 ಗೆ ಕರೆ ಮಾಡಬೇಕೆಂದು ಅವರು ತಿಳಿಸಿದ್ದಾರೆ.

Share This Article

Facebook
X
WhatsApp
Telegram

Leave a Reply

Your email address will not be published. Required fields are marked *

Cricket Live

Stock Market

Astrology

Gold & Silver Price