August 4, 2025 12:48 pm

ಶಿವಾನಂದ‌ ಮೆಂತೆ, ಸಂಪಾದಕ
ಸುದ್ದಿ ಈ‌ದಿನ‌ ಕನ್ನಡ‌ ದಿನಪತ್ರಿಕೆ

Home » ಸುದ್ದಿ » ಮೆಟ್ರಿಕ್ ನಂತರ ಬಾಲಕ ಬಾಲಕಿಯರ ವಿದ್ಯಾರ್ಥಿ ನಿಲಯಗಳ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ

ಮೆಟ್ರಿಕ್ ನಂತರ ಬಾಲಕ ಬಾಲಕಿಯರ ವಿದ್ಯಾರ್ಥಿ ನಿಲಯಗಳ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ

ಬೀದರ 20 ಮೇ.25:- ಬೀದರ ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ನಡೆಸಲಾಗುತ್ತಿರುವ ಮೆಟ್ರಿಕ ನಂತರ ಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ/ಪ,ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ 2025-26ನೇ ಸಾಲಿಗೆ ಆನಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಬೀದರ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ ಪ್ರವರ್ಗ-1, ಎಸ್.ಸಿ & ಎಸ್.ಟಿ ರೂ. 2.50 ಲಕ್ಷ, ಪ್ರವರ್ಗ-2ಎ, 2ಬಿ, 3ಎ, 3ಬಿ, ಇತರೆ ಹಿಂದುಳಿದ ವರ್ಗ ಮತ್ತು ಇತರೆ ರೂ. 1.00 ಲಕ್ಷ ಇದ್ದಿರುತ್ತದೆ. ವಿದ್ಯಾರ್ಥಿಗಳು ವೆಬ್‌ಸೈಟ್  https://shp.karnataka.gov.in/bcwd     ಮೂಲಕ ದಿನಾಂಕ: 20-06-2025 ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ತಾಲ್ಲೂಕಾವಾರು ವಿದ್ಯಾರ್ಥಿನಿಲಯಗಳ ವಿವರಗಳಿಗೆ ವೆಬ್‌ಸೈಟ್  https://bcwd.karnataka.gov.in    ಹಾಗೂ ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ ವೆಬ್‌ಸೈಟ್  bcwdhelpline@gmail.com     ಇ-ಮೇಲ್ ಮುಖಾಂತರ ಅಥವಾ ಜಿಲ್ಲಾ/ ತಾಲ್ಲೂಕಾ ಅಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಬೀದರ ಇವರನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸುವುದು. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 8050770004 ಮತ್ತು 8050770005 ಗೆ ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

Share This Article

Facebook
X
WhatsApp
Telegram

Leave a Reply

Your email address will not be published. Required fields are marked *

Cricket Live

Stock Market

Astrology

Gold & Silver Price