August 4, 2025 1:15 pm

ಶಿವಾನಂದ‌ ಮೆಂತೆ, ಸಂಪಾದಕ
ಸುದ್ದಿ ಈ‌ದಿನ‌ ಕನ್ನಡ‌ ದಿನಪತ್ರಿಕೆ

Home » ಸುದ್ದಿ » ಬಿಸಿಎಂ ವಸತಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

ಬಿಸಿಎಂ ವಸತಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

ರಾಯಚೂರು 21.ಮೇ.25: ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2025-26ನೇ ಸಾಲಿನ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಹೊಸದಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಪ್ರವೇಶ ಬಯಸುವ ಪಿಯುಸಿ ಮತ್ತು ಪಿಯುಸಿ ಸಮನಾಂತರ ಕೋರ್ಸಿನ ವಿದ್ಯಾರ್ಥಿಗಳಿಗೆ ಪ್ರವೇಶಾತಿ ಕಲ್ಪಿಸಲು ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳು ಇಲಾಖೆಯ ವೆಬ್‌ಸೈಟ್ ವಿಳಾಸ:  https://shp.karnataka.gov.in  ನಲ್ಲಿ ಜೂನ್ 20ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಪ್ರವರ್ಗ-1, ಎಸ್.ಸಿ & ಎಸ್.ಟಿ ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯವು 2.5 ಲಕ್ಷ ರೂ. ಹಾಗೂ ಪ್ರವರ್ಗ-2ಎ, 2ಬಿ, 3ಎ, 3ಬಿ ವರ್ಗಗಳ ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯವು 1 ಲಕ್ಷ ರೂಪಾಯಿಗಳ ಒಳಗಿರಬೇಕು.
ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್‌ಸೈಟ್ ವಿಳಾಸ:   https://shp.karnataka.gov.in ನ್ನು ನೋಡಬಹುದು.
ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ  bcwdhelpline@gmail.com ಇ-ಮೇಲ್ ಮುಖಾಂತರ ಅಥವಾ ಜಿಲ್ಲಾ ಅಥವಾ ತಾಲ್ಲೂಕು ಅಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ವಿ.ಜಿ.ಕುಲ್ಕರ್ಣಿ ಆಸ್ಪತ್ರೆ ಹತ್ತಿರ ಅನಿರೀಕ್ಷಿತ ಮನೆ, ಅಜಾದ್ ನಗರ ಕಾಲೋನಿ ರಾಯಚೂರು ಅಥವಾ ದೂರವಾಣಿ ಸಂಖ್ಯೆ: 08532-221072ಗೆ ಸಂಪರ್ಕ ಮಾಡಬಹುದಾಗಿದೆ ಎಂದು ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳಾದ ಮಲ್ಲಿಕಾರ್ಜುನ ರೆಡ್ಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article

Facebook
X
WhatsApp
Telegram

Leave a Reply

Your email address will not be published. Required fields are marked *

Cricket Live

Stock Market

Astrology

Gold & Silver Price