ಫೆಬ್ರವರಿ 24 ರಿಂದ ಕಲಬುರಗಿಯಲ್ಲಿ ರಾಷ್ಟ್ರಮಟ್ಟದ ಬೃಹತ್ ನಮ್ಮ ಸರಸ್ ಮೇಳ- 2025: 20 ರಾಜ್ಯಗಳ ಮಹಿಳಾ ಸ್ವ-ಸಹಾಯ ಗುಂಪುಗಳು ಭಾಗಿ: ಮೇಳ ಯಶಸ್ಸಿಗೆ ಶ್ರಮಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ
ಕಲಬುರಗಿ,ಫೆ.20: ಕಲಬುರಗಿ ನಗರದ ಶ್ರೀ ಶರಣಬಸವೇಶ್ವರ ದೇವಸ್ಥಾನ ಜಾತ್ರೆ ಮೈದಾನದಲ್ಲಿ ಇದೇ ಫೆಬ್ರವರಿ 24 ರಿಂದ ಮಾರ್ಚ್ 5ರ ವರೆಗೆ 10 ದಿನಗಳ ಕಾಲ ಮಹಿಳಾ ಸ್ವ-ಸಹಾಯ ಗುಂಪುಗಳು ತಯ್ಯಾರಿಸಿದ ವಸ್ತುಗಳ ಬೃಹತ್ ರಾಷ್ಟ್ರ ಮಟ್ಟದ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ ನಡೆಸಲು ನಿರ್ಧರಿಸಿರುವ ಕಾರಣ ಕೂಡಲೆ ಮೇಳ ಯಶಸ್ಸಿಗೆ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳುವಂತೆ ಆಧಿಕಾರಿಗಳಿಗೆ ಡಿ.ಸಿ. ಬಿ.ಫೌಜಿಯಾ ತರನ್ನುಮ್ ಸೂಚನೆ ನೀಡಿದರು. ಬುಧವಾರ ಈ ಕುರಿತು ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪೂರ್ವಭಾವಿ…