ಅಬ್ಬೆತುಮಕೂರು ಸಿದ್ದಿ ಪುರುಷ ವಿಶ್ವಾರಾಧ್ಯರ ರಥೋತ್ಸವ ಇಂದು
ಯಾದಗಿರಿ: ಸುಕ್ಷೇತ್ರ ಅಬ್ಬೆತುಮಕೂರಿನ ಸಿದ್ಧಿ ಪುರುಷ ಶ್ರೀ ವಿಶ್ವಾರಾಧ್ಯರ ರಥೋತ್ಸವ ಇಂದು ಸಂಜೆ 6:30ಕ್ಕೆ ಸಡಗರದಿಂದ ನಡೆಯಲಿದೆ ಎಂದು ಶ್ರೀಮಠದ ವಕ್ತಾರ ಡಾ.ಸುಭಾಶ್ಚಂದ್ರ ಕೌಲಗಿ ತಿಳಿಸಿದ್ದಾರೆ. ಪೀಠಾಧಿಪತಿ ಡಾ.ಗಂಗಾಧರ ಮಹಾಸ್ವಾಮಿಗಳು ತೇರಿಗೆ ವಿಶೇಷ ಪೂಜೆಯನ್ನು ನೆರವೇರಿಸಿ,ಉತ್ಸವ ಮೂರ್ತಿಯೊಂದಿಗೆ ಶ್ರೀಗಳು ರಥವನ್ನು ಏರಿದ ಕೂಡಲೇ ಭಕ್ತಾದಿಗಳು ಸಡಗರದಿಂದ ರಥವನ್ನು ಎಳೆದು ಸಂಭ್ರಮ ಪಡುವರು. ರಾತ್ರಿ 8:00 ಗಂಟೆಗೆ ಮಾನವ ಧರ್ಮ ಸಮಾವೇಶ ನಡೆಯುವುದು. ಶ್ರೀಶೈಲ ಪೀಠದ ಜಗದ್ಗುರುಗಳಾದ ಡಾ. ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಭಗವತ್ಪಾದಂಗಳವರು ಸಮಾವೇಶದ ಪಾವನ ಸಾನಿಧ್ಯವನ್ನು…