ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ : ಅತಿಥಿ ಉಪನ್ಯಾಸಕರು, ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ
ಯಾದಗಿರಿ : 08.ಮೇ 25: 2025-26ನೇ ಸಾಲಿನಲ್ಲಿ ಯಾದಗಿರಿ ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಉಪನ್ಯಾಸಕರು, ಶಿಕ್ಷಕರ ಹುದ್ದೆಗಳಿಗೆ ಎದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ತಾತ್ಕಾಲಿಕವಾಗಿ ಅತಿಥಿ ಉಪನ್ಯಾಸಕರು, ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಯಾದಗಿರಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಭಾಗ್ಯಶ್ರೀ ಕುಂಬಾರ ಅವರು ತಿಳಿಸಿದ್ದಾರೆ. ಬೆಂಗಳೂರು ಅಲ್ಪಸಂಖ್ಯಾತರ ನಿರ್ದೇಶನಾಲಯ ನಿರ್ದೇಶಕರ ಪತ್ರದನ್ವಯ 2025-26ನೇ ಸಾಲಿನ ಯಾದಗಿರಿ ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ…