ಏಪ್ರಿಲ್ ತಿಂಗಳಲ್ಲಿ ಜಿಲ್ಲೆಯಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜನೆ: ಜಿಲ್ಲಾಧಿಕಾರಿಗಳಿಂದ ಪೋಸ್ಟರ್ ಬಿಡುಗಡೆ
|

ಏಪ್ರಿಲ್ ತಿಂಗಳಲ್ಲಿ ಜಿಲ್ಲೆಯಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜನೆ: ಜಿಲ್ಲಾಧಿಕಾರಿಗಳಿಂದ ಪೋಸ್ಟರ್ ಬಿಡುಗಡೆ

ಕಲಬುರಗಿ,26.ಮಾ.25.-ಕೌಶಲ್ಯಾಭಿವೃದ್ಧಿ ನಿಗಮದಿಂದ 2025ರ ಏಪ್ರಿಲ್ ತಿಂಗಳಲ್ಲಿ ಕಲಬುರಗಿ ಜಿಲ್ಲೆಯಲ್ಲಿ ಆಯೋಜಿಸುತ್ತಿರುವ ಬೃಹತ್ ಉದ್ಯೋಗ ಮೇಳಕ್ಕೆ ಸಂಬಧಿಸಿದತೆ ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳು ಹಾಗೂ ಇತರೆ ಜಿಲ್ಲೆಯ ಅಭ್ಯರ್ಥಿಗಳಿಗೆ ಉದ್ಯೋಗ ಮೇಳದ ಕುರಿತು ಅರಿವು ಮೂಡಿಸಲು ಕಲಬುರಗಿ ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಗುರುವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ  ಪೋಸ್ಟರ್ ಬಿಡುಗಡೆ  ಮಾಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭಂವರ್ ಸಿಂಗ್ ಮೀನಾ, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ನಾಗೂಬಾಯಿ ಪಿ. ಸೂರ್ಯವಂಶಿ,  ಕಲಬುರಗಿ ಮಹಾನಗರ…

ಕಲಬುರಗಿ ಜಿಲ್ಲೆಯಲ್ಲಿ 2,36,933 ರೈತರಿಗೆ ರೂ. 667.73 ಕೋಟಿ ರೂ. ಪರಿಹಾರ ದೊಡ್ಡ ಮೊತ್ತದ ಪರಿಹಾರದ ಮೂಲಕ ದಾಖಲೆ ಸೃಷ್ಟಿ: ಪ್ರಿಯಾಂಕ್ ಖರ್ಗೆ

ಕಲಬುರಗಿ ಜಿಲ್ಲೆಯಲ್ಲಿ 2,36,933 ರೈತರಿಗೆ ರೂ. 667.73 ಕೋಟಿ ರೂ. ಪರಿಹಾರ ದೊಡ್ಡ ಮೊತ್ತದ ಪರಿಹಾರದ ಮೂಲಕ ದಾಖಲೆ ಸೃಷ್ಟಿ: ಪ್ರಿಯಾಂಕ್ ಖರ್ಗೆ

ಕಲಬುರಗಿ,24.ಮಾ.25.-ತೊಗರಿ, ಹೆಸರು, ಉದ್ದು, ಸೋಯಾಬೀನ್ ಹತ್ತಿ ಹಾಗೂ ಇತರೆ ಬೆಳೆಗಳನ್ನು ಬೆಳೆದಿದ್ದ ಕಲಬುರಗಿ ಜಿಲ್ಲೆಯ 2,04,073 ರೈತರು ಬೆಳೆ ವಿಮೆ ಯೋಜನೆಯಡಿ ವಿಮೆ ಪರಿಹಾರ ಕೋರಿ  2024-25 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ನೋಂದಾವಣೆ ಮಾಡಿಕೊಂಡಿದ್ದು 575.194 ಕೋಟಿ ಬೆಳೆ ವಿಮೆ ಪರಿಹಾರ ಮಂಜೂರಾಗಿದೆ ಎಂದು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಕಲಬುರಗಿ ಜಿಲ್ಲೆಯಲ್ಲಿ ಬೆಳೆ ವಿಮೆ ಹಾಗೂ ಬೆಳೆಹಾನಿ…

ಗಡಿ ತಾಲೂಕು ಆಳಂದನಲ್ಲಿ ಡಿ.ಸಿ. ಸಂಚಾರ:ಕುಡಿಯುವ ನೀರಿನ ಸಮಸ್ಯೆ ಕುರಿತು ಸಾರ್ವಜನಿಕರ ಸಮಸ್ಯೆ ಆಲಿಕೆ

ಗಡಿ ತಾಲೂಕು ಆಳಂದನಲ್ಲಿ ಡಿ.ಸಿ. ಸಂಚಾರ:ಕುಡಿಯುವ ನೀರಿನ ಸಮಸ್ಯೆ ಕುರಿತು ಸಾರ್ವಜನಿಕರ ಸಮಸ್ಯೆ ಆಲಿಕೆ

ಕಲಬುರಗಿ,23.ಮಾ.25.:  ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಶನಿವಾರ ಜಿಲ್ಲೆ ಗಡಿ ತಾಲೂಕು ಆಳಂದ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಸಂಚರಿಸಿ ಬೇಸಿಗೆ ಕುಡಿಯುವ ನೀರು ಕುರಿತು ಖುದ್ದಾಗಿ ಗ್ರಾಮಸ್ಥರ ಸಮಸ್ಯೆ ಆಲಿಸಿದರು.ಜಿಲ್ಲಾ ಪಂಚಾಯತ್ ಸಿ.ಇ.ಓ ಭಂವರ್ ಸಿಂಗ್ ಮೀನಾ, ಎಸ್.ಪಿ. ಅಡ್ಡೂರು ಶ್ರೀನಿವಾಸಲು ಜೊತೆ ತಾಲೂಕಾ ಸಂಚಾರ ಮಾಡಿದ ಅವರು, ಸಾರ್ವಜನಿಕರ ಕುಡಿಯುವ ನೀರಿನ ಸಮಸ್ಯೆಗಳಿಗೆ ಅಧಿಕಾರಿಗಳು ಪ್ರಥಮಾದ್ಯತೆ ಮೇಲೆ ಕೂಡಲೆ ಸ್ಪಂದಿಸಬೇಕು. ಕುಡಿಯುವ ನೀರಿಗೆ ಹಾಹಾಕರ ಉಂಟಾಗದAತೆ ಎಲ್ಲಾ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಸ್ಥಳೀಯ ಆಡಳಿತ ಮಾಡಬೇಕು…

ಒಂದು ತಿಂಗಳಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಲೋಕಾರ್ಪಣೆ: ಡಾ.ಶರಣಪ್ರಕಾಶ ಪಾಟೀಲ

ಒಂದು ತಿಂಗಳಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಲೋಕಾರ್ಪಣೆ: ಡಾ.ಶರಣಪ್ರಕಾಶ ಪಾಟೀಲ

ಕಲಬುರಗಿ,22.ಮಾ.25: ಮುಂದಿನ ಒಂದು ತಿಂಗಳಿನಲ್ಲಿ ನಗರದ ಜಿಮ್ಸ್ ಆಸ್ಪತ್ರೆಯ ಕಟ್ಟಡದ 8 ರಿಂದ 10ನೇ ಮಹಡಿಯಲ್ಲಿ ನಿರ್ಮಾಣವಾಗಿರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಲೋಕಾರ್ಪಣೆಗೊಳಿಸಲಾಗುವುದು ಎಂದು  ರಾಜ್ಯದ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶಿಲತೆ ಹಾಗೂ ಜೀವನೋಪಾಯ ಖಾತೆ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಹೇಳಿದರು.ಶನಿವಾರ ಆಸ್ಪತ್ರೆಗೆ ಭೇಟಿ ನೀಡಿದ ಅವರು ಅಂತಿಮ ಹಂತದ ಕೆಲಸ ಕಾರ್ಯಗಳನ್ನು ವೀಕ್ಷಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಉದ್ಘಾಟನೆಗೆ ಸಕಲ ಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ರಾಜ್ಯಸಭೆ ವಿಪಕ್ಷ ನಾಯಕ…

ಮಾರ್ಚ್ 22 ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ

ಮಾರ್ಚ್ 22 ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ

ಕಲಬುರಗಿ,21.ಮಾ.25.-ಕಲಬುರಗಿ ಜೆಸ್ಕಾಂ ಕಾರ್ಯ ಮತ್ತು ಪಾಲನೆ ವಿಭಾಗ-2ರ ವ್ಯಾಪ್ತಿಯಲ್ಲಿ ಬರುವ 33/11 ಅಂಕಲಗಾ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಮೆಂಟೇನನ್ಸ್ ಕಾರ್ಯ ಕೈಗೊಳ್ಳಬೇಕಾಗಿರುವ ಹಿನ್ನೆಲೆಯಲ್ಲಿ ಈ ಕೆಳಕಂಡ ವಿತರಣಾ ಕೇಂದ್ರಗಳಲ್ಲಿನ ಗ್ರಾಮಗಳಲ್ಲಿ ಇದೇ ಮಾರ್ಚ್ 22 ರಂದು ಬೆಳಿಗ್ಗೆ 11 ರಿಂದ ಸಂಜೆ 6 ಗಂಟೆಯವರೆಗೆ ರವರೆಗೆ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗುತ್ತಿದ್ದು, ಸಾರ್ವಜನಿಕರು ಇದಕ್ಕೆ ಸಹಕರಿಸಬೇಕೆಂದು ಕಲಬುರಗಿ ಜೆಸ್ಕಾಂ ಕಾರ್ಯ ಮತ್ತು ಪಾಲನೆ ವಿಭಾಗ-2ರ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ. ಜೇವರ್ಗಿ ಉಪ ವಿಭಾಗ 33ಕೆ.ವಿಅಂಕಲಗಾ ವಿದ್ಯುತ್ ವಿತರಣಾ ಕೇಂದ್ರ:…

ನೀರನ್ನು ಕಾಯಿಸಿ, ಆರಿಸಿ ಮತ್ತು ಸೋಸಿ ಕುಡಿಯುಲು ಸೂಚನೆ

ನೀರನ್ನು ಕಾಯಿಸಿ, ಆರಿಸಿ ಮತ್ತು ಸೋಸಿ ಕುಡಿಯುಲು ಸೂಚನೆ

ಕಲಬುರಗಿ,21.ಮಾ.25.-ಕಲಬುರಗಿ ನಗರಕ್ಕೆ ನೀರು ಸರಬರಾಜು ಮಾಡುವ ಜಲಮೂಲಗಳಲ್ಲಿ ಒಂದಾದ ಭೀಮಾ ನದಿಯ ಮೇಲ್ಭಾಗದಲ್ಲಿ ನೀರಿನ ಹರಿಯುವಿಕೆ ಪೂರ್ತಿಯಾಗಿ ನಿಂತಿದ್ದು, ಈ ಬ್ಯಾರೇಜಿನಲ್ಲಿ ಶೇಖರಣೆಗೊಂಡ ನೀರು ಕೆಳಮಟ್ಟದಾಗಿದ್ದು, ಈ ನಿಂತಿರುವ ನೀರಿನ ಬಣ್ಣ ಹಾಗೂ ಗುಣಮಟ್ಟವು ತೀವ್ರವಾಗಿ ಇಳಿಕೆಯಾಗಿದೆ. ಇದನ್ನು ಸುಧಾರಿಸಲು ಈಗಾಗಲೇ ಸೂಪರ್ ಕ್ಲೋರಿನೇಶನ್ ಮಾಡಿ ನೀರು ಸರಬರಾಜು ಮಾಡಲಾಗುತ್ತಿದೆ. ಆದಾಗ್ಯೂ ಆರೋಗ್ಯದ ಹಿತದೃಷ್ಠಿಯಿಂದ ನಗರದ ಸಾರ್ವಜನಿಕರು ಕುಡಿಯುವ ನೀರನ್ನು ಕಾಯಿಸಿ, ಆರಿಸಿ ಮತ್ತು ಸೋಸಿ ಕುಡಿಯಬೇಕೆಂದು ಕಲಬುರಗಿ ಕೆಯುಡಬ್ಲೂ್ಯಎಸ್‌ಎಂಪಿ-ಕೆಯುಐಡಿಎಫ್‌ಸಿ ಯೋಜನಾ ಅನುಷ್ಠಾನ ಘಟಕದ ಕಾರ್ಯಪಾಲಕ ಅಭಿಯಂತರರು…