ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ
ಕಲಬುರಗಿ,ಫೆ.28: ಜಿಲ್ಲೆಯ ರೈತರ ಮಕ್ಕಳಿಗಾಗಿ 2025-26ನೇ ಸಾಲಿಗೆ ಚಂದ್ರಂಪಳ್ಳಿ ತೋಟಗಾರಿಕೆ ತರಬೇತಿ ಕೇಂದ್ರದಿಂದ 10 ತಿಂಗಳ ಕಾಲ ತರಬೇತಿ ನೀಡಲು ಉದ್ದೇಶಿಸಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ ಎಂದು ಕಲಬುರಗಿಯ ತೋಟಗಾರಿಕೆ ಉಪನಿರ್ದೇಶಕರು (ಜಿಲ್ಲಾ ಪಂಚಾಯತ್) ತಿಳಿಸಿದ್ದಾರೆ. ತರಬೇತಿ ಪಡೆಯಲು ಬಯಸುವ ಅಭ್ಯರ್ಥಿಯು ಕನಿಷ್ಠ ಎಸ್.ಎಸ್.ಎಲ್.ಸಿ. ತರಗತಿಯನ್ನು ಕನ್ನಡ ವಿಷಯದೊಂದಿಗೆ ಪಾಸಾಗಿರಬೇಕು. ಅಭ್ಯರ್ಥಿಯು ಮಾನಸಿಕವಾಗಿ ಮತ್ತು ದೈಹಿಕವಾಗಿ ಆರೋಗ್ಯವಂತರಾಗಿರಬೇಕು ಮತ್ತು ಅವರ ಆಯ್ಕೆಯು ತೋಟಗಾರಿಕೆ ಪ್ರಯೋಗಿಕ ತರಬೇತಿಯಲ್ಲಿ ಹಮ್ಮಿಕೊಳ್ಳುವ ಚಟುವಟಿಕೆಗಳನ್ನು ಸ್ವಾವಲಂಬಿಯಾಗಿ ನಿರ್ವಹಿಸಲು ಶಕ್ತನಾಗಿರಬೇಕು ಹಾಗೂ ಚಟುವಟಿಕೆ