August 4, 2025 7:39 am

ಶಿವಾನಂದ‌ ಮೆಂತೆ, ಸಂಪಾದಕ
ಸುದ್ದಿ ಈ‌ದಿನ‌ ಕನ್ನಡ‌ ದಿನಪತ್ರಿಕೆ

ಕಲಬುರಗಿ

ಬಾಲಕನ ಪೋಷಕರ ಪತ್ತೆಗೆ ಮನವಿ

ಕಲಬುರಗಿ,29.ಮಾ.25: ದಿನಾಂಕ:02-02-2025 ರಂದು 16 ವರ್ಷದ ಬಾಲಕನು ಮಕ್ಕಳ ಸಹಾಯವಾಣಿ-1098 ಮೂಲಕ ಕಲಬುರಗಿ ಸರ್ಕಾರಿ ಬಾಲಕರ ಬಾಲಮಂದಿರ ಸಂಸ್ಥೆಯಲ್ಲಿ ದಾಖಲಾಗಿದ್ದು, ಬಾಲಕನು ತನ್ನ ವಿಳಾಸ/ಕುಟುಂಬದ ಮಾಹಿತಿ ಸ್ಪಷ್ಟವಾಗಿ ತಿಳಿಸಿರುವದಿಲ್ಲ ಎಂದು ಕಲಬುರಗಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ತಿಳಿಸಿ ದ್ದಾರೆ. ಈ ಬಾಲಕನು ತನ್ನ ಹೆಸರು ಕು.ದುರ್ಗೇಶ ಎಂದು ತಿಳಿಸಿದ್ದು, ಈ ಬಾಲಕನ ಪಾಲಕ ಪೋಷಕರು ಯಾರಾದರೂ ಇದ್ದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ವೀಕ್ಷಣಾಲಯ ಕಟ್ಟಡದ ಮೊದಲನೇ ಮಹಡಿ, ಚಂದ್ರಶೇಖರ ಪಾಟೀಲ

ಏಪ್ರಿಲ್ ತಿಂಗಳಲ್ಲಿ ಜಿಲ್ಲೆಯಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜನೆ: ಜಿಲ್ಲಾಧಿಕಾರಿಗಳಿಂದ ಪೋಸ್ಟರ್ ಬಿಡುಗಡೆ

ಕಲಬುರಗಿ,26.ಮಾ.25.-ಕೌಶಲ್ಯಾಭಿವೃದ್ಧಿ ನಿಗಮದಿಂದ 2025ರ ಏಪ್ರಿಲ್ ತಿಂಗಳಲ್ಲಿ ಕಲಬುರಗಿ ಜಿಲ್ಲೆಯಲ್ಲಿ ಆಯೋಜಿಸುತ್ತಿರುವ ಬೃಹತ್ ಉದ್ಯೋಗ ಮೇಳಕ್ಕೆ ಸಂಬಧಿಸಿದತೆ ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳು ಹಾಗೂ ಇತರೆ ಜಿಲ್ಲೆಯ ಅಭ್ಯರ್ಥಿಗಳಿಗೆ ಉದ್ಯೋಗ ಮೇಳದ ಕುರಿತು ಅರಿವು ಮೂಡಿಸಲು ಕಲಬುರಗಿ ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಗುರುವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ  ಪೋಸ್ಟರ್ ಬಿಡುಗಡೆ  ಮಾಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭಂವರ್ ಸಿಂಗ್ ಮೀನಾ, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ನಾಗೂಬಾಯಿ ಪಿ. ಸೂರ್ಯವಂಶಿ,  ಕಲಬುರಗಿ ಮಹಾನಗರ

ಕಲಬುರಗಿ ಜಿಲ್ಲೆಯಲ್ಲಿ 2,36,933 ರೈತರಿಗೆ ರೂ. 667.73 ಕೋಟಿ ರೂ. ಪರಿಹಾರ ದೊಡ್ಡ ಮೊತ್ತದ ಪರಿಹಾರದ ಮೂಲಕ ದಾಖಲೆ ಸೃಷ್ಟಿ: ಪ್ರಿಯಾಂಕ್ ಖರ್ಗೆ

ಕಲಬುರಗಿ,24.ಮಾ.25.-ತೊಗರಿ, ಹೆಸರು, ಉದ್ದು, ಸೋಯಾಬೀನ್ ಹತ್ತಿ ಹಾಗೂ ಇತರೆ ಬೆಳೆಗಳನ್ನು ಬೆಳೆದಿದ್ದ ಕಲಬುರಗಿ ಜಿಲ್ಲೆಯ 2,04,073 ರೈತರು ಬೆಳೆ ವಿಮೆ ಯೋಜನೆಯಡಿ ವಿಮೆ ಪರಿಹಾರ ಕೋರಿ  2024-25 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ನೋಂದಾವಣೆ ಮಾಡಿಕೊಂಡಿದ್ದು 575.194 ಕೋಟಿ ಬೆಳೆ ವಿಮೆ ಪರಿಹಾರ ಮಂಜೂರಾಗಿದೆ ಎಂದು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಕಲಬುರಗಿ ಜಿಲ್ಲೆಯಲ್ಲಿ ಬೆಳೆ ವಿಮೆ ಹಾಗೂ ಬೆಳೆಹಾನಿ

ಗಡಿ ತಾಲೂಕು ಆಳಂದನಲ್ಲಿ ಡಿ.ಸಿ. ಸಂಚಾರ:ಕುಡಿಯುವ ನೀರಿನ ಸಮಸ್ಯೆ ಕುರಿತು ಸಾರ್ವಜನಿಕರ ಸಮಸ್ಯೆ ಆಲಿಕೆ

ಕಲಬುರಗಿ,23.ಮಾ.25.:  ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಶನಿವಾರ ಜಿಲ್ಲೆ ಗಡಿ ತಾಲೂಕು ಆಳಂದ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಸಂಚರಿಸಿ ಬೇಸಿಗೆ ಕುಡಿಯುವ ನೀರು ಕುರಿತು ಖುದ್ದಾಗಿ ಗ್ರಾಮಸ್ಥರ ಸಮಸ್ಯೆ ಆಲಿಸಿದರು.ಜಿಲ್ಲಾ ಪಂಚಾಯತ್ ಸಿ.ಇ.ಓ ಭಂವರ್ ಸಿಂಗ್ ಮೀನಾ, ಎಸ್.ಪಿ. ಅಡ್ಡೂರು ಶ್ರೀನಿವಾಸಲು ಜೊತೆ ತಾಲೂಕಾ ಸಂಚಾರ ಮಾಡಿದ ಅವರು, ಸಾರ್ವಜನಿಕರ ಕುಡಿಯುವ ನೀರಿನ ಸಮಸ್ಯೆಗಳಿಗೆ ಅಧಿಕಾರಿಗಳು ಪ್ರಥಮಾದ್ಯತೆ ಮೇಲೆ ಕೂಡಲೆ ಸ್ಪಂದಿಸಬೇಕು. ಕುಡಿಯುವ ನೀರಿಗೆ ಹಾಹಾಕರ ಉಂಟಾಗದAತೆ ಎಲ್ಲಾ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಸ್ಥಳೀಯ ಆಡಳಿತ ಮಾಡಬೇಕು

ಒಂದು ತಿಂಗಳಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಲೋಕಾರ್ಪಣೆ: ಡಾ.ಶರಣಪ್ರಕಾಶ ಪಾಟೀಲ

ಕಲಬುರಗಿ,22.ಮಾ.25: ಮುಂದಿನ ಒಂದು ತಿಂಗಳಿನಲ್ಲಿ ನಗರದ ಜಿಮ್ಸ್ ಆಸ್ಪತ್ರೆಯ ಕಟ್ಟಡದ 8 ರಿಂದ 10ನೇ ಮಹಡಿಯಲ್ಲಿ ನಿರ್ಮಾಣವಾಗಿರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಲೋಕಾರ್ಪಣೆಗೊಳಿಸಲಾಗುವುದು ಎಂದು  ರಾಜ್ಯದ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶಿಲತೆ ಹಾಗೂ ಜೀವನೋಪಾಯ ಖಾತೆ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಹೇಳಿದರು.ಶನಿವಾರ ಆಸ್ಪತ್ರೆಗೆ ಭೇಟಿ ನೀಡಿದ ಅವರು ಅಂತಿಮ ಹಂತದ ಕೆಲಸ ಕಾರ್ಯಗಳನ್ನು ವೀಕ್ಷಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಉದ್ಘಾಟನೆಗೆ ಸಕಲ ಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ರಾಜ್ಯಸಭೆ ವಿಪಕ್ಷ ನಾಯಕ

ನೀರನ್ನು ಕಾಯಿಸಿ, ಆರಿಸಿ ಮತ್ತು ಸೋಸಿ ಕುಡಿಯುಲು ಸೂಚನೆ

ಕಲಬುರಗಿ,21.ಮಾ.25.-ಕಲಬುರಗಿ ನಗರಕ್ಕೆ ನೀರು ಸರಬರಾಜು ಮಾಡುವ ಜಲಮೂಲಗಳಲ್ಲಿ ಒಂದಾದ ಭೀಮಾ ನದಿಯ ಮೇಲ್ಭಾಗದಲ್ಲಿ ನೀರಿನ ಹರಿಯುವಿಕೆ ಪೂರ್ತಿಯಾಗಿ ನಿಂತಿದ್ದು, ಈ ಬ್ಯಾರೇಜಿನಲ್ಲಿ ಶೇಖರಣೆಗೊಂಡ ನೀರು ಕೆಳಮಟ್ಟದಾಗಿದ್ದು, ಈ ನಿಂತಿರುವ ನೀರಿನ ಬಣ್ಣ ಹಾಗೂ ಗುಣಮಟ್ಟವು ತೀವ್ರವಾಗಿ ಇಳಿಕೆಯಾಗಿದೆ. ಇದನ್ನು ಸುಧಾರಿಸಲು ಈಗಾಗಲೇ ಸೂಪರ್ ಕ್ಲೋರಿನೇಶನ್ ಮಾಡಿ ನೀರು ಸರಬರಾಜು ಮಾಡಲಾಗುತ್ತಿದೆ. ಆದಾಗ್ಯೂ ಆರೋಗ್ಯದ ಹಿತದೃಷ್ಠಿಯಿಂದ ನಗರದ ಸಾರ್ವಜನಿಕರು ಕುಡಿಯುವ ನೀರನ್ನು ಕಾಯಿಸಿ, ಆರಿಸಿ ಮತ್ತು ಸೋಸಿ ಕುಡಿಯಬೇಕೆಂದು ಕಲಬುರಗಿ ಕೆಯುಡಬ್ಲೂ್ಯಎಸ್‌ಎಂಪಿ-ಕೆಯುಐಡಿಎಫ್‌ಸಿ ಯೋಜನಾ ಅನುಷ್ಠಾನ ಘಟಕದ ಕಾರ್ಯಪಾಲಕ ಅಭಿಯಂತರರು

ಪಾಂಡಿಚೇರಿ ರಾಜ್ಯದಲ್ಲಿ ನೋಂದಣಿಯಾಗಿ ಕರ್ನಾಟಕ ತೆರಿಗೆ ಕಟ್ಟದೇ ನಗರದಲ್ಲಿ ಸಂಚರಿಸುತ್ತಿರುವ 11 ವಾಹನಗಳ ವಶ.

ಕಲಬುರಗಿ,21,ಮಾ.25.-ಪಾಂಡಿಚೇರಿ ರಾಜ್ಯದಲ್ಲಿ ನೋಂದಣಿಯಾಗಿ ಕರ್ನಾಟಕ ತೆರಿಗೆ ಕಟ್ಟದೇ ನಗರದಲ್ಲಿ ಸಂಚರಿಸುತ್ತಿರುವ 11 ವಾಹನಗಳನ್ನು ಕಲಬುರಗಿ ಪ್ರಾದೇಶಿಕ ಸಾರಿಗೆ ಕಚೇರಿಯ ಮೋಟಾರು ವಾಹನ ನಿರೀಕ್ಷಕರು ವಶಪಡಿಸಿಕೊಂಡು ಆರ್‌ಟಿಓ ಡ್ರೆöÊವಿಂಗ್ ಟ್ರಾö್ಯಕ್‌ನಲ್ಲಿ ನಿಲ್ಲಿಸಿದ್ದು, ಆದ್ದರಿಂದ ಸಂಬAಧಪಟ್ಟ ವಾಹನಗಳ ಮಾಲೀಕರು ಕರ್ನಾಟಕ ರಾಜ್ಯದ ತೆರಿಗೆ ಭರಿಸಿ, ವಿಳಾಸ ಬದಲಾವಣೆ ಹಾಗೂ ವಾಹನಕ್ಕೆ ಕರ್ನಾಟಕ ನೋಂದಣಿ ಸಂಖ್ಯೆ ಪಡೆದುಕೊಳ್ಳಬೇಕೆಂದು ಕಲಬುರಗಿ ಉಪ ಸಾರಿಗೆ ಆಯುಕ್ತರು ಹಾಗೂ ಹಿರಿಯ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ತಿಳಿಸಿದ್ದಾರೆ. ಪಾಂಡಿಚೇರಿ ರಾಜ್ಯದಲ್ಲಿ ನೋಂದಣಿ ಮಾಡಿಕೊಂಡ ವಾಹನಗಳ ಮಾಲೀಕರು ಆರ್‌ಟಿಓ

ಬೇಸಿಗೆ ರಜೆ ಹಿನ್ನೆಲೆ:ಕಲಬುರಗಿ-ದೌಂಡ್ ನಡುವೆ 180 ಬೇಸಿಗೆ ವಿಶೇಷ ರೈಲುಗಳು ಸಂಚಾರ

ಕಲಬುರಗಿ 21.ಮಾ.25-ರೈಲ್ವೆಯ ಸೋಲಾಪುರ ಕೇಂದ್ರ ವಿಭಾಗದ ಕಲಬುರಗಿ-ದೌಂಡ್ ನಡುವೆ 180 ಬೇಸಿಗೆ ವಿಶೇಷ ರೈಲುಗಳು ಸಂಚರಿಸಲಿವೆ ಎಂದು ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಬೇಸಿಗೆ ರಜೆಯ ಆರಂಭ ಮತ್ತು ಹೆಚ್ಚುತ್ತಿರುವ ಪ್ರಯಾಣಿಕರ ಸಂಖ್ಯೆಯನ್ನು ಪರಿಗಣಿಸಿ, ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ಕಲಬುರಗಿ-ದೌಂಡ್ ನಡುವೆ ಕೇಂದ್ರ ರೈಲ್ವೆಯ ಸೋಲಾಪುರ ವಿಭಾಗದ ಮೂಲಕ 180 ಬೇಸಿಗೆ ವಿಶೇಷ ರೈಲುಗಳನ್ನು ಓಡಿಸಲು ರೈಲ್ವೆ ಇಲಾಖೆ ನಿರ್ಧರಿಸಿದೆ. ವಿವರಗಳು ಈ ಕೆಳಗಿನಂತಿವೆ: ಕಲಬುರಗಿ-ದೌಂಡ್ ವಾರಕ್ಕೆ 5 ದಿನಗಳು ಕಾಯ್ದಿರಿಸದ ವಿಶೇಷ ರೈಲುಗಳು (128