
ಹಕ್ಕಿಜ್ವರದ ಬಗ್ಗೆ ಭಯ ಬೇಡ ಎಚ್ಚರವಿರಲಿ: ಡಿ.ಸಿ.ಪ್ರಶಾಂತ್ ಕುಮಾರ್ ಮಿಶ್ರಾ
ಬಳ್ಳಾರಿ,ಫೆ.28 :ರಾಜ್ಯದ ಕೆಲವು ಸ್ಥಳಗಳಲ್ಲಿ ವರದಿಯಾಗಿರುವ ಹಕ್ಕಿ ಜ್ವರ (ಬರ್ಡ್ ಫ್ಲೂ) ಪ್ರಕರಣದ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ವ್ಯಾಪಕ ಮುಂಜಾಗ್ರತೆ ವಹಿಸಲಾಗಿದ್ದು, ಸಾರ್ವಜನಿಕರು ಯಾವುದೇ ಆತಂಕಕ್ಕೆ ಒಳಗಾಗಬೇಡಿ ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪಶುಸಂಗೋಪನ ಇಲಾಖೆ, ಬಿಎಮ್‌ಆರ್‌ಸಿ, ಮಹಾನಗರ ಪಾಲಿಕೆ, ಜಿಲ್ಲಾ ಸರ್ವೇಕ್ಷಣಾ ಘಟಕ ಹಾಗೂ ಮಾಹಿತಿ ಶಿಕ್ಷಣ ಸಂವಹನ ವಿಭಾಗದ ಸಹಯೋಗದಲ್ಲಿ ಶುಕ್ರವಾರ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಆಯೋಜಿಸಿದ್ದ ಹಕ್ಕಿಜ್ವರ ಕುರಿತು ಸೇರಿದಂತೆ