
ಕೇಂದ್ರ ಜಲಶಕ್ತಿ ಸಚಿವ-ಡಿಕೆ ಶಿವಕುಮಾರ್ ಭೇಟಿ; ರಾಜ್ಯದ 6 ಹೊಸ ನೀರಾವರಿ ಯೋಜನೆಗಳಿಗೆ ಅನುಮೋದನೆಗೆ ಮನವಿ
ನವದೆಹಲಿ: ಜಲಸಂಪನ್ಮೂಲ ಸಚಿವರೂ ಆಗಿರುವ ಉಪಮು ಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮಂಗಳವಾರ ಕೇಂದ್ರ ಜಲಶಕ್ತಿ ಸಚಿವ ಸಿಆರ್ ಪಾಟೀಲ್ ಅವರನ್ನು ಭೇಟಿ ಮಾಡಿ ರಾಜ್ಯದ 6 ಹೊಸ ನೀರಾವರಿ ಯೋಜನೆಗಳಿಗೆ ಅನುಮೋದನೆ ಮತ್ತು ಹಣಕಾಸಿನ ನೆರವು ನೀಡುವಂತೆ ಕೋರಿದರು. ಜೊತೆಗೆ ಈಗಾಗಲೇ ಅಸ್ತಿತ್ವದಲ್ಲಿರುವ ನೀರಾವರಿ ಯೋಜನೆಗಳಿಗೆ ಕೇಂದ್ರದಿಂದ ಅನುಮೋದನೆ ಮತ್ತು ಹಣ ಬಿಡುಗಡೆಗೂ ಮನವಿ ಮಾಡಿದರು. ಈ ಕುರಿತು ಪ್ರಸ್ತಾವನೆಯನ್ನು ಸಲ್ಲಿಸಲಾಗಿದ್ದು, ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ (ಕೆಒಏಖಜ) ಅಡಿಯಲ್ಲಿ 11,123 ಕೋಟಿ ರೂಗಳ