
ಓ.ಟಿ.ಆರ್ ಸಂಖ್ಯೆ ಸೃಜಿಸಿ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸುವಂತೆ ಸೂಚನೆ
ರಾಯಚೂರು 23.ಮೆ 25: ಇಲ್ಲಿನ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯದಿಂದ 2025-26ನೇ ಸಾಲಿಗೆ ಪರಿಶಿಷ್ಟ ಪಂಗಡದ ಮೆಟ್ರಿಕ್ ಪೂರ್ವ 9 ಮತ್ತು 10ನೇ ತರಗತಿ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಸಲ್ಲಿಸಲು ಎನ್.ಎಸ್.ಪಿ. ಪೋರ್ಟಲ್‌ನಲ್ಲಿ ಓ.ಟಿ.ಆರ್ ಸಂಖ್ಯೆಯನ್ನು ಸೃಜಿಸುವ ರಾಜ್ಯ ವಿದ್ಯಾರ್ಥಿವೇತನ ತಂತ್ರಾAಶದಲ್ಲಿ ಅರ್ಜಿಯನ್ನು ಸಲ್ಲಿಸುವಂತೆ ಕೋರಲಾಗಿದೆ.ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ಪ್ರವೇಶ ಪಡೆಯುವ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನಕ್ಕಾಗಿ ಭಾರತ ಸರ್ಕಾರದ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ