March 13, 2025 10:57 am

ಶಿವಾನಂದ‌ ಮೆಂತೆ, ಸಂಪಾದಕ
ಸುದ್ದಿ ಈ‌ದಿನ‌ ಕನ್ನಡ‌ ದಿನಪತ್ರಿಕೆ

ರಾಯಚೂರು

ಸಚಿವ ಎನ್ ಎಸ್ ಬೋಸರಾಜು ಹಾಗೂ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಬಾಗಿ

ಮಂತ್ರಾಲಯದ ಶ್ರೀ ರಾಘವೇಂದ್ರ ಮಠದಲ್ಲಿ ಗುರು ವೈಭವೋತ್ಸವ ಸಂಭ್ರಮ ಹಾಗೂ ರಾಯರ 404ನೇ ಪಟ್ಟಾಭಿಷೇಕ ಮಹೋತ್ಸವ ಕಾರ್ಯಕ್ರಮದಲ್ಲಿ ಮಠದ ಪೀಠಾಧಿಪತಿಗಳಾದ ಶ್ರೀ ಸುಭುದೇಂದ್ರ ತೀರ್ಥ ಸ್ವಾಮಿಗಳವರೊಂದಿಗೆ ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸಚಿವರಾದ ಎನ್ ಎಸ್ ಬೋಸರಾಜು ಹಾಗೂ ಬೃಹತ್ ಕೈಗಾರಿಕೆ ಹಾಗೂ ಹುಕ್ಕು ಸಚಿವರಾದ ಎಚ್ ಡಿ ಕುಮಾರಸ್ವಾಮಿ ಅವರು  ಭಾಗವಹಿಸಿ ಕಾರ್ಯಕ್ರಮ ಉದ್ಘಾಟಿಸಿದರು.* ವೇದಿಕೆಯಲ್ಲಿ ಜೆಡಿಎಸ್ ಮುಖಂಡರಾದ ಅನಿತಾ ಕುಮಾರಸ್ವಾಮಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಹಿರಿಯ ಮುಖಂಡರಾದ  ಕೆ

ನಮ್ಮ ಸರ್ಕಾರದಲ್ಲಿ ಯುವಕರಿಗೆ ಹೆಚ್ಚಿನ ಆದ್ಯತೆ; ಸಚಿವ ಡಾ. ಶರಣಪ್ರಕಾಶ ಆರ್. ಪಾಟೀಲ

ರಾಯಚೂರು ಮಾ.01 : ನಮ್ಮ ಸರ್ಕಾರದಲ್ಲಿ ಯುವಕರಿಗೆ ಹೆಚ್ಚಿನ ಆದ್ಯತೆ ನೀಡಿ, ಅವರಿಗೆ ಪ್ರೋತ್ಸಾಹ ನೀಡುತ್ತಿದೆ ಎಂದು  ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರು ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ ಅವರು ಹೇಳಿದರು.ಮಾ.01ರ ಶನಿವಾರ ದಂದು ನಗರದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಪ್ರೇಕ್ಷಾಗೃಹದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ ಬೆಂಗಳೂರು, ಸಂಜೀವಿನಿ-ಕೆಎಸ್‌ಆರ್‌ಎಲ್‌ಪಿಎಸ್ ಮತ್ತು ಜಿಲ್ಲಾ

ಲಿಂಗಸುಗೂರಲ್ಲಿ ನೂತನ ನ್ಯಾಯಾಲಯದ ಕಟ್ಟಡ ಲೋಕಾರ್ಪಣೆ; ಇ-ಸೇವಾ ಕೇಂದ್ರದ ಕಟ್ಟಡಕ್ಕೆ ಶಂಕುಸ್ಥಾಪನೆ

ರಾಯಚೂರು ಮಾ.01 : ಲಿಂಗಸುಗೂರು ಐತಿಹಾಸಿಕ ಪಟ್ಟಣವಾಗಿದ್ದು, ರಾಷ್ಟ್ರಕೂಟರು, ಚಾಲುಕ್ಯರು ಹಾಗೂ ಮೌರ್ಯ ವಂಶಸ್ಥರು ಆಳ್ವಿಕೆ ಮಾಡಿದ ನೆಲ ಇದಾಗಿದೆ. ಇಲ್ಲಿನ ಜನರಿಗೆ ಉತ್ತಮ ರೀತಿಯಲ್ಲಿ ನ್ಯಾಯ ನೀಡುವ ನಿಟ್ಟಿನಲ್ಲಿ ವಕೀಲರು ಶ್ರಮಿಸಬೇಕೆಂದು ಗೌರವಾನ್ವಿತ ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾದ ಎನ್.ವಿ.ಅಂಜಾರಿಯಾ ಅವರು ಹೇಳಿದರು.      ಮಾ.01ರ ಶನಿವಾರ ಜಿಲ್ಲೆಯ ಲಿಂಗಸುಗೂರು ಪಟ್ಟಣದಲ್ಲಿ ನೂತನವಾಗಿ ನಿರ್ಮಿಸಿರುವ ನ್ಯಾಯಾಲಯದ ಕಟ್ಟಡ, ವಕೀಲರ ಭವನ, ನ್ಯಾಯಾದೀಶರ ವಸತಿಗೃಹ ಲೋಕಾರ್ಪಣೆ ಹಾಗೂ ಇ-ಸೇವಾ ಕೇಂದ್ರದ ಕಟ್ಟಡಕ್ಕೆ ಶಂಕುಸ್ಥಾಪನೆ ನೇರವರಿಸಿ ಅವರು ಮಾತನಾಡಿದರು.      ಅಶೋಕನ

ರಾಯಚೂರ ಜಿಲ್ಲೆಯ ಎಲ್ಲ ಕೆರೆಗಳನ್ನು ತುಂಬಿಸಲು 10 ದಿನಗಳ ಗಡುವು

ರಾಯಚೂರು ಫೆ 25 : ಕಾಲುವೆಗಳಲ್ಲಿ ನೀರು ಹರಿಯುವ ಅವಧಿ ಮುಕ್ತಾಯದೊಳಗಡೆ ಜಿಲ್ಲೆಯ ಎಲ್ಲ ಕೆರೆಗಳನ್ನು ತುಂಬಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ನಿತೀಶ್ ಕೆ ಅವರು ಸಂಬAಧಿಸಿದ ಅಧಿಕಾರಿಗಳಿಗೆ 10 ದಿನಗಳ ಗಡುವು ವಿದಿಸಿದರು.ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ, ರಾಯಚೂರ ಜಿಲ್ಲೆಯಲ್ಲಿ ಮುಂಬರುವ ಬೇಸಿಗೆಯ ಸಮಯದಲ್ಲಿ ಕುಡಿಯುವ ನೀರಿನ ಮತ್ತು ಜಾನುವಾರುಗಳಿಗೆ ಮೇವಿನ ಲಭ್ಯತೆ ಕುರಿತು ಜಿಲ್ಲಾ ಹಾಗೂ ತಾಲೂಕುಮಟ್ಟದ ಅಧಿಕಾರಿಗಳೊಂದಿಗೆ ಹೊಸ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಸಭಾಂಗಣದಲ್ಲಿ ಫೆ.25ರಂದು ಸಭೆ ನಡೆಸಿ ಅವರು

ರಾಯಚೂರಿನಲ್ಲಿ ಮಾರ್ಚ 1ಕ್ಕೆ ಜಿಲ್ಲಾಮಟ್ಟದ ಉದ್ಯೋಗ ಮೇಳ

ರಾಯಚೂರು ಫೆ 24 : ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಸಂಜೀವಿನಿ-ಕೆಎಸ್‌ಆರ್‌ಎಲ್‌ಪಿಎಸ್, ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಜಿಲ್ಲಾಕೌಶಲ್ಯ ಮಿಷನ್, ರಾಯಚೂರು ಇವರ ಸಂಯುಕ್ತಾಶ್ರಯದಲ್ಲಿ ಡಿಡಿಯು-ಜಿ.ಕೆ ಯೋಜನೆ ಮತ್ತು ಸಂಕಲ್ಪಯೋಜನೆಯಡಿ ಜಿಲ್ಲಾ ಮಟ್ಟದಉದ್ಯೋಗ ಮೇಳವನ್ನು ಮಾರ್ಚ 1ರಂದು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಪ್ರೇಕ್ಷಾ ಗೃಹ ರಾಯಚೂರು ಇಲ್ಲಿ ಹಮ್ಮಿಕೊಳ್ಳಲಾಗಿದೆ.ಈ ಉದ್ಯೋಗ ಮೇಳದಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಮತ್ತು ಸ್ಥಳೀಯವಾಗಿ ಅಂದಾಜು 50ಕ್ಕೂ ಹೆಚ್ಚಿನ ಪ್ರತಿಷ್ಠಿತ ಬೃಹತ್, ಮಧ್ಯಮ, ಸಣ್ಣ ಉದ್ಯೋಗದಾತ