March 13, 2025 10:51 am

ಶಿವಾನಂದ‌ ಮೆಂತೆ, ಸಂಪಾದಕ
ಸುದ್ದಿ ಈ‌ದಿನ‌ ಕನ್ನಡ‌ ದಿನಪತ್ರಿಕೆ

ಶಿಕ್ಷಣ

ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಬೆಳಸಿ

ಪ್ರಸ್ತುತ ದಿನಮಾನಗಳಲ್ಲಿ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಮೂಡಿಸಿಕೊಳ್ಳುವುದು ಅತಿ ಅವಶ್ಯ ಎಂದು ಶ್ರೀ ಮಹೇಶ್ ರೆಡ್ಡಿ ಎನ್ ಆರ್ ಡಿ ಎಂ ಎಸ್ ಅಧಿಕಾರಿಗಳು ಜಿಲ್ಲಾ ಪಂಚಾಯತ ಬೀದರ ರವರು ಹೇಳಿದರು. ಬೀದರ ಜಿಲ್ಲೆ ಹುಮನಾಬಾದ ತಾಲೂಕಿನ ಬೇನಚಿಂಚೊಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಸರಕಾರಿ ಪ್ರೌಢ ಶಾಲೆಯಲ್ಲಿ ಜಿಲ್ಲಾ ಪಂಚಾಯತ್ ಬೀದರ್ ಮತ್ತು ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿಯ ವತಿಯಿಂದ ಸರ್ ಸಿ ವಿ ರಾಮನ್  ರವರ ಆವಿಷ್ಕಾರದ ಸ್ಮರಣಾರ್ಥವಾಗಿ ಹಮ್ಮಿಕೊಂಡ ವಿಜ್ಞಾನ ದಿನಕ್ಕೆ

ದ್ವಿತೀಯ ಪಿ.ಯು.ಸಿ ಪರೀಕ್ಷಾ ಕೇಂದ್ರಕ್ಕೆ ಡಿ.ಸಿ.ಭೇಟಿ

ಕಲಬುರಗಿ,04ಮಾ.25.  ಪ್ರಸಕ್ತ 2024-25ನೇ ಶೈಕ್ಷಣಿಕ ವ³Àðದ ದ್ವಿತೀಯ ಪಿ.ಯು.ಸಿ. ಪರೀಕ್ಷೆ-1 ಆರಂಭಗೊAಡಿದ್ದು, ಸೋಮವಾರ ಕಲಬುರಗಿ ನಗರದ ಸೂಪರ್ ಮಾರ್ಕೆಟ್ ಪ್ರದೇಶದ ಎಂ.ಪಿ.ಎಚ್.ಎಸ್ ಪದವಿ ಪೂರ್ವ ಕಾಲೇಜು ಪರೀಕ್ಷಾ ಕೇಂದ್ರಕ್ಕೆ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಭೇಟಿ ನೀಡಿ ಪರಿಶೀಲಿಸಿದರು. ಕೇಂದ್ರದ ಪ್ರತಿ ಕೋಣೆಗೆ ಭೇಟಿ ನೀಡಿದ ಅವರು, ಯಾವುದೇ ರೀತಿಯಲ್ಲಿ ನಕಲಿಗೆ ಇಲ್ಲಿ ಅವಕಾಶ ನೀಡಬಾರದು. ಪಾರದರ್ಶಕವಾಗಿ ಪರೀಕ್ಷೆ ನಡೆಸಬೇಕು, ಕಡ್ಡಾಯಾಗಿ ಪ್ರಿಸ್ಕಿಂಗ್ ಮಾಡಬೇಕೆಂದು ಕೊಠಡಿ ಮೇಲ್ವಿಚಾರಕರಿಗೆ ಸೂಚಿಸಿದರು. ನಂತರ ಜಿಲ್ಲಾ ಪಂಚಾಯತ್ ಕಚೇರಿ ಆವರಣದಲ್ಲಿ ಜಿಲ್ಲೆಯ

ಮಾರ್ಚ್ 8 ರಂದು ಜೇವರ್ಗಿಯಲ್ಲಿ ಕಲ್ಯಾಣ ಪಥಕ್ಕೆ ಸಿ.ಎಂ. ಚಾಲನೆ: ಐತಿಹಾಸಿಕ ಕಾರ್ಯಕ್ರಮ ಯಶಸ್ಸಿಗೆ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ-ಬಿ.ಫೌಜಿಯಾ ತರನ್ನುಮ್

ಕಲಬುರಗಿ,04.ಮಾ.25.ರಾಜ್ಯ ಸರ್ಕಾರದ ಆಯವ್ಯಯದಲ್ಲಿ ಘೋ³Àಣೆ ಮಾಡಿದಂತೆ ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿನ 38 ವಿಧಾನಸಭಾ ಕ್ಷೇತ್ರದಲ್ಲಿ ಕೆ.ಕೆ.ಆರ್.ಡಿ.ಬಿ ಅನುದಾನದ ನೆರವಿನೊಂದಿಗೆ ಒಟ್ಟು 1,150 ಕೋಟಿ ರೂ. ಮೊತ್ತದಲ್ಲಿ ಗ್ರಾಮೀಣ ಭಾಗದಲ್ಲಿ ರಸ್ತೆ ನಿರ್ಮಾಣ ಮಾಡುವ “ಕಲ್ಯಾಣ ಪಥ” ಯೋಜನೆಗೆ ಮಾರ್ಚ್ 8 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೇವರ್ಗಿಯಲ್ಲಿ ಚಾಲನೆ ನೀಡಲಿದ್ದು, ಐತಿಹಾಸಿಕ ಕಾರ್ಯಕ್ರಮ ಯಶಸ್ಸಿಗೆ ಅಧಿಕಾರಿಗಳು ಪರಸ್ಪರ ಸಹಕಾರದಿಂದ ಶ್ರಮಿಸಬೇಕು ಎಂದು ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಹೇಳಿದರು. ಸೋಮವಾರ ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಪೂರ್ವಭಾವಿ 

ಮಾತೋಶ್ರೀ ತಾರಾದೇವಿ ರಾಂಪೂರೆ ಔಷಧಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ಒಂದು ದಿನದ ವಿಚಾರ ಸಂಕಿರಣ

ಕಲಬುರ್ಗಿ: ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಮಾತೋಶ್ರೀ ತಾರಾದೇವಿ ರಾಂಪೂರೆ ಔಷದ ವೈದ್ಯಕೀಯ ವಿಜ್ಞಾನ ಮಹಾವಿದ್ಯಾಲಯದ ಅಡಿಯಲ್ಲಿ ಎಂ ಫಾರ್ಮ್ ಮತ್ತು ಬಿ ಫಾರ್ಮ್ ವಿಧ್ಯಾರ್ಥಿಗಳಿಗೆ ಒಂದು ದಿನದ ವಿಚಾರ ಸಂಕಿರಣ ಏರ್ಪಡಿಸಲಾಗಿತ್ತು.ಈ ವಿಚಾರ ಸಂಕಿರಣದಲ್ಲಿ ವಿಯಾಟ್ರೀಸ್ ಲಿಮಿಟೆಡ್ ಕಂಪನಿಯ ಉಪಾಧ್ಯಕ್ಷರಾದ ಪ್ರಶಾಂತ್ ದೇಶಪಾಂಡೆಯವರು ಅತಿಥಿಗಳಾಗಿ ಭಾಗವಹಿಸಿದ್ದರು.ನಂತರ ಮಾತನಾಡಿ ಔಷಧಿಯ ಉದ್ಯಮದಲ್ಲಿನ ಇತ್ತಿಚಿಗೆ ಔಷಧಿ ವಿಧ್ಯಾರ್ಥಿಗಳಿಗೆ ಬಹಳಷ್ಟು ಅವಕಾಶಗಳು ಒದಗುತ್ತಿದ್ದು ಹೆಚ್ಚು ಹೆಚ್ಚು ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಹೇಳಿದರು.ಅವರು  ಆಪ್ರಿಕಾ ದೇಶದದಲ್ಲಿ ವಿವಿಧ ಔಷಧೀಯ ಕಂಪನಿಗಳಲ್ಲಿ

ಶುಲ್ಕ ಮರುಪಾವತಿ ಸೌಲಭ್ಯಕ್ಕೆ ಅರ್ಜಿ ಅವಧಿ ವಿಸ್ತರಣೆ

ಯಾದಗಿರಿ : ಮಾರ್ಚ್ 01,  : 2024-25ನೇ ಸಾಲಿನ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ, ಅರೆ ಅಲೆಮಾರಿ ವಿದ್ಯಾಥಿಗಳಿಂದ ಸ್ನಾತಕೋತ್ತರ ಪದವಿ ಮತ್ತು ವೃತ್ತಿಪರ ಪದವಿ, ವೃತ್ತಿಪರ ಸ್ನಾತಕೋತ್ತರ ಪದವಿಗಳ ಕೋರ್ಸ್ಗಳಿಗೆ “ಶುಲ್ಕ ಮರುಪಾವತಿ” ಸೌಲಭ್ಯಕ್ಕೆ ಆನ್‌ಲೈನ್ ಮೂಲಕ ಅರ್ಜಿ ಅವಧಿ ವಿಸ್ತರಿಸಿದೆ ಎಂದು ಯಾದಗಿರಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಸದಾಶಿವ.ಎಂ.ನಾರಾಯಣಕರ್ ಅವರು ತಿಳಿಸಿದ್ದಾರೆ.      ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ, ಅರೆ ಅಲೆಮಾರಿ ವಿದ್ಯಾಥಿಗಳಿಂದ ಸ್ನಾತಕೋತ್ತರ ಪದವಿ ಮತ್ತು ವೃತ್ತಿಪರ ಪದವಿ,

ಕಲ್ಯಾಣ ಕರ್ನಾಟಕ ವಿಭಾಗದಲ್ಲಿ ಮಕ್ಕಳ ಸ್ಥಿತಿಗತಿ ಕುರಿತು ಅಧಿಕಾರಿಗಳಿಗೆ ಕಾರ್ಯಾಗಾರ: ಅಧಿಕಾರಿಗಳು ಸಂಘಟಿತರಾಗಿ ಕಾರ್ಯನಿರ್ವಹಿಸಿದಲ್ಲಿ ಮಾತ್ರ ಬಾಲ್ಯ ವಿವಾಹ ತಡೆಯಲು ಸಾಧ್ಯ

ಕಲಬುರಗಿ,ಫೆ.28:  ರಾಜ್ಯದಲ್ಲಿ ಸಾಮಾಜಿಕ ಪಿಡುಗಾಗಿರುವ ಬಾಲ್ಯ ವಿವಾಹ ತಡೆಯಬೇಕೆಂದರೆ ಮಕ್ಕಳ ಸಂಬಂಧಿತ ಎಲ್ಲಾ ಇಲಾಖೆಗಳ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸುವುದು ತುಂಬಾ ಅವಶ್ಯಕವಾಗಿದೆ ಎಂದರು ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ಆಯೋಗದ ಅಧ್ಯಕ್ಷ ನಾಗಣಗೌಡ ಕೆ. ಹೇಳಿದರು. ಶುಕ್ರವಾರ ಇಲ್ಲಿನ ಗುಲಬರ್ಗಾ ವಿಶ್ವವಿದ್ಯಾಲಯದ ಮಹಾತ್ಮಗಾಂಧಿ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ಆಯೋಗವು ಮಕ್ಕಳ ರಕ್ಷಣಾ ನಿರ್ದೇಶನಾಲಯ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಜಿಲ್ಲಾ ಮಕ್ಕಳ

ವಿಜ್ಞಾನ ವಸ್ತು ಪ್ರದರ್ಶನ ಪ್ರಯೋಗಗಳು ವಿಜ್ಞಾನ ಕಲಿಕೆಗೆ ಅತಿ ಪರಿಣಾಮಕಾರಿ; ಸೇಡಂಕಾರ್

ಮಕ್ಕಳಿಗೆ ಪ್ರಯೋಗಗಳ ಮೂಲಕ ವಿಜ್ಞಾನ ಕಲಿಕೆ ಅತಿ ಪರಿಣಾಮಕಾರಿಯಾಗಿದೆ ಎಂದು ತಾಲ್ಲೂಕಿನ ಚೆಪೇಟ್ಲಾ  ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ.  ಮುಖ್ಯ ಶಿಕ್ಷಕರಾದ  ಮಲ್ಲಿಕಾರ್ಜುನ ಸೇಡಂಕಾರ್  ಅಭಿಪ್ರಾಯಪಟ್ಟರು. ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಹಾಗೂ ಸಾಂಸ್ಕೃತಿಕ ಸಂಘ ಆಶ್ರಯದಲ್ಲಿ  ಅಗಸ್ತ್ಯ ಅಂತರಾಷ್ಟ್ರೀಯ ಪ್ರತಿಷ್ಠಾನದ ವತಿಯಿಂದ ಶುಕ್ರವಾರ ಹಮ್ಮಿಕೊಂಡಿದ್ದ ವಿಜ್ಞಾನ ವಸ್ತು ಪ್ರದರ್ಶನ ಹಾಗೂ ಪ್ರಯೋಗಗಳ ಪ್ರದರ್ಶನವನ್ನು ಉದ್ಘಾಟಿಸಿ  ಮಾತನಾಡಿದ ಅವರು  ಒಬ್ಬ ಮನುಷ್ಯ ಹುಟ್ಟಿದಾಗಿನಿಂದ ಸಾಯುವರೆಗೂ ವಿಜ್ಞಾನವನ್ನು ಅವಲಂಬಿಸಿರುತ್ತಾನೆ. ಈಗಿನ ಪೀಳಿಗೆಯ ಮಕ್ಕಳಿಗೆ ಸುಲಭ ಕಲಿಕೆಗೆ ವೈಜ್ಞಾನಿಕ

ಮಾರ್ಚ್ 1 ರಿಂದ ದ್ವಿತೀಯ ಪಿ.ಯು.ಸಿ ಪರೀಕ್ಷೆ-1 ಪರೀಕ್ಷೆ ಸುಸೂತ್ರವಾಗಿ ನಡೆಸಿ,ಅಹಿತಕರ ಘಟನೆಗೆ ಅವಕಾಶ ಬೇಡ

ಕಲಬುರಗಿ,ಫೆ.28: ಪ್ರಸಕ್ತ 2024-25ನೇ ಶೈಕ್ಷಣಿಕ  ದ್ವಿತೀಯ ಪಿ.ಯು.ಸಿ. ಪರೀಕ್ಷೆ-1 ಇದೇ ಮಾರ್ಚ್ 1 ರಿಂದ 20ರ ವರೆಗೆ ನಡೆಯಲಿದ್ದು, ಜಿಲ್ಲೆಯಾದ್ಯಂತ ಯಾವುದೇ ಅಹಿತಕರ ಘಟನೆಗೆ ಅವಕಾಶ ಮಾಡಿಕೊಡದೇ ಸುಸೂತ್ರವಾಗಿ ಮತ್ತು ಪಾರದರ್ಶಕ ರೀತಿಯಲ್ಲಿ ಪರೀಕ್ಷೆ ನಡೆಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಸೂಚನೆ ನೀಡಿದರು. ಗುರುವಾರ ಇಲ್ಲಿನ ಡಿ.ಸಿ. ಕಚೇರಿ ಸಭಾಂಗಣದಲ್ಲಿ ಪರೀಕ್ಷಾ ಕೇಂದ್ರ ಮುಖ್ಯಸ್ಥರು, ಮಾರ್ಗಾಧಿಕಾರಿಗಳು, ವೀಕ್ಷಕರೊಂದಿಗೆ ಪೂರ್ವಸಿದ್ಧತಾ ಸಭೆ ನಡೆಸಿದ ಅವರು, ವಿದ್ಯಾರ್ಥಿ ಘಟ್ಟದ ಪ್ರಮುಖ ಹಂತದ ಪರೀಕ್ಷೆ ಇದಾಗಿರುವುದರಿಂದ ಎಲ್ಲಿಯೂ ಲೋಪವಾಗದಂತೆ

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ಮಾರ್ಚ್ 1 ರಿಂದ 20ರ ವರೆಗೆ ಹಾಗೂ ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆಗಳು ಮಾರ್ಚ್ 21 ರಿಂದ 04ರ ವರೆಗೆ ನಡೆಯಲಿದೆ

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ಮಾರ್ಚ್ 1 ರಿಂದ 20ರ ವರೆಗೆ ಹಾಗೂ ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆಗಳು ಮಾರ್ಚ್ 21 ರಿಂದ 04ರ ವರೆಗೆ ನಡೆಯಲಿದೆ. ಈ ಹಿನ್ನೆಲೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ವಾರ್ಷಿಕ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಪರೀಕ್ಷೆ ಪ್ರವೇಶ ಪತ್ರವನ್ನು ತೋರಿಸಿ, ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಿದೆ.

ದ್ವಿತೀಯ ಪಿ.ಯು.ಸಿ. ಪರೀಕ್ಷೆ-1: ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ

ಕಲಬುರಗಿ,ಫೆ25.-ಕಲಬುರಗಿ ಜಿಲ್ಲೆಯಾದ್ಯಂತ 2025ರ ಮಾರ್ಚ್ 1 ರಿಂದ ಮಾರ್ಚ್ 20ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ-ಯನ್ನು ಕಲಬುರಗಿ ಜಿಲ್ಲೆಯ ಒಟ್ಟು 51 ಪರೀಕ್ಷಾ ಕೇಂದ್ರಗಳಲ್ಲಿ ಜರುಗಲಿದೆ. ಕಲಬುರಗಿ ನಗರದಲ್ಲಿ 25 ಹಾಗೂ ಜೇವರ್ಗಿ-04, ಆಳಂದ-05, ಅಫಜಲಪುರ-04, ಚಿಂಚೋಳಿ-04, ಚಿತ್ತಾಪುರ-02, ಸೇಡಂ-02, ಕಮಲಾಪುರ-02 ಹಾಗೂ ಶಹಾಬಾದ-03 ಸೇರಿದಂತೆ ಜಿಲ್ಲೆಯ ಒಟ್ಟು 51 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿ.ಯು.ಸಿ. ವಾರ್ಷಿಕ ಪರೀಕ್ಷೆಜರುಗಲಿದೆ. ಪರೀಕ್ಷೆಯನ್ನು ಶಾಂತಿಯುತ ಹಾಗೂ ಸುಸೂತ್ರವಾಗಿ ನಡೆಸಲು ಅನುಕೂಲವಾಗುವಂತೆ ಕಲಬುರಗಿ ಜಿಲ್ಲೆಯಲ್ಲಿನ ಎಲ್ಲಾ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟ‌ರ್