March 13, 2025 10:38 am

ಶಿವಾನಂದ‌ ಮೆಂತೆ, ಸಂಪಾದಕ
ಸುದ್ದಿ ಈ‌ದಿನ‌ ಕನ್ನಡ‌ ದಿನಪತ್ರಿಕೆ

ಸುದ್ದಿ

ಬೈಕ್‌ಗೆ ಇನ್ನೋವಾ ಕಾರು ಡಿಕ್ಕಿಯಾಗಿ 2 ವರ್ಷದ ಮಗು ಸೇರಿ ನಾಲ್ವರು ಸಾವು

ಬಂಗಾರಪೇಟೆ, ಮಾ.4 ವೇಗವಾಗಿ ಬಂದ ಇನ್ನೋವಾ ಕಾರು ಚಾಲಕನ ನಿಯಂತ್ರಣ ತಪ್ಪಿ ಎದುರಿಗೆ ಬರುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ 2 ವರ್ಷದ ಮಗು ಸೇರಿದಂತೆ ನಾಲ್ವರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿರುವ ಘಟನೆ ಚೆನ್ನೈ-ಬೆಂಗಳೂರು ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ರಾತ್ರಿ ನಡೆದಿದೆ. ಕಾರಿನಲ್ಲಿದ್ದ ಕೆಜಿಎಫ್ ತಾಲೂಕಿನ ಕಮ್ಮಸಂದ್ರ ಗ್ರಾಮದ ಮಹೇಶ (45), ಉದ್ವಿತ (2), ರತ್ನಮ್ಮ (60) ಹಾಗೂ ಬೈಕ್ ಸವಾರ ದುರ್ದೈವಿಗಳಾಗಿದ್ದಾರೆ. ಮೃತ ಘಟನೆಯಲ್ಲಿ ಸುಶ್ಮಿತಾ, ವಿರುತ, ಸುಜಾತ ಸುನಿಲ್ ಎಂಬ ನಾಲ್ವರಿಗೆ

ತಂಬಾಕು ಸೇವನೆಯನ್ನು ನಿಯಂತ್ರಿಸಿ ಆರೋಗ್ಯ ಕಾಪಾಡಿಕೊಳ್ಳಬೇಕ ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ

ಕಲಬುರಗಿ: 04.ಮಾ.25 : ತಂಬಾಕು ಸೇವನೆಯನ್ನು ನಿಯಂತ್ರಿಸಿ     ವ್ಯಕ್ತಿಯು ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು. ಜತೆಗೆ ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ನಿರ್ವಹಿಸಬೇಕೆಂದು ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ಅವರು ಹೇಳಿದರು. ಮಂಗಳವಾರದAದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿಯ ಸಭೆಯಲ್ಲಿ  ತಂಬಾಕು ಸೇವನೆಯನ್ನು ಮಾಡಿ ಸಾರ್ವಜನಿಕ ಸ್ಥಳಗಳಲ್ಲಿ ಸರ್ಕಾರಿ ಕಚೇರಿಗಳಲ್ಲಿ ಉಗುಳಿದರೆ ಅಲ್ಲಿನ ಸ್ವಚ್ಚತೆಯನ್ನು ಅಲ್ಲಿನ ಜನರು ಕಾಪಾಡುವರಾರು. ಪ್ರತಿಯೊಬ್ಬ ಸಾರ್ವಜನಿಕರು ಸ್ವಚ್ಚತೆಗೆ ಆದ್ಯತೆಯನ್ನು ನೀಡಿ ತಮ್ಮ ಆರೋಗ್ಯವನು ಕಾಪಾಡಿಕೊಳ್ಳಬೇಕು

ಮಾರ್ಚ್ 15 ರವರೆಗೆ ಪುಸ್ತಕ ಖರೀದಿಗಾಗಿ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ ವಿಸ್ತರಣೆ

ಕಲಬುರಗಿ,04.ಮಾ.25.-ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಮ್ಯಾಕ್ರೋ ಅನುದಾನದಲ್ಲಿ ಕಲಬುರಗಿ ಜಿಲ್ಲೆಯ ಸ್ಥಳೀಯ ಲೇಖಕ, ಲೇಖಕ/ಪ್ರಕಾಶಕರು ಪ್ರಕಟಿಸಿರುವ ಪುಸ್ತಕಗಳ ಖರೀದಿಗಾಗಿ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕವನ್ನು 2025ರ ಮಾರ್ಚ್ 15ರ ಸಂಜೆ 5.30 ಗಂಟೆಯವರೆಗೆ ವಿಸ್ತರಿಸಲಾಗಿದೆ ಎಂದು ಕಲಬುರಗಿ ಜಿಲ್ಲಾ ಮಟ್ಟದ ಪುಸ್ತಕ ಆಯ್ಕೆ ಸಮಿತಿಯ ಕಾರ್ಯದರ್ಶಿಗಳು ತಿಳಿಸಿದ್ದಾರೆ. ಈ ಹಿಂದೆ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕವನ್ನು 02-03-2025 ರಂದು ನಿಗದಿಪಡಿಸಲಾಗಿತ್ತು. ಕಲಬುರಗಿ ಜಿಲ್ಲೆಯ ಸ್ಥಳೀಯ ಲೇಖಕರು ಪುಸ್ತಕ ಸಲ್ಲಿಸುವ ಕೊನೆಯ ದಿನಾಂಕವನ್ನು ಮುಂದೂಡುವಂತೆ ಕಲಬುರಗಿ ಕ.ಕ.ಪ್ರ.ಅ.ಮಂಡಳಿ ಕಾರ್ಯದರ್ಶಿಗಳಿಗೆ

ಬೀದರ್‌ನ ಕರ್ನಾಟಕ ಕಾಲೇಜಿನಲ್ಲಿ ನಡೆದ ಒಂದು ದಿನದ ರಾಷ್ಟ್ರೀಯ ಸಮ್ಮೇಳನ.

ಬೀದರ್‌ನ ಕರ್ನಾಟಕ ಕಾಲೇಜಿನ ಸಭಾಂಗಣದಲ್ಲಿ ಗುರುವಾರ ಭಾರತೀಯ ಇಂಗ್ಲೀಷ್ ಸಾಹಿತ್ಯ ಮತ್ತು ರಾಷ್ಟ್ರೀಯ: ಗುರುತು, ಸಂಸ್ಕೃತಿ ಮತ್ತು ರಾಜಕೀಯ ಕುರಿತು ಒಂದು ದಿನದ ರಾಷ್ಟ್ರೀಯ ಸಮ್ಮೇಳನವನ್ನು ಆಯೋಜಿಸಲಾಯಿತು. ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ, ಕರ್ನಾಟಕ ರಾಷ್ಟ್ರೀಯ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಬಿ.ಜಿ.ಶೆಟ್ಕರ್ ನಮ್ಮ ದೇಶವು ಜಾತಿ, ಧರ್ಮ, ಭಾಷೆ, ಲಿಂಗ ಮತ್ತು ಭೌಗೋಳಿಕ ವ್ಯತ್ಯಾಸಗಳನ್ನು ಲೆಕ್ಕಿಸದೆ ಏಕತೆಯಿಂದ ಬದುಕುತ್ತಿದ್ದಾರೆ ಐಕ್ಯತೆಯ ಸಂಕೇತವಾಗಿದೆ. ನಮ್ಮ ಇಂಗ್ಲಿಷ್ ಸಾಹಿತ್ಯದಲ್ಲಿ ಚಿತ್ರಿಸಿದ ಬ್ರದರ್‌ಹುಡ್‌ನಂತೆ ಉಳಿದಿದ್ದೇವೆ ಎಂದರು ವಿಚಾರ ಸಂಕಿರಣದಲ್ಲಿ ಮುಖ್ಯ ಭಾಷಣಕಾರ

ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಬೆಂಗಳೂರು ವತಿಯಿಂದ ಡಾ. ಬಿ ಆರ್ ಅಂಬೇಡ್ಕರ್ ಭವನ ಕಲಬುರಗಿ

ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಬೆಂಗಳೂರು ವತಿಯಿಂದ ಡಾ. ಬಿ ಆರ್ ಅಂಬೇಡ್ಕರ್ ಭವನ ಕಲಬುರಗಿ ವಿಶ್ವವಿದ್ಯಾಲಯದಲ್ಲಿ ನಡೆದ ರಾಷ್ಟ್ರೀಯ ಸಂಗೀತ ನೃತ್ಯ ಮಹೋತ್ಸವದಲ್ಲಿ ಶ್ರೀ ಬಾಬುರಾವ ಕೋಬಾಳ್ ಅವರಿಂದ ಸಂಗೀತ ಕಾರ್ಯಕ್ರಮ ಜರುಗಿತು.ಆಕಾಶವಾಣಿ ಕಲಾವಿದರಾದ ಸಿದ್ದಣ್ಣ ದೇಸಾಯಿ ಕಲ್ಲೂರ್, ಕಲ್ಮೇಶ ಹೂಗಾರ್ ತಬಲಾ ಸಾತ್ ನೀಡಿದರು.ಕು. ಸ್ವಾತಿ ಬಿ ಕೋಬಾಳ್ ಸಹಗಾಯಕಿಯಾಗಿದ್ದರು.

KKCCI (ಕಲ್ಯಾಣ ಕರ್ನಾಟಕ ಚೇಂಬ‌ರ್ ಆಫ್‌ ಕಾಮರ್ಸ & ಇಂಡಸ್ಟ್ರಿ) ಯ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿರುವ “ಶರಣು ಪಪ್ಪಾ” ಅವರಿಗೆ ಅಭಿನಂದನೆಗಳು.

ಬಾಂಬ್ ಬೆದರಿಕೆ: ದಿಢೀರನೆ ಮಾರ್ಗ ಬದಲಾಯಿಸಿದ ನವದೆಹಲಿ ವಿಮಾನ, ರೋಮ್ ನಲ್ಲಿ ತುರ್ತು ಲ್ಯಾಂಡಿಂಗ್

ನವದೆಹಲಿ: ನ್ಯೂಯಾರ್ಕ್ ನ ಜಾನ್ ಎಫ್ ಕೆ ಕೆನಡಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ನವದೆಹಲಿಗೆ ಹೊರಟಿದ್ದ ಅಮೆರಿಕದ ವಿಮಾನಕ್ಕೆ ಬಾಂಬ್ ಬೆದರಿಕೆ ಹಾಕಿದ್ದರಿಂದ ರೋಮ್ ನಲ್ಲಿ ಭಾನುವಾರ ಸಂಜೆ ತುರ್ತು ಭೂ ಸ್ಪರ್ಶ ಮಾಡಿದೆ 280 ಪ್ರಯಾಣಿಕರಿದ್ದ ಬೋಯಿಂಗ್ 787-9 ಗ್ರೀಮ್‌ ಲೈನರ್ ವಿಮಾನ ಕ್ಯಾಸ್ಪಿಯನ್ ಮೇಲೆ ಹೋಗುವ ಸಮುದ್ರದ ಪಶ್ಚಿಮಕ್ಕೆ ಮೊದಲು ಇಟಲಿಯ ಕಡೆಗೆ ತನ್ನ ಮಾರ್ಗವನ್ನು ತಿರುಗಿಸಿದೆ ನ್ಯೂಯಾರ್ಕ್ ನಿಂದ ಶನಿವಾರ ರಾತ್ರಿ 8-30ರ ಸಮಯದಲ್ಲಿ ಟೇಕ್ ಆಫ್ ಆದ ವಿಮಾನ ಭಾರತದ ರಾಜಧಾನಿಯತ್ತ

32 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ನೌಕಾಪಡೆ!

ಕೊಲಂಬೊ: ದ್ವೀಪ ರಾಷ್ಟ್ರದ ಪ್ರಾದೇಶಿಕ ಜಲಪ್ರದೇಶಕ್ಕೆ ನುಗ್ಗಿದ ಅರೋಪದ ಮೇಲೆ 32  ಭಾರತೀಯ ಮೀನುಗಾರರನ್ನು ಬಂಧಿಸಿದ್ದಾರೆ ಮತ್ತು 5 ಮೀನುಗಾರಿಕಾ ದೋಣಿಗಳನ್ನು ಶ್ರೀಲಂಕಾ ಅಧಿಕಾರಿಗಳು ಭಾನುವಾರ ವಶಪಡಿಸಿಕೊಂಡಿದ್ದಾರೆ ಎಂದು ನೌಕಾಪಡೆ ತಿಳಿಸಿದೆ. ಮನ್ನಾರ್‌ನ ಉತ್ತರದ ಸಮುದ್ರ ಪ್ರದೇಶದಲ್ಲಿ ಕಾರ್ಯಾಚರಣೆಯ ಸಂದರ್ಭದಲ್ಲಿ ಮೀನುಗಾರರನ್ನು ಬಂಧಿಸಲಾಗಿದೆ ಎಂದು ಶ್ರೀಲಂಕಾ ನೌಕಾಪಡೆ ಹೇಳಿಕೆಯಲ್ಲಿ ತಿಳಿಸಿದೆ. ‘ಶ್ರೀಲಂಕಾದ ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗ ಐದು ಮೀನುಗಾರಿಕಾ ದೋಣಿಗಳನ್ನು ವಶಪಡಿಸಿಕೊಳ್ಳಲಾಗಿದೆ ಮತ್ತು 32 ಭಾರತೀಯ ಮೀನುಗಾರರನ್ನು ಬಂಧಿಸಲಾಗಿದೆ’ ಎಂದು ಹೇಳಿಕೆ ತಿಳಿಸಿದೆ. ಇತರರ ಅಕ್ರಮ ಮೀನುಗಾರಿಕೆಯನ್ನು ತಡೆಯಲು

ಪ್ರಯಾಗ್ ರಾಜ್‌ನ ಮಹಾಕುಂಭಮೇಳಕ್ಕೆ ತೆರಳಿ ವಾಪಸ್ ಬರುವಾಗ ಭೀಕರ ಅಪಘಾತ: ಬೆಳಗಾವಿಯ 6 ಮಂದಿ ಸಾವು

ಬೆಳಗಾವಿ.ಫೆ.24-ಪ್ರಯಾಗ್ ರಾಜ್‌ನ ಮಹಾಕುಂಭಮೇಳಕ್ಕೆ ತೆರಳಿ ವಾಪಸ್ ಬರುವಾಗ ಗೋಕಾಕ್‌ನ ಆರು ಮಂದಿ ಮಧ್ಯಪ್ರದೇಶದ ಜಬಲಪೂರ ಪೆಹರಾ ಟೋಲ್ ನಾಕಾ ಬಳಿ ಇಂದು ನಸುಕಿನಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಲಕ್ಷ್ಮಿ ಬಡಾವಣೆ ನಿವಾಸಿಗಳಾದ ಬಾಲಚಂದ್ರ ಗೌಡರ 50), ಸುನಿಲ್ (45), ಬಸವರಾಜ್ (63), ಬಸವರಾಜ್ ದೊಡಮಾಳ್ (49), ಈರಣ್ಣ ಶೇಬಿನಶೆಟ್ಟಿ (27), ವಿರೂಪಾಕ್ಷ ಗುಮತಿ (61) ಮೃತರು ದುರ್ದೈವಿಗಳು, ಗಾಯಗೊಂಡ ಮುಸ್ತಾಕ್ ಶಿಂಧಿಕುರಬೇಟ, ಸದಾಶಿವನನ್ನು ಸ್ಥಳೀಯ ಆಸ್ಪತ್ರೆಗೆ