June 15, 2025 2:47 pm

ಶಿವಾನಂದ‌ ಮೆಂತೆ, ಸಂಪಾದಕ
ಸುದ್ದಿ ಈ‌ದಿನ‌ ಕನ್ನಡ‌ ದಿನಪತ್ರಿಕೆ

Home » ಕ್ರೀಡೆ » IND vs PAK: ಭಾರತ ಪೇಪರ್ನಲ್ಲಷ್ಟೇ ಬಲಿಷ್ಠ, ಪಾಕಿಸ್ತಾನ್ ಗೆದ್ದೇ ಗೆಲ್ಲುತ್ತೆ: ಅಮೀರ್

IND vs PAK: ಭಾರತ ಪೇಪರ್ನಲ್ಲಷ್ಟೇ ಬಲಿಷ್ಠ, ಪಾಕಿಸ್ತಾನ್ ಗೆದ್ದೇ ಗೆಲ್ಲುತ್ತೆ: ಅಮೀರ್

India vs Pakistan: ದುಬೈ ಇಂಟರ್ನ್ಯಾಷನಲ್ ಸ್ಟೇಡಿಯಂನಲ್ಲಿ ಇಂದು (ಫೆ.23) ನಡೆಯಲಿರುವ ಚಾಂಪಿಯನ್ಸ್ ಟ್ರೋಫಿಯ 5ನೇ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಮುಖಾಮುಖಿಯಾಗಲಿದೆ. ಈ ಮ್ಯಾಚ್ನಲ್ಲಿ ಟೀಮ್ ಇಂಡಿಯಾ ಗೆದ್ದರೆ ಸೆಮಿಫೈನಲ್ಗೇರುವುದು ಬಹುತೇಕ ಖಚಿತವಾಗಲಿದೆ. ಅತ್ತ ಪಾಕ್ ತಂಡ ಸೋತರೆ ಟೂರ್ನಿಯಿಂದ ಹೊರಬೀಳುವುದು ಸಹ ಬಹುತೇಕ ಖಚಿತವಾಗಲಿದೆ.

ಭಾರತ ಹಾಗೂ ಪಾಕಿಸ್ತಾನ್ ನಡುವಣ ಹೈವೋಲ್ಟೇಜ್ ಪಂದ್ಯಕ್ಕೆ ಕೌಂಟ್ ಡೌನ್ ಶುರುವಾಗಿದೆ. ದುಬೈನ ಇಂಟರ್ನ್ಯಾಷನಲ್ ಸ್ಟೇಡಿಯಂನಲ್ಲಿ ಇಂದು ನಡೆಯಲಿರುವ ಚಾಂಪಿಯನ್ಸ್ ಟ್ರೋಫಿಯ 5ನೇ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿಗಳು ಮುಖಾಮುಖಿಯಾಗಲಿದ್ದಾರೆ. ಈ ಕುತೂಹಲಕಾರಿ ಪಂದ್ಯದಲ್ಲಿ ಯಾರು ಗೆಲ್ಲಲಿದ್ದಾರೆ ಎಂಬ ಚರ್ಚೆಗಳು ಜೋರಾಗಿದ್ದು, ಇದರ ನಡುವೆ ಪಾಕಿಸ್ತಾನ್ ತಂಡದ ಮಾಜಿ ವೇಗಿ ಮೊಹಮ್ಮದ್ ಅಮೀರ್ ನೀಡಿರುವ ಹೇಳಿಕೆ ಭಾರೀ ವೈರಲ್ ಆಗಿದೆ.

ಚಾನೆಲ್ ಚರ್ಚೆಯೊಂದರಲ್ಲಿ ಕಾಣಿಸಿಕೊಂಡ ಮೊಹಮ್ಮದ್ ಅಮೀರ್, ಈ ಬಾರಿ ಪಾಕಿಸ್ತಾನ್ ತಂಡ ಗೆದ್ದೇ ಗೆಲ್ಲುತ್ತದೆ ಎಂದು ಭವಿಷ್ಯ ನುಡಿದಿದ್ದಾರೆ. ಭಾರತ ತಂಡವು ಬಲಿಷ್ಠವಾಗಿರುವುದು ಪೇಪರ್ನಲ್ಲಿ ಅಷ್ಟೇ. ಟೀಮ್ ಇಂಡಿಯಾವನ್ನು ಸೋಲಿಸುವ ಸಾಮರ್ಥ್ಯ ಪಾಕಿಸ್ತಾನ್ ತಂಡಕ್ಕಿದೆ ಎಂದು ಅವರು ಹೇಳಿದ್ದಾರೆ.

ಭಾರತ ತಂಡವು ಕಾಗದದ ಮೇಲೆ ಬಲಿಷ್ಠವಾಗಿ ಕಾಣುತ್ತದೆ. ದ್ವಿಪಕ್ಷೀಯ ಸರಣಿಯಲ್ಲಿ ಅವರ ಪ್ರದರ್ಶನವನ್ನು ನೋಡಿದರೆ, ಅವರು ಕೂಡ ಉತ್ತಮವಾಗಿ ಆಡಿದ್ದಾರೆ. ಆದರೆ ಭಾರತ ತಂಡವು ಬಾಂಗ್ಲಾದೇಶ್ ವಿರುದ್ಧ ಆಡಿದ ಮೊದಲ ಪಂದ್ಯದಲ್ಲಿ ಬಹಳಷ್ಟು ತಪ್ಪುಗಳನ್ನು ಮಾಡಿದೆ. ಈಗ ಪಾಕಿಸ್ತಾನದೊಂದಿಗೆ ಒತ್ತಡದ ಪಂದ್ಯ ಆಡಬೇಕಿದೆ.

ಈ ಒತ್ತಡದ ನಡುವೆ ಟೀಮ್ ಇಂಡಿಯಾ ಅದೇ ತಪ್ಪುಗಳನ್ನು ಪುನರಾವರ್ತಿಸಬಹುದು. ಹೀಗಾಗಿ ಭಾರತ ವಿರುದ್ಧ ಪಾಕಿಸ್ತಾನ್ ತಂಡ ಗೆಲ್ಲುವ ಸಾಧ್ಯತೆ ಹೆಚ್ಚಿದೆ ಎಂದು ಮೊಹಮ್ಮದ್ ಅಮೀರ್ ಹೇಳಿದ್ದಾರೆ.

ಪಾಕಿಸ್ತಾನ್ ತಂಡವು ತನ್ನ ಮೊದಲ ಪಂದ್ಯದಲ್ಲಿ ಕಳಪೆ ಪ್ರದರ್ಶನ ನೀಡಿದ್ದರೂ, ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಪ್ರದರ್ಶನ ನೀಡಲಿದೆ. ಈ ಮೂಲಕ ಭಾರತ ತಂಡವನ್ನು ಹಿಂದಿಕ್ಕಿ ಸೆಮಿಫೈನಲ್ಗೇರುವ ವಿಶ್ವಾಸವನ್ನು ಮೊಹಮ್ಮದ್ ಅಮೀರ್ ವ್ಯಕ್ತಪಡಿಸಿದ್ದಾರೆ.

ಅಂದಹಾಗೆ ಮೊಹಮ್ಮದ್ ಅಮೀರ್ 2017ರ ಚಾಂಪಿಯನ್ಸ್ ಟ್ರೋಫಿ ಫೈನಲ್ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಟೀಮ್ ಇಂಡಿಯಾ ವಿರುದ್ಧ ನಡೆದ ಅಂತಿಮ ಪಂದ್ಯದಲ್ಲಿ ಫಖರ್ ಝಮಾನ್ (114) ಶತಕ ಬಾರಿಸಿದರೆ, ಮೊಹಮ್ಮದ್ ಅಮೀರ್ 6 ಓವರ್ಗಳಲ್ಲಿ ಕೇವಲ 16 ರನ್ ನೀಡಿ 3 ವಿಕೆಟ್ ಕಬಳಿಸಿ ಮಿಂಚಿದ್ದರು.

ಇದೀಗ ಉಭಯ ತಂಡಗಳು 8 ವರ್ಷಗಳ ಬಳಿಕ ಮತ್ತೆ ಚಾಂಪಿಯನ್ಸ್ ಟ್ರೋಫಿಯಲ್ಲಿ ಮುಖಾಮುಖಿಯಾಗುತ್ತಿದೆ. ಈ ಬಾರಿ ಕೂಡ ಭಾರತ ತಂಡವನ್ನು ಪಾಕಿಸ್ತಾನ್ ಸೋಲಿಸಲಿದೆ ಎಂದು ಮೊಹಮ್ಮದ್ ಅಮೀರ್ ಭವಿಷ್ಯ ನುಡಿದಿದ್ದಾರೆ.

Share This Article

Facebook
X
WhatsApp
Telegram

Leave a Reply

Your email address will not be published. Required fields are marked *

Cricket Live

Stock Market

Astrology

Gold & Silver Price